Charanjit Singh Channi: ಪಂಜಾಬ್ನಲ್ಲಿ ಮತದಾನ ಪ್ರಾರಂಭಕ್ಕೂ ಮೊದಲು ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಚರಣಜಿತ್ ಸಿಂಗ್ ಛನ್ನಿ
ಇಂದು ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ (Punjab Assembly Election 2022) ನಡೆಯುತ್ತಿದೆ. ಮುಂಜಾನೆ 7ಗಂಟೆಯಿಂದ ಮತದಾನ ಶುರುವಾಗಿದೆ. ಹೀಗೆ ಮತ ಚಲಾವಣೆ ಪ್ರಾರಂಭಕ್ಕೂ ಮೊದಲು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಛನ್ನಿ (Charanjit Singh Channi)ಖರಾರ್ನಲ್ಲಿರುವ ಕಟಲ್ಗಢ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಚಮ್ಕೌರ್ ಸಾಹೀಬ್ ಮತ್ತು ಭದೌರ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ಛನ್ನಿ, ಮುಂದಿನ ಅವಧಿಗೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಇಂದು ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಛನ್ನಿ, ಸಿಕ್ಕ ಸ್ವಲ್ಪ ಸಮಯದಲ್ಲೇ ಪಂಜಾಬ್ ಅಭಿವೃದ್ಧಿಗಾಗಿ […]
ಇಂದು ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ (Punjab Assembly Election 2022) ನಡೆಯುತ್ತಿದೆ. ಮುಂಜಾನೆ 7ಗಂಟೆಯಿಂದ ಮತದಾನ ಶುರುವಾಗಿದೆ. ಹೀಗೆ ಮತ ಚಲಾವಣೆ ಪ್ರಾರಂಭಕ್ಕೂ ಮೊದಲು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಛನ್ನಿ (Charanjit Singh Channi)ಖರಾರ್ನಲ್ಲಿರುವ ಕಟಲ್ಗಢ್ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಚಮ್ಕೌರ್ ಸಾಹೀಬ್ ಮತ್ತು ಭದೌರ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ಛನ್ನಿ, ಮುಂದಿನ ಅವಧಿಗೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಇಂದು ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಛನ್ನಿ, ಸಿಕ್ಕ ಸ್ವಲ್ಪ ಸಮಯದಲ್ಲೇ ಪಂಜಾಬ್ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಸಾಕಷ್ಟು ಶ್ರಮ ವಹಿಸಿದೆ. ಉಳಿದಿದ್ದೆಲ್ಲ ಜನರಿಗೆ ಬಿಟ್ಟಿದ್ದು. ಅವರ ಇಚ್ಛೆಯಂತೆ ಎಲ್ಲವೂ ಆಗುತ್ತದೆ ಎಂದು ಹೇಳಿದ್ದಾರೆ.
ನಾನಿಲ್ಲಿ ಬಂದು ಪಂಜಾಬ್ ಮತ್ತು ಇಲ್ಲಿನ ಜನರ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ನಾವು ನಮ್ಮೆಲ್ಲ ಪ್ರಯತ್ನಗಳನ್ನೂ ಮಾಡಿದ್ದೇವೆ. ಇನ್ನುಳಿದಿದ್ದೆಲ್ಲ ಜನರು, ದೇವರ ಇಚ್ಛೆಯಂತೆ ಆಗುತ್ತದೆ ಎಂದಿದ್ದಾರೆ. ಪಂಜಾಬ್ನಲ್ಲಿ ಒಟ್ಟು 117 ವಿಧಾನಸಭಾ ಕ್ಷೇತ್ರದಿಂದ 1304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಛನ್ನಿ, ಆಮ್ ಆದ್ಮಿ ಪಾರ್ಟಿಯ ಭಗವಂತ್ ಮನ್, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಮಾಜಿ ಮುಖ್ಯಮಂತ್ರಿಗಳಾದ ಅಮರಿಂದರ್ ಸಿಂಗ್, ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಇತರರು ಇಂದು ಕಣದಲ್ಲಿದ್ದಾರೆ.