ಅಮರಿಂದರ್ ಸಿಂಗ್ ದುರಹಂಕಾರಿ ರಾಜ; ಪಂಜಾಬ್ ಲೋಕ ಕಾಂಗ್ರೆಸ್-ಬಿಜೆಪಿ ಮೈತ್ರಿ ಬಗ್ಗೆ ನವಜೋತ್ ಸಿಂಗ್ ಸಿಧು ವಾಗ್ದಾಳಿ

"ಸಿಧುಗೆ ಬಾಗಿಲು ಮುಚ್ಚಲಾಗಿದೆ ಎಂದು ಕ್ಯಾಪ್ಟನ್ ಹೇಳಿದರು. ಆದರೆ ಅವರು ಇಂದು ಮನೆಯಲ್ಲಿ ಕುಳಿತು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ನೆಕ್ಕುತ್ತಿದ್ದಾರೆ ಎಂದು ಸಿಧು ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಅಮರಿಂದರ್ ಸಿಂಗ್ ದುರಹಂಕಾರಿ ರಾಜ; ಪಂಜಾಬ್ ಲೋಕ ಕಾಂಗ್ರೆಸ್-ಬಿಜೆಪಿ ಮೈತ್ರಿ ಬಗ್ಗೆ ನವಜೋತ್ ಸಿಂಗ್ ಸಿಧು ವಾಗ್ದಾಳಿ
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 20, 2021 | 7:55 PM

ಚಂಡೀಗಢ: ಪಂಜಾಬ್​​ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ(Assembly elections) ಭಾರತೀಯ ಜನತಾ ಪಕ್ಷ (BJP) ಯೊಂದಿಗೆ ಮೈತ್ರಿ ಮಾಡಿಕೊಂಡ ಕೆಲವೇ ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ (Punjab Congress) ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದರು.  ಸಿಧು  ಮಾಜಿ ಹಿರಿಯ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಅವರನ್ನು “ದುರಹಂಕಾರಿ ರಾಜ” ಎಂದು ಹೇಳಿದ್ದಾರೆ. ಸಿಧುಗೆ ಬಾಗಿಲು ಮುಚ್ಚಲಾಗಿದೆ ಎಂದು ಕ್ಯಾಪ್ಟನ್ ಹೇಳಿದರು. ಆದರೆ ಅವರು ಇಂದು ಮನೆಯಲ್ಲಿ ಕುಳಿತು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ನೆಕ್ಕುತ್ತಿದ್ದಾರೆ ಎಂದು ಸಿಧು ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕಳೆದ ಶುಕ್ರವಾರ ಅಮರಿಂದರ್ ಸಿಂಗ್ ಅವರು ಬಿಜೆಪಿಯೊಂದಿಗೆ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಮೈತ್ರಿ ಮಾಡುವುದಾಗಿ ಘೋಷಿಸಿದರು. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮೈತ್ರಿಯನ್ನು ದೃಢಪಡಿಸಲು ಬಿಜೆಪಿಯ ಚುನಾವಣಾ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದರು.

“ನಾವು ಸಿದ್ಧರಿದ್ದೇವೆ ಮತ್ತು ನಾವು ಈ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ. ಸೀಟು ಹಂಚಿಕೆಯ ನಿರ್ಧಾರವನ್ನು ಸೀಟು-ಸೀಟ್ ಆಧಾರದ ಮೇಲೆ ತೆಗೆದುಕೊಳ್ಳಲಾಗುವುದು, ಗೆಲುವಿಗೆ ಆದ್ಯತೆ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ನಾವು ಗೆಲ್ಲುವುದು ಶೇ 101 ಖಚಿತ ಎಂದು ಅಮರಿಂದರ್ ಸಿಂಗ್ ಬಿಜೆಪಿಯೊಂದಿಗಿನ ಮೈತ್ರಿ ಘೋಷಣೆಯ ನಂತರ ಹೇಳಿದರು.

ಬಿಜೆಪಿಯು ಮೈತ್ರಿಕೂಟದಲ್ಲಿ ಹಿರಿಯ ಪಾಲುದಾರರಾಗುವ ಸಾಧ್ಯತೆಯಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ. ಪಂಜಾಬ್ ಲೋಕ ಕಾಂಗ್ರೆಸ್ 117 ಸ್ಥಾನಗಳಲ್ಲಿ ಕನಿಷ್ಠ 60 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎಂದು ಅವರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಜ್ಯಸಭಾ ಸದಸ್ಯ ಸುಖದೇವ್ ಸಿಂಗ್ ದಿಂಡ್ಸಾ ಅವರ ಅಕಾಲಿ ದಳ (ಸಂಯುಕ್ತ) ಜೊತೆ ಎರಡೂ ಪಕ್ಷಗಳು ಮಾತುಕತೆ ನಡೆಸುತ್ತಿವೆ. ಮುಂಬರುವ ದಿನಗಳಲ್ಲಿ ಸೀಟು ಹಂಚಿಕೆ ಕುರಿತು ಚರ್ಚಿಸಲು ಶೀಘ್ರದಲ್ಲೇ ಸಭೆ ಸೇರುವುದಾಗಿ ಅಮರಿಂದರ್ ಹೇಳಿದ್ದಾರೆ.

2017 ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವಲ್ಲಿ ಸಿಂಗ್ ನಿರ್ಣಾಯಕ ಪಾತ್ರವನ್ನು ವಹಿಸಿದರು ಮತ್ತು ಪಕ್ಷದೊಳಗಿನ ಆಂತರಿಕ ಕಲಹ ಮತ್ತು ಗುಂಪುಗಾರಿಕೆ ಹಾಗೂ ನವಜೋತ್ ಸಿಧು ಅವರೊಂದಿಗಿನ ಭಿನ್ನಾಭಿಪ್ರಾಯಗಳು ಅವರ ನಿರ್ಗಮನಕ್ಕೆ ಕಾರಣವಾಯಿತು. ನವೆಂಬರ್ 2 ರಂದು ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದು ನಂತರ ತಮ್ಮದೇ ಆದ ಪಕ್ಷವನ್ನು ಸ್ಥಾಪಿಸಿದರು.

ಇದನ್ನೂ ಓದಿ: ಪಂಜಾಬ್ ವಿಧಾನಸಭಾ ಚುನಾವಣೆ: ಬಿಜೆಪಿ ಜತೆ ಮೃತ್ರಿಗೆ ಕ್ಯಾ. ಅಮರಿಂದರ್ ಸಿಂಗ್ ನಿರ್ಧಾರ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್