ಬಿಜೆಪಿಯೊಂದಿಗೆ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧೆ, ಶೀಘ್ರದಲ್ಲೇ ಮೈತ್ರಿ ಘೋಷಣೆ: ಅಮರಿಂದರ್ ಸಿಂಗ್

Amarinder Singh ಚುನಾವಣೆಯ ಮೊದಲು ಸಮಯ ಸಮಸ್ಯೆಯಲ್ಲ. 1980 ರಲ್ಲಿ ಚುನಾವಣೆಗೆ ಕೇವಲ 14 ದಿನಗಳ ಮೊದಲು ಲೋಕಸಭೆ ಚುನಾವಣೆಗೆ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಲಾಯಿತು. ನಾನು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇನೆ ಎಂದಿದ್ದಾರೆ ಅಮರಿಂದರ್ ಸಿಂಗ್.

ಬಿಜೆಪಿಯೊಂದಿಗೆ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧೆ, ಶೀಘ್ರದಲ್ಲೇ ಮೈತ್ರಿ ಘೋಷಣೆ: ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 06, 2021 | 4:07 PM

ಚಂಡೀಗಡ:  ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh) ಅವರು ತಮ್ಮ ಐದು ದಶಕಗಳ ಪಕ್ಷವಾದ ಕಾಂಗ್ರೆಸ್‌ನಿಂದ ಹೊರಬಂದು ಒಂದು ತಿಂಗಳ ನಂತರ ಚಂಡೀಗಡದಲ್ಲಿ(Chandigarh) ಇಂದು ತಮ್ಮ ಹೊಸ ಪಕ್ಷದ ಕಚೇರಿಯನ್ನು ತೆರೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್, ತಮ್ಮ ಪಂಜಾಬ್ ಲೋಕ್ ಕಾಂಗ್ರೆಸ್ (Punjab Lok Congress) ಬಿಜೆಪಿಯ ಸಹಭಾಗಿತ್ವದಲ್ಲಿ ಪಂಜಾಬ್ ಚುನಾವಣೆಯಲ್ಲಿ(Punjab election) ಸ್ಪರ್ಧಿಸಲಿದೆ ಮತ್ತು ಶೀಘ್ರದಲ್ಲೇ ಮೈತ್ರಿ ಘೋಷಿಸಲಾಗುವುದು ಎಂದು ಹೇಳಿದರು. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಚುನಾವಣೆಗೆ ಸೀಟು ಹಂಚಿಕೆ ಕುರಿತು ಮಾತುಕತೆಗಳನ್ನು ವಿವರಿಸಲು ಅವರು ನಿರಾಕರಿಸಿದ್ದಾರೆ. “ನಮ್ಮ ಪಕ್ಷ, ಸುಖದೇವ್ ದಿಂಡ್ಸಾ(Sukhdev Dhindsa) ಅವರ ಪಕ್ಷ ಮತ್ತು ಬಿಜೆಪಿ ಸೀಟು ಹಂಚಿಕೆಯ ವ್ಯವಸ್ಥೆಯನ್ನು ಹೊಂದಿರುತ್ತದೆ. ನಾನು ನಿಮಗೆ ನಿಖರವಾದ ಸಂಖ್ಯೆಯನ್ನು ಹೇಳಲಾರೆ” ಎಂದು ಕ್ಯಾಪ್ಟನ್ ಹೇಳಿದರು. “ನಾವು ತಾತ್ವಿಕ ಮೈತ್ರಿಯನ್ನು ಹೊಂದಿದ್ದೇವೆ”. ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಆಯ್ಕೆಯನ್ನು ಎಲ್ಲ ಮೈತ್ರಿ ಪಕ್ಷಗಳು ನಿರ್ಧರಿಸುತ್ತವೆ ಎಂದಿದ್ದಾರೆ. ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಅವರು ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಚುನಾವಣೆಯ ಮೊದಲು ಸಮಯ ಸಮಸ್ಯೆಯಲ್ಲ. 1980 ರಲ್ಲಿ ಚುನಾವಣೆಗೆ ಕೇವಲ 14 ದಿನಗಳ ಮೊದಲು ಲೋಕಸಭೆ ಚುನಾವಣೆಗೆ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಲಾಯಿತು. ನಾನು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇನೆ ಎಂದಿದ್ದಾರೆ ಅಮರಿಂದರ್ ಸಿಂಗ್.

ಅಮರಿಂದರ್ ಸಿಂಗ್ ಅವರು ತಮ್ಮ ಪ್ರತಿಸ್ಪರ್ಧಿ ನವಜೋತ್ ಸಿಂಗ್ ಸಿಧು ಅವರ ಆಶಯಕ್ಕೆ ಒಲವು ತೋರಿ, ಪಕ್ಷವು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿದ ವಾರಗಳ ನಂತರ ಅವರು ಕಾಂಗ್ರೆಸ್ ತೊರೆದಿದ್ದರು.ಅವರು ತಮ್ಮ ಹೊಸ ಪಕ್ಷವನ್ನ ಘೋಷಿಸುವ ಮೊದಲೇ, ಅವರು ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿಯೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದ್ದರು. ರೈತರು ಪ್ರತಿಭಟನೆ ನಡೆಸುತ್ತಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಮ್ಮೆಟ್ಟಿಸುವುದು ಅವರ ಒಂದು ಷರತ್ತು ಆಗಿತ್ತು ಎಂದು ಪತ್ರಿಕೆಗಳು ವರದಿ ಮಾಡಿದ್ದವು.’

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ನಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು. ಆದರೆ ಸಂಸತ್ ನಲ್ಲಿ ತಮ್ಮ ಬೆಳೆಗೆ ಕನಿಷ್ಠ ಬೆಲೆಯನ್ನು ಖಾತರಿಪಡಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.  ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗಿದೆ. ಉಳಿದ ಸಮಸ್ಯೆಗಳಿಗೆ ಪ್ರಧಾನಿ ಸಮಿತಿಯನ್ನು ಘೋಷಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗಾಗಿ (ಕೃಷಿ ಸಚಿವ ನರೇಂದ್ರ) ತೋಮರ್ ಸಂಸತ್ ನಲ್ಲಿ ಸಮಿತಿ ರಚಿಸುವುದಾಗಿ ಹೇಳಿದ್ದಾರೆ. ಈಗ ರೈತರು ಸರ್ಕಾರದ ಆ ಬದ್ಧತೆಯನ್ನು ಒಪ್ಪಿಕೊಳ್ಳಬೇಕು ಎಂದು ನಾನು ರೈತರಿಗೆ ಮನವಿ ಮಾಡಿರುವುದಾಗಿ ಸಿಂಗ್ ಹೇಳಿದರು.

ಇದನ್ನೂ ಓದಿ: ಕೇಜ್ರಿವಾಲ್ ನಿವಾಸದ ಹೊರಗೆ ದೆಹಲಿಯ ಅತಿಥಿ ಶಿಕ್ಷಕರ ಪ್ರತಿಭಟನೆಯಲ್ಲಿ ನವಜೋತ್ ಸಿಂಗ್ ಸಿಧು ಭಾಗಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್