WWE ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ; ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದರು, ಆಮ್​ ಆದ್ಮಿ ಪಾರ್ಟಿ​ ಪರ ಪ್ರಚಾರ ನಡೆಸಿದ್ದರು !

2017ರಲ್ಲಿ ಪಂಜಾಬ್​ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ದಿ ಗ್ರೇಟ್​ ಖಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆ ಚುನಾವಣೆಯಲ್ಲಿ ಆಪ್​ ಪರ ಪ್ರಚಾರವನ್ನೂ ನಡೆಸಿದ್ದರು.

WWE ಮಾಜಿ ಕುಸ್ತಿಪಟು ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ; ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದರು, ಆಮ್​ ಆದ್ಮಿ ಪಾರ್ಟಿ​ ಪರ ಪ್ರಚಾರ ನಡೆಸಿದ್ದರು !
ದಿ ಗ್ರೇಟ್ ಖಲಿ
Follow us
TV9 Web
| Updated By: Lakshmi Hegde

Updated on:Feb 10, 2022 | 6:03 PM

ವೃತ್ತಿಪರ ಕುಸ್ತಿಪಟು ಮತ್ತು ಮಾಜಿ ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್​, ದಿ ಗ್ರೇಟ್ ಖಲಿ (The Great Khali) ಎಂದೇ ಖ್ಯಾತರಾಗಿದ್ದ ದಲೀಪ್ ಸಿಂಗ್​ ರಾಣಾ(Wrestler Dalip Singh Rana) ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದಲೀಪ್​ ಸಿಂಗ್ ಅವರು ಇಂದು ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನ 1ಗಂಟೆ ಹೊತ್ತಿಗೆ ಕಮಲ ಪಾಳೆಯ ಸೇರಿದ್ದಾರೆ. ಈ ವೇಳೆ ಉಪಸ್ಥಿತರಿದ್ದ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ದಿ ಗ್ರೇಟ್ ಖಲಿಯವರು ಈ ದೇಶದ ಯುವಕರು ಮತ್ತು ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುವ ಪ್ರಧಾನಿ ಮೋದಿಯವರ ಪ್ರಯಾಣಕ್ಕೆ ಅವರೂ ಜೊತೆಯಾಗಿದ್ದಕ್ಕೆ ನಾನು ಖಲಿಯವರಿಗೆ ಧನ್ಯವಾದ ಸಲ್ಲಿಸುತ್ತೇನೆ. ದೇಶದ ಎಲ್ಲ ಕ್ಷೇತ್ರಗಳ ಜನರೂ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಖುಷಿ ಸಂಗತಿ ಎಂದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್​ ಸಿಂಗ್​, ಎಂಪಿ ಸುನಿತಾ ದುಗ್ಗಲ್​ ಇತರರು ಇದ್ದರು. 

ಬಿಜೆಪಿ ಸೇರಿದ ಬಳಿಕ ಮಾತನಾಡಿದ ಖಲಿ, ರಾಷ್ಟ್ರದ ಏಳ್ಗೆಗೆ ಆದ್ಯತೆ ನೀಡುವ ಬಿಜೆಪಿಯ ನೀತಿ-ನಿಯಮಗಳಿಂದ ಸ್ಫೂರ್ತಿ ಪಡೆದು, ಪ್ರಭಾವಿತನಾಗಿ ಈ ಪಕ್ಷಕ್ಕೆ ಸೇರಿದ್ದೇನೆ. ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಕೆಲಸಗಳು ನನಗೆ ತುಂಬ ಇಷ್ಟವಾಗಿವೆ. ಅದನ್ನೆಲ್ಲ ನೋಡಿದ ಮೇಲೆ, ಈ ರಾಷ್ಟ್ರದ ಅಭಿವೃದ್ಧಿಯಲ್ಲಿ ನಾನೂ ಕೈಜೋಡಿಸಬೇಕು ಎಂಬ ಬಯಕೆ ಹೆಚ್ಚಾಯಿತು. ಪಕ್ಷದಲ್ಲಿ ನನಗೆ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.  7 ಅಡಿ ಎತ್ತರವಿರುವ, ದೃಢಾಕಾಯ ಹೊಂದಿರುವ ದಿ ಗ್ರೇಟ್ ಖಲಿಗೆ 49 ವರ್ಷ. ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಧಿರೈನಾ ಎಂಬ ಸಣ್ಣ ಪಟ್ಟಣದವರು.WWE ಯಿಂದ ನಿವೃತ್ತರಾದ ಬಳಿಕ ಭಾರತೀಯ ವೃತ್ತಿಪರ ಕುಸ್ತಿ ಪ್ರಚಾರ ಮತ್ತು ತರಬೇತಿ ಸಂಸ್ಥೆಯಾದ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್​ನ್ನು ಸ್ಥಾಪಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದವರಲ್ಲಿ ದಿ ಗ್ರೇಟ್ ಖಲಿ ಕೂಡ ಒಬ್ಬರಾಗಿದ್ದರು. 2020ರಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪಂಜಾಬ್​, ಹರ್ಯಾಣ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿದ್ದ ಅವರು, ಈ ಕೃಷಿ ಕಾಯ್ದೆಗಳಿಂದ ರೈತರು ಸಂಕಷ್ಟಕ್ಕೀಡಾಗುತ್ತಾರೆ. ಕೂಡಲೇ ಕೇಂದ್ರ ಸರ್ಕಾರ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಹೇಳಿದ್ದರು.

2017ರಲ್ಲಿ ಪಂಜಾಬ್​ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ದಿ ಗ್ರೇಟ್​ ಖಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆ ಚುನಾವಣೆಯಲ್ಲಿ ಆಪ್​ ಪರ ಪ್ರಚಾರವನ್ನೂ ನಡೆಸಿದ್ದರು. ಹಾಗೇ, ಈ ಬಾರಿಯ ಪಂಜಾಬ್ ವಿಧಾನಸಭೆ ಚುನಾವಣೆಗೂ ಪೂರ್ವ ದಲೀಪ್ ಸಿಂಗ್ ರಾಣಾ ಮೊದಲು ಭೇಟಿಯಾಗಿದ್ದು ಅರವಿಂದ್ ಕೇಜ್ರಿವಾಲ್​ರನ್ನು. 2021ರ ನವೆಂಬರ್​​ 18ರಂದು ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾಗಿ ತಾವು, ದೆಹಲಿಯಲ್ಲಿ ಆಪ್​ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡಿದ್ದೇನೆ. ಪಂಜಾಬ್​ನಲ್ಲಿ ನಾನು ಆಪ್​ಗೆ ಸಹಕಾರ ನೀಡುತ್ತೇನೆ ಎಂದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಬಿಸಿರಕ್ತದ ಅವಶ್ಯಕತೆಯಿದೆ, ಪಕ್ಷಕ್ಕೆ ಯುವಕರನ್ನು ಕರೆತನ್ನಿ ಎಂದು ಕಾಂಗ್ರೆಸ್ ಯುವ ಮೋರ್ಚಾಗೆ ಹೇಳಿದರು ಡಿಕೆ ಶಿವಕುಮಾರ

Published On - 5:49 pm, Thu, 10 February 22

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್