AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ಎಂದು ಹೇಳಿದೆ.

ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 11, 2023 | 5:22 PM

Share

ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ( Rajasthan assembly election) ದಿನಾಂಕಗಳನ್ನು ಬದಲಾಯಿಸಿದೆ. ನವೆಂಬರ್ 23ರಿಂದ 25ಕ್ಕೆ ಚುನಾವಣೆ ದಿನಾಂಕ ಬದಲಾಯಿಸಿದೆ. ಡಿಸೆಂಬರ್​​ 3ರಂದು ಮತಏಣಿಕೆ ನಡೆಸಲಿದೆ ಎಂದು ಹೇಳಿದೆ. ಈಗಾಗಲೇ ನವೆಂಬರ್ 23ಕ್ಕೆ ರಾಜಸ್ಥಾನ ಚುನಾವಣೆ ಎಂದು ಹೇಳಿತ್ತು. ಆದರೆ  ಚುನಾವಣೆ ದಿನಾಂಕವನ್ನು ಮುಂದಕ್ಕೆ ಹಾಕಿದೆ. ನವೆಂಬರ್ 23ರ ಬದಲು ನವೆಂಬರ್ 25ಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿದೆ.  ನವೆಂಬರ್​ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್‌ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿಕೊಂಡಿದೆ. ಈ ಕಾರಣಕ್ಕೆ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ನವೆಂಬರ್​​ 25ಕ್ಕೆ ನಡೆಸಲು ನಿರ್ಧಾರಿಸಿದೆ.

ಈ ದಿನಾಂಕದಂದು ಸುಮಾರು ಮದುವೆ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಇರುವ ಕಾರಣ ಜನರಿಗೆ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಇದರಿಂದ ಮತದಾನ ಮಾಡಲು ಕಷ್ಟವಾಗಬಹುದು ಹಾಗೂ ಮತಗಟ್ಟೆ ಬರುವವರ ಸಂಖ್ಯೆ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನವೆಂಬರ್​​ 23ರಂದು ನಡೆಯುವ ಚುನಾವಣೆಯನ್ನು ನವೆಂಬರ್​​ 24ಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನುಳಿದ ರಾಜ್ಯಗಳ ಚುನಾವಣೆಗಳಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Wed, 11 October 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್