AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ

Rajasthan assembly election result 2023: ಸಿಎಂ ಅಶೋಕ್ ಗೆಹ್ಲೋಟ್ ಅವರ ಅವರ ಜನಪ್ರಿಯ ಭರವಸೆಗಳನ್ನು ನಿರ್ಲಕ್ಷಿಸಿ, ರಾಜಸ್ಥಾನದ ಜನರು ಬಿಜೆಪಿ ಪರ ಮತ ಹಾಕಿದ್ದಾರೆ ಮತ್ತು ಕೇಸರಿ ಪಡೆಯನ್ನು ಗೆಲ್ಲಿಸಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವೇನು ಎಂಬ ಪ್ರಶ್ನೆಗೆ ರಾಜಕೀಯ ವಿಶ್ಲೇಷಕರು ಹಲವು ಉತ್ತರಗಳನ್ನು ನೀಡಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ
ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ
ಗಣಪತಿ ಶರ್ಮಾ
|

Updated on: Dec 03, 2023 | 3:22 PM

Share

ನವದೆಹಲಿ, ಡಿಸೆಂಬರ್ 3: ರಾಜಸ್ಥಾನ ವಿಧಾನಸಭೆ ಚುನಾವಣೆಯ (Rajasthan assembly election result 2023) ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ (BJP) ಬಹುಮತ ಗಳಿಸುವುದು ಬಹುತೇಕ ದೃಢಪಟ್ಟಿದೆ. ಆಡಳಿತಾರೂಢ ಕಾಂಗ್ರೆಸ್ (Congress) ಸುಮಾರು 70 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಅಶೋಕ್ ಗೆಹ್ಲೋಟ್ (Ashok Gehlot) ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಜನ ಅಧಿಕಾರದಿಂದ ಕೆಳಗಳಿಸಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕಳೆದ 25 ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯ ಮತ್ತೊಮ್ಮೆ ಮುಂದುವರೆದಿದೆ ಮತ್ತು ಕಾಂಗ್ರೆಸ್ ನಂತರ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಆದರೆ ಈ ಬಾರಿ ಕಾಂಗ್ರೆಸ್ ತೀರಾ ಹಿಂದುಳಿದಿದೆ. ಸಿಎಂ ಅಶೋಕ್ ಗೆಹ್ಲೋಟ್ ಅವರ ಅವರ ಜನಪ್ರಿಯ ಭರವಸೆಗಳನ್ನು ನಿರ್ಲಕ್ಷಿಸಿ, ರಾಜಸ್ಥಾನದ ಜನರು ಬಿಜೆಪಿ ಪರ ಮತ ಹಾಕಿದ್ದಾರೆ ಮತ್ತು ಕೇಸರಿ ಪಡೆಯನ್ನು ಗೆಲ್ಲಿಸಿದ್ದಾರೆ. ಅಷ್ಟಕ್ಕೂ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣವೇನು ಎಂಬ ಪ್ರಶ್ನೆಗೆ ರಾಜಕೀಯ ವಿಶ್ಲೇಷಕರು ಹಲವು ಉತ್ತರಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ಆಂತರಿಕ ಕಲಹಗಳು

ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ ಪಕ್ಷದೊಳಗಿನ ಕಚ್ಚಾಟ. ಅನೇಕ ನಾಯಕರು ಬಂಡೆದ್ದಾಗ, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಅವರನ್ನು ಸರಿಯಾಗಿ ನಿಭಾಯಿಸಲಿಲ್ಲ. ಪಕ್ಷದೊಳಗಿನ ಗುಂಪುಗಾರಿಕೆ ಮತ್ತು ಅನೇಕ ಬಂಡಾಯ ನಾಯಕರು ಪಕ್ಷದ ವರ್ಚಸ್ಸನ್ನು ಹಾಳು ಮಾಡಿದರು.

ಸಚಿನ್ ಪೈಲಟ್ ಮತ್ತು ಗೆಹ್ಲೋಟ್ ನಡುವಿನ ಕದನ

ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷವು ಇಡೀ ದೇಶದಲ್ಲಿ ಚರ್ಚೆಯ ವಿಷಯವಾಗಿತ್ತು. ಇಬ್ಬರೂ ನಾಯಕರು ಜವಾಬ್ದಾರಿ ಮರೆತು ಪರಸ್ಪರ ಹೋರಾಟದತ್ತ ಹೆಚ್ಚು ಗಮನಹರಿಸುತ್ತಿರುವುದು ಕಂಡುಬಂದಿತ್ತು. ಸರ್ಕಾರ ರಚನೆಯಾದ ತಕ್ಷಣ ಇಬ್ಬರ ನಡುವಿನ ಜಟಾಪಟಿ ಶುರುವಾಗಿದ್ದು ಮುಗಿಯುವ ಲಕ್ಷಣ ಕಾಣಿಸಲೇ ಇಲ್ಲ. ಹಲವು ಬಾರಿ ಹೈಕಮಾಂಡ್ ಇಬ್ಬರ ಮನವೊಲಿಸಲು ಪ್ರಯತ್ನಿಸಿದರೂ, ಸ್ವತಃ ರಾಹುಲ್ ಗಾಂಧಿ ಕೂಡ ಚುನಾವಣಾ ಪ್ರಚಾರದ ವೇಳೆ ಇಬ್ಬರನ್ನೂ ಒಟ್ಟಿಗೆ ಕರೆತಂದು ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ ಎಂಬ ಸಂದೇಶ ರವಾನಿಸಲು ಯತ್ನಿಸಿದರೂ ಅವರ ಮನಸು ಒಂದಾಗಲಿಲ್ಲ. ಇದು ಜನರಲ್ಲಿ ಪಕ್ಷದ ಬಗ್ಗೆ ಭರವಸೆ ಹೊರಟುಹೋಗಲು ಕಾರಣವಾಯಿತು.

ಅಶೋಕ್ ಗೆಹ್ಲೋಟ್ ಅಹಂಕಾರ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರ ದುರಹಂಕಾರವೂ ಕಾರಣ ಎನ್ನಲಾಗುತ್ತಿದೆ. ಅವರ ಅತಿಯಾದ ಆತ್ಮವಿಶ್ವಾಸ ಮತ್ತು ದುರಹಂಕಾರ ಅವರನ್ನು ಅಧಿಕಾರದಿಂದ ಕೆಳಗಿಳಿಸಿತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಗೆಹ್ಲೋಟ್ ಅವರ ಸಹೋದ್ಯೋಗಿಗಳೇ ಅವರನ್ನು ದುರಹಂಕಾರಿ ಎಂದು ಆರೋಪಿಸಿದ್ದರು. ಕಳೆದ ವರ್ಷ ಸರ್ಕಾರ ರಚನೆಯಾದಾಗಿನಿಂದ ಕಾಂಗ್ರೆಸ್​ನ ಅನೇಕ ಶಾಸಕರು ತಮ್ಮ ಅಭಿಪ್ರಾಯಗಳನ್ನು ಸಿಎಂ ಕೇಳುತ್ತಿಲ್ಲ ಎಂದು ಆರೋಪಿಸಿದ್ದರು.

ಮಹಿಳೆಯರ ಮೇಲಿನ ದೌರ್ಜನ್ಯಗಳು

ರಾಜಸ್ಥಾನ ಚುನಾವಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕೂಡ ಪ್ರಮುಖ ವಿಷಯವಾಗಿತ್ತು. ಮಹಿಳೆಯರ ಮೇಲಿನ ಅನೇಕ ಅಪರಾಧಗಳ ಘಟನೆಗಳು ಚರ್ಚೆಗೆ ಬಂದವು. ಇದರಿಂದಾಗಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಮೂಲೆಗುಂಪು ಮಾಡಿತು. ಗೆಹ್ಲೋಟ್ ಸರ್ಕಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಬಿಜೆಪಿ ಬಿಂಬಿಸಿತು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಕೆಲವು ಘಟನೆಗಳ ಬಗ್ಗೆ ಹೇಳಿಕೆ ನೀಡದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಹುಮತದತ್ತ ಬಿಜೆಪಿ; ಯಾರಾಗ್ತಾರೆ ಸಿಎಂ? ಅತಂತ್ರವಾದರೆ ವಸುಂಧರಾ, ಬಹುಮತ ಬಂದರೆ ಬಾಲಕನಾಥ್ ಸಿಎಂ?

ಪ್ರಶ್ನೆ ಪತ್ರಿಕೆ ಸೋರಿಕೆ

ರಾಜಸ್ಥಾನದಲ್ಲಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್ ಸರ್ಕಾರದ ಮೇಲೆ ಪರಿಣಾಮ ಬೀರಿತು. ಚುನಾವಣೆಯ ಸಮಯದಲ್ಲಿ ಬಿಜೆಪಿ ಈ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತು. ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಯುವಕರ ಕೋಪಕ್ಕೆ ಗೆಹ್ಲೋಟ್ ಗುರಿಯಾಗಬೇಕಾಯಿತು. ಗೆಹ್ಲೋಟ್ ಅವರ ಅಧಿಕಾರಾವಧಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ, ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದವು. ಬಿಜೆಪಿ ಕೂಡ ಗೆಹ್ಲೋಟ್ ಕ್ರಮ ಕೈಗೊಂಡಿಲ್ಲ ಎಂದು ಪರಿಣಾಮಕಾರಿಯಾಗಿ ಆರೋಪ ಮಾಡಿತು. ಇದು ಕೂಡ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ ಉಂಟುಮಾಡಿತು.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್