ಜೆಪಿ ನಡ್ಡಾ ಭೇಟಿಯಿಂದ ರಾಜಸ್ಥಾನದಲ್ಲಿ ಅಂತ್ಯವಾಗುತ್ತಾ ಬಿಜೆಪಿಯ ಆಂತರಿಕ ಸಂಘರ್ಷ?

ಮಧ್ಯಪ್ರದೇಶದಲ್ಲಿ 79 ಅಭ್ಯರ್ಥಿಗಳು ಮತ್ತು ಛತ್ತೀಸ್‌ಗಢದಲ್ಲಿ 21 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಿದೆ. ಆದರೆ, ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೇ ಒಂದು ಹೆಸರನ್ನು ಘೋಷಿಸಲಾಗಿಲ್ಲ. ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಿದ್ಧಪಡಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಹೊರಹೊಮ್ಮಿವೆ.

ಜೆಪಿ ನಡ್ಡಾ ಭೇಟಿಯಿಂದ ರಾಜಸ್ಥಾನದಲ್ಲಿ ಅಂತ್ಯವಾಗುತ್ತಾ ಬಿಜೆಪಿಯ ಆಂತರಿಕ ಸಂಘರ್ಷ?
ಜೆಪಿ ನಡ್ಡಾ - ವಸುಂಧರಾ
Follow us
ಸುಷ್ಮಾ ಚಕ್ರೆ
|

Updated on: Oct 04, 2023 | 9:37 PM

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಘೋಷಿಸುವ ಬದಲು ಬಿಜೆಪಿ ಸಾಮೂಹಿಕ ನಾಯಕತ್ವಕ್ಕೆ ಬರುವ ಬಗ್ಗೆ ಮಾತನಾಡುತ್ತಿದೆ. ವಸುಂಧರಾ ರಾಜೇ ರಾಜಸ್ಥಾನದಲ್ಲಿ ಬಿಜೆಪಿಯ ಅತ್ಯಂತ ಶಕ್ತಿಶಾಲಿ ನಾಯಕಿಯಾಗಿದ್ದು, ಕಳೆದ 4 ಚುನಾವಣೆಗಳಲ್ಲಿ ಅವರ ನೇತೃತ್ವದಲ್ಲಿ ಪಕ್ಷವು ಚುನಾವಣೆಯನ್ನು ಸ್ಪರ್ಧಿಸುತ್ತಿದೆ. ಆದರೆ, ಈ ಬಾರಿ ಮುಖ್ಯಮಂತ್ರಿ ಅಭ್ಯರ್ಥಿಯೆಂದು ವಸುಂಧರಾ ಅವರ ಹೆಸರನ್ನು ಘೋಷಿಸಿಲ್ಲ. ಆದರೂ ವಸುಂಧರಾ ಅವರು ವಿವಿಧ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚುನಾವಣಾ ಪ್ರವಾಸ ಮಾಡುತ್ತಿದ್ದಾರೆ. ಹಾಗೇ, ತಮ್ಮ ಆಪ್ತರಿಗೆ ಟಿಕೆಟ್‌ ನೀಡುವಂತೆ ವಕಾಲತ್ತು ವಹಿಸುತ್ತಿದ್ದಾರೆ. ಆದರೆ ಅವರ ವಿರೋಧಿ ಪಾಳಯವು ಅವರನ್ನು ಸಂಪೂರ್ಣವಾಗಿ ಬದಿಗಿಡಲು ಪ್ರಯತ್ನಿಸುತ್ತಿದೆ. ಇದರಿಂದಾಗಿ ರಾಜಸ್ಥಾನದಲ್ಲಿ ಬಿಜೆಪಿಗೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಸಾಧ್ಯವಾಗಿಲ್ಲ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಜೈಪುರಕ್ಕೆ ತೆರಳಿದ್ದಾರೆ.

ಮಧ್ಯಪ್ರದೇಶದಲ್ಲಿ 79 ಅಭ್ಯರ್ಥಿಗಳು ಮತ್ತು ಛತ್ತೀಸ್‌ಗಢದಲ್ಲಿ 21 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಿದೆ. ಆದರೆ, ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೇ ಒಂದು ಹೆಸರನ್ನು ಘೋಷಿಸಲಾಗಿಲ್ಲ. ಇತ್ತೀಚೆಗಷ್ಟೇ ಟಿಕೆಟ್‌ ವಿಚಾರವಾಗಿ ಜೈಪುರದಿಂದ ದೆಹಲಿವರೆಗೆ ಒಂದು ಸುತ್ತಿನ ಸಭೆ ನಡೆದರೂ ಅಂತಿಮ ಮುದ್ರೆ ಹಾಕಲು ಸಾಧ್ಯವಾಗಿರಲಿಲ್ಲ. 2 ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜೈಪುರಕ್ಕೆ ಆಗಮಿಸಿ ಎಲ್ಲ ಬಣಗಳ ಮುಖಂಡರ ಜತೆ ನಡೆಸಿದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: 5 ವರ್ಷಗಳಲ್ಲಿ ಕಾಂಗ್ರೆಸ್ ರಾಜಸ್ಥಾನದ ಗುರುತನ್ನು ನಾಶಪಡಿಸಿದೆ: ಪ್ರಧಾನಿ ನರೇಂದ್ರ ಮೋದಿ 

ಮೂಲಗಳ ಪ್ರಕಾರ, ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಿದ್ಧಪಡಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ಹೊರಹೊಮ್ಮಿವೆ. ರಾಜಸ್ಥಾನ ಬಿಜೆಪಿ ಹಲವು ಬಣಗಳಾಗಿ ಒಡೆದಿರುವುದೇ ಇದಕ್ಕೆ ಕಾರಣ. ಮಾಜಿ ಸಿಎಂ ವಸುಂಧರಾ ರಾಜೇ ತಮ್ಮದೇ ಆದ ಗುಂಪನ್ನು ಹೊಂದಿದ್ದಾರೆ. ಹಾಗೇ, ರಾಜೇಂದ್ರ ಸಿಂಗ್ ರಾಥೋಡ್ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ತಮ್ಮದೇ ಆದ ಪಾಳಯ ಹೊಂದಿದ್ದಾರೆ. ಸತೀಶ್ ಪೂನಿಯಾ ಮತ್ತು ಸಿಪಿ ಜೋಶಿ ತಮ್ಮದೇ ಆದ ಗುಂಪನ್ನು ಹೊಂದಿದ್ದಾರೆ. ವಸುಂಧರಾ ರಾಜೇ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಆಪ್ತ ಹಾಲಿ ಶಾಸಕರು ಮತ್ತು ಮಾಜಿ ಶಾಸಕರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದರೆ, ಶೇಖಾವತ್‌ನಿಂದ ಪುನಿಯಾವರೆಗಿನ ಗುಂಪು ತಮ್ಮ ಆಪ್ತರ ಪರ ವಕಾಲತ್ತು ವಹಿಸುತ್ತಿದೆ.

ಇದನ್ನೂ ಓದಿ: Rajasthan Politics: ಈ ಬಾರಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಮುರಿಯಲಿದೆ 30 ವರ್ಷಗಳ ದಾಖಲೆ: ಸಚಿನ್ ಪೈಲಟ್

ಬಿಜೆಪಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಿಶ್ರಾ ಅವರು ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿಯನ್ನು ಬಿ.ಎಲ್. ಸಂತೋಷ್ ಅವರಿಗೆ ನೀಡಿದ್ದರು. ವಸುಂಧರಾ ರಾಜೇ ವಿಡಿಯೋ ಕಾಲ್ ಮೂಲಕ ಆ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ, ಅವರ ವಿರೋಧಿಗಳ ಗುಂಪು ವಸುಂಧರಾ ರಾಜೇ ಅವರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಿತ್ತು. ಇದರಿಂದಾಗಿ ಆ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಬಿ.ಎಲ್. ಸಂತೋಷ್ ಬಳಿಕ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೈಪುರಕ್ಕೆ ತೆರಳಿದ್ದಾರೆ. ಹೀಗಾಗಿ, ಜೆ.ಪಿ. ನಡ್ಡಾ ಭೇಟಿ ಬಹಳ ಕುತೂಹಲ ಮೂಡಿಸಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ರಾಜಸ್ಥಾನದ ರಾಜ್ಯ ನಾಯಕರ ನಡುವೆ ಪರಸ್ಪರ ಹೊಂದಾಣಿಕೆ ಮೂಡಿಸುವಲ್ಲಿ ಯಶಸ್ವಿಯಾದರೆ ಸದ್ಯದಲ್ಲೇ 50ರಿಂದ 60 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬಹುದು. ಇದಾದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬಹುದು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್