Rajasthan Congress Manifesto: ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಜಾತಿ ಗಣತಿಯ ಭರವಸೆ
ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ(Rajasthan Assembly Electon) ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ(Manifesto)ಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಬಿಡುಗಡೆ ಮಾಡಿದ್ದಾರೆ. ಜತೆಗೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ರೈತರು, ಯುವಕರು, ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ(Rajasthan Assembly Electon) ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ(Manifesto)ಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಬಿಡುಗಡೆ ಮಾಡಿದ್ದಾರೆ. ಜತೆಗೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ರೈತರು, ಯುವಕರು, ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಪ್ರಣಾಳಿಕೆ ಬಿಡುಗಡೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ, ಸಿಪಿ ಜೋಶಿ, ಸಚಿನ್ ಪೈಲಟ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಈ ವೇಳೆ ಕಾಂಗ್ರೆಸ್ ಬಿಜೆಪಿ ಮತ್ತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು .
ರಾಜಸ್ಥಾನದಲ್ಲಿಯೂ ಪಕ್ಷ ಮತ್ತೆ ಗೆಲುವಿನ ಬಗ್ಗೆ ಮಾತನಾಡಿದೆ. ನವೆಂಬರ್ 25ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.
ಮತ್ತಷ್ಟು ಓದಿ:ರಾಜಸ್ಥಾನ ಚುನಾವಣೆ 2023: ನಾಲ್ಕು ಸ್ಥಾನಗಳಲ್ಲಿ ಕುಟುಂಬದ ಸದಸ್ಯರ ನಡುವೆಯೇ ಪೈಪೋಟಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು
- ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸಿನಂತೆ ರೈತರಿಗೆ ಎಂಎಸ್‌ಪಿ ಕಾನೂನು ತರಲಾಗುವುದು.
- ಚಿರಂಜೀವಿ ವಿಮೆ ಮೊತ್ತವನ್ನು 25 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲಾಗುವುದು.
- ನಾಲ್ಕು ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುವುದು.
- ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಉದ್ಯೋಗಗಳ ಹೊಸ ಕೇಡರ್ ಅನ್ನು ರಚಿಸಲಾಗುವುದು.
- ಸದ್ಯ 500 ರೂ.ಗೆ ಸಿಗುವ ಗ್ಯಾಸ್ ಸಿಲಿಂಡರ್ ಬೆಲೆ 400 ರೂ.
- ರಾಜ್ಯದಲ್ಲಿ ಆರ್‌ಟಿಇ ಕಾನೂನು ತರುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು.
- MNREGA ಮತ್ತು ಇಂದಿರಾ ಗಾಂಧಿ ನಗರ ಉದ್ಯೋಗವನ್ನು 125 ರಿಂದ 150 ದಿನಗಳಿಗೆ ಹೆಚ್ಚಿಸಲಾಗುವುದು
#WATCH | Rajasthan elections| Congress National President Mallikarjun Kharge says, “…When I asked PM Modi and (Arun) Jaitley sahab that you have kept less money for MGNREGA, are you going to abolish it? They said that we would not abolish this… They kept little money in… pic.twitter.com/NeFHe4CDve
— ANI (@ANI) November 21, 2023
- ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿಕಾರರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡಲು ಮರ್ಚೆಂಟ್ ಕ್ರೆಡಿಟ್ ಕಾರ್ಡ್ ಯೋಜನೆ ಆರಂಭಿಸಲಾಗುವುದು.
- ಸರ್ಕಾರಿ ನೌಕರರಿಗೆ ನಾಲ್ಕನೇ ವೇತನ ಶ್ರೇಣಿಯನ್ನು 9,18,27 ಮತ್ತು ಅಧಿಕಾರಿಗಳಿಗೆ ಅಪೆಕ್ಸ್ ಸ್ಕೇಲ್ ನೀಡಲಾಗುವುದು.
- 100 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳು ಮತ್ತು ಕುಗ್ರಾಮಗಳು ರಸ್ತೆಯ ಮೂಲಕ ಸಂಪರ್ಕಗೊಳ್ಳುತ್ತವೆ.
- ಪ್ರತಿ ಗ್ರಾಮ ಮತ್ತು ನಗರ ವಾರ್ಡ್‌ಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
- ವಸತಿ ಹಕ್ಕು ಕಾಯಿದೆ ತರುವ ಮೂಲಕ ಎಲ್ಲರಿಗೂ ವಸತಿ ನೀಡಲಾಗುವುದು.
- ಈಗಾಗಲೇ ಜಾರಿಯಲ್ಲಿರುವ ಯೋಜನೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:49 am, Tue, 21 November 23