AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ

Karnataka By-Election 2024: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಯಿಂದ ಕೂಡಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಂತ್ರ-ಪ್ರತಿತಂತ್ರ ಹೆಣೆಯುತ್ತಿವೆ. ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.​

ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ
ಇ ತುಕಾರಾಂ, ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: |

Updated on:Oct 22, 2024 | 11:07 AM

Share

ಮೈಸೂರು, ಅಕ್ಟೋಬರ್​ 22: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್​ 13 ರಂದು ಉಪಚುನಾವಣೆ (By-Election) ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಕಣ ಜಿದ್ದಾಜಿದ್ದಿಯಿಂದ ಕೂಡಿದೆ. ಸಂಡೂರು ವಿಧಾನಸಭಾ ಕ್ಷೇತ್ರದ (Sandur Assembly Constituency) ಟಿಕೆಟ್​ ನಿರೀಕ್ಷೆಯಂತೆ ಸಂಸದ ಇ ತುಕಾರಾಂ (E Tukaram) ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿ, ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಕೊಡುತ್ತೇವೆ. ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಇನ್ನು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರುವ ಬಗ್ಗೆ, ಅವರ ಜೊತೆ ನಾನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.

ತುಕಾರಾಂ ಪತ್ನಿಗೆ ಟಿಕೆಟ್​ ಸಿಗಲು ಹಿಂದಿನ ಕಾರಣ

ಶಾಸಕರಾಗಿದ್ದ ಇ ತುಕಾರಾಂ ಹೈಕಮಾಂಡ್​ ಸೂಚನೆ ಮೇರೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕ ಶ್ರೀರಾಮುಲು ವಿರುದ್ಧ ಕಣಕ್ಕೆ ಇಳಿದು, ಅದೃಷ್ಟ ಪರೀಕ್ಷೆ ಮುಂದಾಗಿದ್ದರು. ಕೊನೆಗೆ ಗೆಲವು ಸಾಧಿಸಿದರು. ಪಕ್ಷ ನಿಷ್ಠೆಯ ಕಾರಣಕ್ಕೆ ಇ ತುಕಾರಂ ಅವರ ಪತ್ನಿಗೆ ಟಿಕೆಟ್​ ಸಿಕ್ಕಿದೆ ಎಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಗೆ ರಾಜೀನಾಮೆ ನೀಡದೇ ಪಕ್ಷೇತರವಾಗಿ ಸ್ಪರ್ಧೆ ಎಂದ ಯೋಗೇಶ್ವರ್

ವ್ಯಕ್ತಿ ಪ್ರತಿಷ್ಠೆಯಾದ ಸಂಡೂರು ಚುನಾವಣೆ

ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶ್ರೀರಾಮುಲು ಮತ್ತು ಬಿ ನಾಗೇಂದ್ರ ಸಂಡೂರು ಉಪಚುನಾವಣೆಯನ್ನು ವರ್ಚಸ್ಸಾಗಿ ತೆಗೆದುಕೊಂಡಿದ್ದಾರೆ. ಕಳೆದ ವಿಧಾಸನಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಶ್ರೀರಾಮುಲು ಅವರಿಗೆ ಸೋಲಾಗಿತ್ತು. ಈ ಸೋಲಿನಿಂದ ಶ್ರೀರಾಮುಲುಗೆ ಮುಖಭಂಗವಾಗಿದೆ. ಈ ಸೋಲಿನ ಸೇಡನ್ನು ತೇರಿಸಿಕೊಳ್ಳಲು ಶ್ರೀರಾಮುಲು ಹವಣಿಸುತ್ತಿದ್ದಾರೆ.

ಮಾಜಿ ಸಚಿವ ಬಿ ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದು, ಸಂಡೂರು ಚುನಾವಣೆಯಲ್ಲಿ ಧುಮುಕಿದ್ದಾರೆ. ಬಿಜೆಪಿ ಮತ್ತು ಗಣಿ ಧಣಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಈಗಾಗಲೇ ಸಂಡೂರು ಚುನಾವಣೆ ಉಸ್ತುವಾರಿ ಬಿ ನಾಗೇಂದ್ರ ಎಂದು ಘೋಷಿಸಿದ್ದಾರೆ. ಈ ಮೂಲಕ ಹಾಲಿ ​ಮತ್ತು ಮಾಜಿ ಸಚಿವರ ಸಾರಥ್ಯದಲ್ಲಿ ಸಂಡೂರು ಚುನಾವಣೆ ಎದುರಿಸಲು ಕಾಂಗ್ರೆಸ್​ ಸಿದ್ದವಾಗಿದೆ.

ಜಾತಿ ಲೆಕ್ಕಾಚಾರ

ಸಂಡೂರು ಎಸ್​ಟಿ ವರ್ಗದ ವಿಧಾನಸಭಾ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಒಟ್ಟು 221753 ಮತದಾರರು ಇದ್ದು, ಈ ಪೈಕಿ 1,11,109 ಪುರುಷರು, 1,10,619 ಮಹಿಳಾ ಮತದಾರರು ಇದ್ದಾರೆ.

ಪರಿಶಿಷ್ಟ ಪಂಗಡದ ಪ್ರಾಬಲ್ಯ ಹೊಂದಿರುವ ಕ್ಷೇತ್ರ ಇದಾಗಿದೆ. ಸಂಡೂರು ಕ್ಷೇತ್ರದಲ್ಲಿ ಎಸ್​ಸಿ ಮತದಾರರು 39,980 ಆಗಿದ್ದು, ಶೇ 18.23ರಷ್ಟಿದ್ದಾರೆ. ಎಸ್​ಟಿ ಮತದಾರರು ಸರಿಸುಮಾರ 54,747 ಅಂದರೆ ಶೇ25.02ರಷ್ಟಿದ್ದಾರೆ. ಮುಸ್ಲಿಂ ಮತದಾರರು ಸರಿಸುಮಾರು 25,163 ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:46 am, Tue, 22 October 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ