ಶಕ್ತಿ ಯೋಜನೆ ಮರುಪರಿಶೀಲನೆ ಹೇಳಿಕೆಯಿಂದ ಕೆರಳಿದ 3 ಕ್ಷೇತ್ರದ ಮಹಿಳೆಯರು: ಕಾಂಗ್ರೆಸ್​​ಗೆ ಡ್ಯಾಮೇಜ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಂದ ಶುರುವಾದ ಗ್ಯಾರಂಟಿ ಕದನ ಪ್ರಧಾನಿ ಮೋದಿಯವರೆಗೆ ಹೋಗಿ ನಿಂತಿದೆ. ಮಹರಾಷ್ಟ್ರ ಮತ್ತು ರಾಜ್ಯದ ಮೂರು ಕ್ಷೇತ್ರಗಳ ಚುನಾವಣೆ ಹೊತ್ತಲ್ಲೇ ಶುರುವಾದ ಯುದ್ಧ ವಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್​ ಅವರ ಹೇಳಿಕೆ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರನ್ನು ಕೆರಳಿಸಿದೆ.

ಶಕ್ತಿ ಯೋಜನೆ ಮರುಪರಿಶೀಲನೆ ಹೇಳಿಕೆಯಿಂದ ಕೆರಳಿದ 3 ಕ್ಷೇತ್ರದ ಮಹಿಳೆಯರು: ಕಾಂಗ್ರೆಸ್​​ಗೆ ಡ್ಯಾಮೇಜ್
ಶಕ್ತಿ ಯೋಜನೆ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Nov 02, 2024 | 1:11 PM

ಬೆಂಗಳೂರು, ನವೆಂಬರ್​ 02: ಶಕ್ತಿ ಯೋಜನೆಯ (Shakti Yojana) ಮರುಶೀಲನೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರು ಕೊಟ್ಟ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ್ದ ಪಾಠವಂತೂ ಬಿಜೆಪಿ ನಾಯಕರಿಗೆ ಬ್ರಹ್ಮಾಸ್ತ್ರವನ್ನೇ ತಂದುಕೊಟ್ಟಿದೆ. ಗ್ಯಾರಂಟಿಯಿಂದ ದಿವಾಳಿ ಎನ್ನುವ ಶಬ್ಧ ಯಾವಾಗ ಮಲ್ಲಿಕಾರ್ಜುನ್​ ಖರ್ಗೆ ಅವರ ಬಾಯಲ್ಲಿ ಯಾವಾಗ ಬಂತೋ ಪ್ರಧಾನಿ ಮೋದಿ ಅವರು ಅಖಾಡಕ್ಕೆ ಧುಮುಕಿದ್ದರು. ಅವಾಸ್ತವಿಕ ಭರವಸೆಗಳನ್ನು ನೀಡಿ ಅದನ್ನ ಪೂರೈಸುವುದು ಅಸಾಧ್ಯ ಮತ್ತು ಕಠಿಣ ಎನ್ನುವುದನ್ನ ಕಾಂಗ್ರೆಸ್ ಈಗ ಅರಿತುಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರು ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐದು ಯೋಜನೆಗಳ ಪೈಕಿ ಗೊಂದಲವಿಲ್ಲದೆ, ಸರಾಗವಾಗಿ ನಡೆಯುತ್ತಿರುವುದೇ ಶಕ್ತಿ ಯೋಜನೆ ಮಾತ್ರ. ಈ ಯೋಜನೆ ಮರುಪರಿಶೀಲನೆ ನಡೆಸುತ್ತೇವೆ ಎಂಬ ಮಾತುಗಳು, ಕಾಂಗ್ರೆಸ್​ಗೆ ಮುಜುಗರ ತಂದಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ನಿರ್ಣಾಯಕರಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹಿಳೆಯರಿಗೆ ಶಕ್ತಿ ಯೋಜನೆ ಹೆಚ್ಚು ಅನುಕೂಲವಾಗಿದೆ. ತೀರ್ಥ ಕ್ಷೇತ್ರಗಳಿಗೆ ಹೆಚ್ಚೆಚ್ಚು ಮಹಿಳೆಯರು ಹರಿದು ಬರಲು ಕಾರಣವಾಗಿದೆ.

ಇದನ್ನೂ ಓದಿ: ಖರ್ಗೆ ಖಡಕ್ ಸೂಚನೆ ನಂತರವೂ ಶಕ್ತಿ ಯೋಜನೆ ನಡೆಸೋದು ಸ್ವಲ್ಪ ಕಷ್ಟವಾಗ್ತಿದೆ ಎಂದ ರಾಮಲಿಂಗಾ ರೆಡ್ಡಿ

ಆದರೆ, ಡಿಸಿಎಂ ಡಿಕೆ ಶಿವಕುಮಾರ್​ ಅವರ ಹೇಳಿಕೆಯಿಂದ ಶಕ್ತಿ ಯೋಜನೆ ಮುಂದುವರೆಯುವ ಬಗ್ಗೆ ಮಹಿಳೆಯರಲ್ಲಿ ಅನುಮಾನ ಹುಟ್ಟಿದೆ. ಇದು ಕಾಂಗ್ರೆಸ್​ಗೆ ಬರುವ ಮತಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ. ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಗೆ ಚುನಾವಣೆ ಯಲ್ಲಿ ಗ್ಯಾರಂಟಿ ಬಿಟ್ಟು ಬೇರೆ ಅಸ್ತ್ರವೇ ಇಲ್ಲದಂತಾಗಿತ್ತು. ಇದೀಗ ಕಾಂಗ್ರೆಸ್ ಅದೇ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ನೆರೆ ರಾಜ್ಯದ ಚುನಾವಣೆ ಮೇಲೂ ಗ್ಯಾರಂಟಿ ಮರುಪರಿಶೀಲನೆ ಹೇಳಿಕೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಪಕ್ಷಕ್ಕೆ ಸಾಕಷ್ಟು ಹಾನಿಯಂತು ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ. ಈ ಹಾನಿಯನ್ನು ತಪ್ಪಿಸಲು ರಾಜ್ಯ ಕಾಂಗ್ರೆಸ್​ ನಾಯಕರು ಮೂರು ಕ್ಷೇತ್ರದಲ್ಲಿ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ. ಆದರೆ ಎಷ್ಟರ ಮಟ್ಟಿಗೆ ವರ್ಕ್​​ಔಟ್​ ಆಗುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:08 pm, Sat, 2 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ