Siddaramaiah new Karnataka Chief Minister: ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ – ಎಐಸಿಸಿ ಅಧ್ಯಕ್ಷ ಖರ್ಗೆ ಸರ್ವಾನುಮತದ ನಿರ್ಣಯ
DK Shivakumar Deputy Chief Minister: ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ - ಎಐಸಿಸಿ ಅಧ್ಯಕ್ಷ ಖರ್ಗೆ ಸರ್ವಾನುಮತದ ನಿರ್ಣಯ
ನವದೆಹಲಿ: ಸಿದ್ದರಾಮಯ್ಯಗೆ (Siddaramaiah) 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ (Chief Minister of Karnataka) ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ (DK Shivakumar) ಉಪಮುಖ್ಯಮಂತ್ರಿ (Deputy Chief Minister) ಒಲಿದುಬಂದಿದೆ. ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು (Mallikarjun Kharge) ಈ ಸರ್ವಾನುಮತದ ನಿರ್ಣಯವನ್ನು ಇದೀಗತಾನೆ ದೆಹಲಿಯಲ್ಲಿ (New Delhi) ಪ್ರಕಟಿಸಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Siddaramaiah to be next Karnataka CM, DK Shivakumar to be his deputy: Sources
Read @ANI Story | https://t.co/lZx3EknmCD#SiddaramaiahCM #DKShivakumar #KarnatakaCM pic.twitter.com/UvWZz5D3Kf
— ANI Digital (@ani_digital) May 17, 2023
ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 am, Thu, 18 May 23