Breaking News: ಸೂರತ್​ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ, ಬಿಜೆಪಿ ವಿರುದ್ಧ ಅಪಹರಣ ಆರೋಪ

ಬಿಜೆಪಿ ವಿರುದ್ಧ ಎಎಪಿಯ ಅಪಹರಣ ಆರೋಪ ಮಾಡಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಗುದ್ದಾಟ ಶುರುವಾಗಿದೆ. ಎಎಪಿ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ, ಅವರು ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

Breaking News: ಸೂರತ್​ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಪತ್ತೆ, ಬಿಜೆಪಿ ವಿರುದ್ಧ ಅಪಹರಣ ಆರೋಪ
ಮನೀಶ್ ಸಿಸೋಡಿಯಾ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 16, 2022 | 1:19 PM

ಗುಜರಾತ್:  ಬಿಜೆಪಿ ವಿರುದ್ಧ ಎಎಪಿಯ ಅಪಹರಣ ಆರೋಪ ಮಾಡಿದೆ. ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಗುದ್ದಾಟ ಶುರುವಾಗಿದೆ. ಎಎಪಿ ಸೂರತ್ (ಪೂರ್ವ) ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ, ಅವರು ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ತಮ್ಮ ಪಕ್ಷದ (ಎಎಪಿ) ಗುಜರಾತ್‌ ಅಭ್ಯರ್ಥಿ ನಿನ್ನೆಯಿಂದ ಅವರ ಕುಟುಂಬದೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಅಪಹರಿಸಿದೆ. ಎಂದು ಮನೀಶ್ ಸಿಸೋಡಿಯಾ ಇಂದು ಹೇಳಿದ್ದಾರೆ. ಕಾಂಚನ್ ಜರಿವಾಲಾ ಅವರು ಸೂರತ್‌ನಿಂದ (ಪೂರ್ವ) ಎಎಪಿ ಅಭ್ಯರ್ಥಿಯಾಗಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಬಿಜೆಪಿ ಇದೆ. ಅದಕ್ಕಾಗಿ ಎಎಪಿ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ ಎಂದು ಸಿಸೋಡಿಯಾ ಹೇಳಿದರು. ನಿನ್ನೆಯಿಂದ ಕಾಂಚನ್ ಹಾಗೂ ಅವರ ಕುಟುಂಬದವರು ನಾಪತ್ತೆಯಾಗಿದ್ದಾರೆ. ನಾಮಪತ್ರ ಪರಿಶೀಲನೆಗೆ ತೆರಳಿದ್ದರು. ನಾಮಪತ್ರ ಪರಿಶೀಲನೆ ಮುಗಿಸಿ ಕಚೇರಿಯಿಂದ ಹೊರ ಬಂದ ಕ್ಷಣದಲ್ಲೇ ಬಿಜೆಪಿಯ ಗೂಂಡಾಗಳು ಅವರನ್ನು ಕರೆದೊಯ್ದಿದ್ದಾರೆ. ಈಗ ಆತ ಎಲ್ಲಿದ್ದಾನೆ ಎಂಬುದು ಗೊತ್ತಾಗಿಲ್ಲ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಇದು ಅಪಾಯಕಾರಿ, ಇದು ಕೇವಲ ಅಭ್ಯರ್ಥಿಯಲ್ಲ ಪ್ರಜಾಪ್ರಭುತ್ವದ ಅಪಹರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹಲವು ಎಎಪಿ ನಾಯಕರು ಈ ಆರೋಪವನ್ನು ಟ್ವೀಟ್ ಮಾಡಿದ್ದಾರೆ.

ಸೂರತ್ (ಪೂರ್ವ), ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ನಿನ್ನೆಯಿಂದ ನಾಪತ್ತೆಯಾಗಿದೆ, ಮೊದಲು ಬಿಜೆಪಿ ಅವರ ನಾಮಪತ್ರವನ್ನು ತಿರಸ್ಕರಿಸಲು ಪ್ರಯತ್ನಿಸಿತು. ಆದರೆ ಅವರ ನಾಮಪತ್ರವನ್ನು ಸ್ವೀಕರಿಸಲಾಯಿತು. ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಈಗ ಅವರನ್ನು ಕಿಡ್ನಾಪ್ ಮಾಡಲಾಗಿದೆಯೇ? ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಎಎಪಿ ಆರೋಪಕ್ಕೆ ಬಿಜೆಪಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗುಜರಾತ್‌ನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಆಡಳಿತ ಪಕ್ಷವು ಈ ಬಾರಿ ಎಎಪಿಯಿಂದ ತುಂಬಾ ಬಲಯುತವಾದ ಪೈಪೋಟಿಯನ್ನು ನೀಡುತ್ತಿದೆ. ಇದು ರಾಜ್ಯದಲ್ಲಿ ಸಾಂಪ್ರದಾಯಿಕ ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿಯನ್ನು ತ್ರಿಕೋನ ಸ್ಪರ್ಧೆಯಾಗಿ ಪರಿವರ್ತಿಸಿದೆ.

Published On - 12:09 pm, Wed, 16 November 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್