ತೆಲಂಗಾಣ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ?; ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ: ವರದಿ
Anumula Revanth Reddy: ನವೆಂಬರ್ 30 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.
ಹೈದರಾಬಾದ್ ಡಿಸೆಂಬರ್ 05: ರೇವಂತ್ ರೆಡ್ಡಿ (Revanth Reddy) ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಡಿಸೆಂಬರ್ 7 ರಂದು ಮುಖ್ಯಮಂತ್ರಿಯವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ, ಅವರೊಂದಿಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ (CLP) ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಇದಕ್ಕೂ ಮುನ್ನ ಎಐಸಿಸಿ ನಾಯಕತ್ವವು ರೇವಂತ್ ರೆಡ್ಡಿ ಹೆಸರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸಿದ್ದು, ಉತ್ತಮ್, ಭಟ್ಟಿ, ಶ್ರೀಧರ್ ಬಾಬು ಮತ್ತು ಕೋಮಟಿರೆಡ್ಡಿ ಸಹೋದರರು ಅವರ ಉಮೇದುವಾರಿಕೆಯನ್ನು ವಿರೋಧಿಸಿದ್ದಾರೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗಿತ್ತು. ಏತನ್ಮಧ್ಯೆ, ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮಾಣಿಕ್ ರಾವ್ ಠಾಕರೆ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ್ದಾರೆ. “ನಾನು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಲು ಬಂದಿದ್ದೇನೆ, ಸಭೆಯ ನಂತರ ನಿಮಗೆ ತೆಲಂಗಾಣ ಸಿಎಂ ಆಯ್ಕೆ ಬಗ್ಗೆ ತಿಳಿಸುವುದಾಗಿ ಅವರು ಹೇಳಿದ್ದಾರೆ.
Revanth Reddy is all set to be the new Chief Minister of Telangana. He is likely to take oath on December 7, a few ministers will also be taking oath along with him. A unanimous decision was taken in the CLP meet in Hyderabad and the final decision to appoint the CM was left to… pic.twitter.com/MXeiChcYTP
— ANI (@ANI) December 5, 2023
ತೆಂಲಂಗಾಣದ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಸಂಸದ ಉತ್ತಮ್ ಕುಮಾರ್ ರೆಡ್ಡಿ, ಎಐಸಿಸಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ. ಅದೇ ವೇಳೆ ನಾವು ವರದಿ ಸಲ್ಲಿಸಲು ಮಾತ್ರ ಇಲ್ಲಿದ್ದೇವೆ. ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ತೆಲಂಗಾಣ: ಮುಂದಿನ ಮುಖ್ಯಮಂತ್ರಿ ರೇವಂತ್ ರೆಡ್ಡಿ?
ಬಹುತೇಕ ಶಾಸಕರು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಸಿಎಂ ಹುದ್ದೆಗೆ ಬೆಂಬಲಿಸಿದ್ದಾರೆ ಎಂದು ಹೆಸರು ಹೇಳಲು ಬಯಸದ ನಾಯಕರೊಬ್ಬರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ತೆಲಂಗಾಣ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಇಂದು ನಿರ್ಧಾರ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ಮತ್ತೊಬ್ಬ ಕಾಂಗ್ರೆಸ್ ಶಾಸಕ ತೆಲಂಗಾಣ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ. ಟೈಮ್ಸ್ ನೌ ಜತೆ ಮಾತನಾಡಿದ ಶ್ರೀಧರ್ ಬಾಬು”ಸಿಎಂ ಆಗಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನವೆಂಬರ್ 30 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಭೂತಪೂರ್ವ ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಅವರು ಕಾಂಗ್ರೆಸ್‌ನ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ ಗಾಂಧಿ, ರೇವಂತ್ ರೆಡ್ಡಿ ಅವರನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟವಾಗಿ ಹೇಳಿದರು. ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:46 pm, Tue, 5 December 23