ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ ಹಿಂದುಳಿದ ಜಾತಿಯವರನ್ನೇ ಸಿಎಂ ಮಾಡುತ್ತೇವೆ: ಅಮಿತ್ ಶಾ
Amit Shah: ಇಂದು (ಶುಕ್ರವಾರ) ನಾನು ತೆಲಂಗಾಣ ಜನತೆಗೆ ಹೇಳಲು ಬಯಸುತ್ತೇನೆ, ಬಿಜೆಪಿ ಸರ್ಕಾರವನ್ನು ರಚಿಸಲು ಆಶೀರ್ವಾದ ಮಾಡಿ. ತೆಲಂಗಾಣಕ್ಕೆ ಬಿಜೆಪಿ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನು ನೀಡಲಿದೆ ಎಂದು ಸೂರ್ಯಪೇಟ್‌ನಲ್ಲಿ ನಡೆದ ಜನ ಘರ್ಜನ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
ಹೈದರಾಬಾದ್ ಅಕ್ಟೋಬರ್ 27: ತೆಲಂಗಾಣ ವಿಧಾನಸಭಾ ಚುನಾವಣೆಗೆ (Telangana Assembly elections) ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಬಿಜೆಪಿ (BJP) ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಹಿಂದುಳಿದ ಜಾತಿಗೆ ಸೇರಿದವರಾಗಲಿದ್ದಾರೆ ಎಂದು ಹೇಳಿದ್ದಾರೆ. ಇಂದು (ಶುಕ್ರವಾರ) ನಾನು ತೆಲಂಗಾಣ ಜನತೆಗೆ ಹೇಳಲು ಬಯಸುತ್ತೇನೆ, ಬಿಜೆಪಿ ಸರ್ಕಾರವನ್ನು ರಚಿಸಲು ಆಶೀರ್ವಾದ ಮಾಡಿ. ತೆಲಂಗಾಣಕ್ಕೆ ಬಿಜೆಪಿ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನು ನೀಡಲಿದೆ ಎಂದು ಸೂರ್ಯಪೇಟ್‌ನಲ್ಲಿ ನಡೆದ ಜನ ಘರ್ಜನ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಿದ್ಧವಾಗಿದ್ದು ರಾಜ್ಯದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಕಾರ್ಯತಂತ್ರದ ಕೆಲಸ ಮಾಡುತ್ತಿದೆ.
ಇದಕ್ಕೂ ಮುನ್ನ ನಿಜಾಮಾಬಾದ್ ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ಅವರು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಗೆಲ್ಲಲಿದ್ದು, ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಬರಲಿದೆ ಎಂದು ಹೇಳಿದ್ದಾರೆ.
𝗕𝗝𝗣’𝘀 𝗣𝗿𝗼𝗺𝗶𝘀𝗲
Shri @AmitShah Ji assures that next Chief Minister of Telangana will be from Backward Caste if BJP is voted to power.
ఒక బీసీ యే తెలంగాణ ముఖ్యమంత్రి..#AmitShahInTelangana pic.twitter.com/j4I3Spkapq
— G Kishan Reddy (@kishanreddybjp) October 27, 2023
ತೆಲಂಗಾಣ ವಿಧಾನಸಭಾ ಚುನಾವಣೆಯನ್ನು ನವೆಂಬರ್ 30 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅಕ್ಟೋಬರ್ 9 ರಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿತು. ಮತಗಳ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಗೆ ತೆಲಂಗಾಣ ಸಾಕ್ಷಿಯಾಗಲಿದೆ.
ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ
2018 ರಲ್ಲಿ ನಡೆದ ಹಿಂದಿನ ಅಸೆಂಬ್ಲಿ ಚುನಾವಣೆಯಲ್ಲಿ, ಬಿಆರ್ಎಸ್ 119 ರಲ್ಲಿ 88 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು 47.4 ರಷ್ಟು ಪ್ರಬಲ ಮತಗಳನ್ನು ಹೊಂದಿತ್ತು. ಕಾಂಗ್ರೆಸ್ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಅದರ ಮತ ಹಂಚಿಕೆ ಶೇ.28.7 ಆಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ