ತೆಲಂಗಾಣ: ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರನಡೆಯಿರಿ, ಸಭೆಯಲ್ಲಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

|

Updated on: Nov 27, 2023 | 10:59 AM

ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರ ನಡೆಯಿರಿ, ತೆಲಂಗಾಣದ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ತಾಳ್ಮೆ ಕಳೆದುಕೊಂಡು ರೇಗಾಡಿರುವ ಘಟನೆ ನಡೆದಿದೆ. ಪ್ರಚಾರ ಸಭೆಯಲ್ಲಿ ಕಂಡುಬಂದ ಅಶಿಸ್ತಿನಿಂದಾಗಿ ಮಲ್ಲಿಕಾರ್ಜುನ ಖರ್ಗೆ ಕೋಪಗೊಂಡರು. ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಪಕ್ಷದ ಚುನಾವಣಾ ಭರವಸೆಗಳನ್ನು ಪಟ್ಟಿ ಮಾಡುತ್ತಿದ್ದಾಗ ಸಾರ್ವಜನಿಕರು ಗಲಾಟೆ ಮಾಡಲು ಪ್ರಾರಂಭಿಸಿದರು. ಇದರಿಂದ ಅಸಮಾಧಾನಗೊಂಡ ಖರ್ಗೆ ಸಭಿಕರನ್ನು ತರಾಟೆಗೆ ತೆಗೆದುಕೊಂಡರು.

ತೆಲಂಗಾಣ: ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರನಡೆಯಿರಿ, ಸಭೆಯಲ್ಲಿ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Image Credit source: ABP Live
Follow us on

ಸುಮ್ಮನೆ ಕುಳಿತುಕೊಳ್ಳಿ, ಇಲ್ಲವಾದರೆ ಹೊರ ನಡೆಯಿರಿ, ತೆಲಂಗಾಣದ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ತಾಳ್ಮೆ ಕಳೆದುಕೊಂಡು ರೇಗಾಡಿರುವ ಘಟನೆ ನಡೆದಿದೆ. ಪ್ರಚಾರ ಸಭೆಯಲ್ಲಿ ಕಂಡುಬಂದ ಅಶಿಸ್ತಿನಿಂದಾಗಿ ಮಲ್ಲಿಕಾರ್ಜುನ ಖರ್ಗೆ ಕೋಪಗೊಂಡರು. ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಪಕ್ಷದ ಚುನಾವಣಾ ಭರವಸೆಗಳನ್ನು ಪಟ್ಟಿ ಮಾಡುತ್ತಿದ್ದಾಗ ಸಾರ್ವಜನಿಕರು ಗಲಾಟೆ ಮಾಡಲು ಪ್ರಾರಂಭಿಸಿದರು. ಇದರಿಂದ ಅಸಮಾಧಾನಗೊಂಡ ಖರ್ಗೆ ಸಭಿಕರನ್ನು ತರಾಟೆಗೆ ತೆಗೆದುಕೊಂಡರು.

ಸುಮ್ಮನಿರಿ, ಕೇಳಬೇಕೆನಿಸಿದರೆ ಕೇಳಿ, ಇಲ್ಲವಾದಲ್ಲಿ ಹೊರಗೆ ಹೋಗಿ ಎಂದು ರೇಗಾಡಿದ್ದಾರೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ 29.8 ನಿಮಿಷಗಳ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷರು ತಮ್ಮ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಪಕ್ಷದ ಮುಖ್ಯಸ್ಥರಾಗಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಸಲ್ಲಬೇಕಾದ ಗೌರವನ್ನು ನೀಡುತ್ತಿಲ್ಲ ಖರ್ಗೆ ಅವರಿಗೆ ಸಾವ್ಝನಿಕ ಸಭೆಯಲ್ಲಿ ಅವಮಾನವಾಗಿ ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ಮಾಡಿರುವ ಫೋಟೊಗಳು ಕಣ್ಮರೆಯಾಗಿವೆ, ರಾಹುಲ್ ಗಾಂಧಿ ಹಾಗೂ ಗೆಹ್ಲೋಟ್​ ಅವರು ಚಿತ್ರಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಲಾಗಿದೆ. ದಲಿತ ಎಂಬ ಕಾರಣಕ್ಕೆ ಖರ್ಗೆ ಅವರನ್ನು ಕಾಂಗ್ರೆಸ್​ ನಿಂದಿಸುತ್ತಿದೆಯೇ ಎಂದು ಮಾಳವೀಯ ಪ್ರಶ್ನೆ ಮಾಡಿದ್ದಾರೆ.

ಮತ್ತಷ್ಟು ಓದಿ: ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ

ತೆಲಂಗಾಣದ ಕಲ್ವುರ್ತಿಯಲ್ಲಿ ಘಟನೆ ನಡೆದಿದೆ, ತೆಲಂಗಾಣ ವಿಧಾನಸಭೆಗೆ ಚುನಾವಣೆಯು ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಈ ಹಿಂದೆ ಪ್ರಧಾನಿ ಮೋದಿ ಕೂಡ ಬೆಳಗಾವಿಯಲ್ಲಿನ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್​ ಖರ್ಗೆಯನ್ನು ಅಮಾನಿಸುತ್ತಿದೆ ಎಂದು ಆರೋಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ