AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷಗಳ ಹಿಂದೆ ಮಾಡಿದ್ದ ತಪ್ಪಿನಿಂದ ಇಂದು ಅಧಿಕಾರ ಕಳೆದುಕೊಂಡ ಪಶ್ಚಾತಾಪದಲ್ಲಿ ಕೆಸಿಆರ್​

Telangana Assembly Election Result 2023: ತಮಿಳುನಾಡು ಚುನಾವಣೆ ಬಳಿಕ ಸುನಿಲ್ ಕಾನುಗೋಳು ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K Chandrasekhar Rao) ಅವರನ್ನು ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆಯಾಗಿತ್ತು. ಈ ಸಂಬಂಧ ಸುಧೀರ್ಘ ಮಾತುಕತೆಯನ್ನೂ ನಡೆಸಿದ್ದರು. ಆದರೆ ಒಂದಷ್ಟು ಮಾತುಕತೆ ಬಳಿಕ ಸುನಿಲ್ ಅವರ ಆಫರ್​ ಅನ್ನು ಕೆಸಿಆರ್ ತಿರಸ್ಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಎರಡು ವರ್ಷಗಳ ಹಿಂದೆ ಮಾಡಿದ್ದ ತಪ್ಪಿನಿಂದ ಇಂದು ಅಧಿಕಾರ ಕಳೆದುಕೊಂಡ ಪಶ್ಚಾತಾಪದಲ್ಲಿ ಕೆಸಿಆರ್​
ಸುನಿಲ್
ನಯನಾ ರಾಜೀವ್
|

Updated on:Dec 03, 2023 | 2:58 PM

Share

ತಮಿಳುನಾಡು ಚುನಾವಣೆ ಬಳಿಕ ಸುನಿಲ್ ಕಾನುಗೋಳು ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K Chandrasekhar Rao) ಅವರನ್ನು ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆಯಾಗಿತ್ತು. ಈ ಸಂಬಂಧ ಸುಧೀರ್ಘ ಮಾತುಕತೆಯನ್ನೂ ನಡೆಸಿದ್ದರು. ಆದರೆ ಒಂದಷ್ಟು ಮಾತುಕತೆ ಬಳಿಕ ಸುನಿಲ್ ಅವರ ಆಫರ್​ ಅನ್ನು ಕೆಸಿಆರ್ ತಿರಸ್ಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಅದರ ಪರಿಣಾಮವೇನೆಂದರೆ ಅದಾಗಿ ಕೆಲವೇ ತಿಂಗಳಲ್ಲಿ, ಸುನಿಲ್ ಕಾಂಗ್ರೆಸ್​ ಸೇರ್ಪಡೆಯಾಗುವುದರ ಜತೆಗೆ ಕಾಂಗ್ರೆಸ್​ನ ಚುನಾವಣಾ ಕಾರ್ಯತಂತ್ರದ ಅಧ್ಯಕ್ಷರಾಗಿಯೂ ನೇಮಕವಾಗುತ್ತಾರೆ. ಅದರ ಬೆನ್ನಲ್ಲೇ ಕರ್ನಾಟಕ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯತಂತ್ರದ ಉಸ್ತುವಾರಿಯನ್ನು ಸುನಿಲ್ ವಹಿಸಿಕೊಳ್ಳುತ್ತಾರೆ.

ಹಾಗೆಯೇ ಭಾರತ್ ಜೋಡೋ ಯಾತ್ರೆ ಹಿಂದಿನ ಪ್ರಮುಖ ಶಕ್ತಿ ಕೂಡ ಸುನಿಲ್ ಹೌದು, ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಅದ್ಭುತವಾಗಿ ಸಂಘಟಿಸಿ ಗೆದ್ದ ಬೆನ್ನಲ್ಲೇ ಅವೆಲ್ಲಾ ಶಕ್ತಿಯನ್ನು ತೆಲಂಗಾಣದತ್ತ ಹಾಕಿದರು, ಅದರ ಫಲಿತಾಂಶವೇ ಇಂದು ಬಂದಿದೆ.

ಮತ್ತಷ್ಟು ಓದಿ: ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ

ಅವರ ತಂತ್ರಗಾರಿಕೆ ಮತ್ತು ಪರಿಶ್ರಮಕ್ಕೆ ಈಗ ಉತ್ತಮ ಫಲ ಸಿಕ್ಕಿದೆ. ಕಳೆದ ವರ್ಷ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಗೆ ಕಾರ್ಯತಂತ್ರ ರೂಪಿಸಿದ ಕೀರ್ತಿಯೂ ಕನುಗೋಳು ಅವರದ್ದು.

ಕರ್ನಾಟಕದ ಬಳ್ಳಾರಿ ಮೂಲದ ಸುನೀಲ್ ಕಾನುಗೋಳು, ಚೆನ್ನೈನಲ್ಲಿ ಹುಟ್ಟಿ ಬೆಳೆದ ಅವರು USA ಯಿಂದ ಉನ್ನತ ವ್ಯಾಸಂಗ ಮಾಡಿದರು ಮತ್ತು ಜಾಗತಿಕ ನಿರ್ವಹಣಾ ಸಲಹಾ ಸಂಸ್ಥೆಯಾದ ಮೆಕಿನ್ಸೆಯಲ್ಲಿ ಕೆಲಸ ಮಾಡಿದರು.

ಭಾರತಕ್ಕೆ ಹಿಂದಿರುಗಿದ ನಂತರ, ಕಾನುಗೋಳು ಗುಜರಾತ್‌ನಲ್ಲಿ ರಾಜಕೀಯ ಕಾರ್ಯತಂತ್ರಗಳಲ್ಲಿ ತೊಡಗಿಸಿಕೊಂಡರು ಮತ್ತು ಅಸೋಸಿಯೇಷನ್ ​​ಆಫ್ ಬಿಲಿಯನ್ ಮೈಂಡ್ಸ್ (ಎಬಿಎಂ) ಅನ್ನು ಮುನ್ನಡೆಸಿದರು. 2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಕಾರ್ಯತಂತ್ರ ರೂಪಿಸಿದವರಲ್ಲಿ ಇವರೂ ಒಬ್ಬರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:54 pm, Sun, 3 December 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ