ತೆಲಂಗಾಣ ಅಸೆಂಬ್ಲಿ ಚುನಾವಣೆ: ಬಂಜಾರಾ ಹಿಲ್ಸ್ ನಲ್ಲಿ ಭಾರೀ ನಗದು ವಶ
Telangana assembly Elections: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಂಗಾರೆಡ್ಡಿ ಜಿಲ್ಲೆಯಲ್ಲಿ ವಾಹನ ತಪಾಸಣೆ ವೇಳೆ ಇಬ್ರಾಹಿಂ ಪಟ್ಟಣಂ ಪೊಲೀಸರು 6.55 ಲಕ್ಷ ರೂ, ಹಬೀಬ್ ನಗರ ಪೊಲೀಸರು 17 ಲಕ್ಷ ರೂ. ಸ್ವಾಧೀನಪಡಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ, ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ತೆಲಂಗಾಣ ಅಸೆಂಬ್ಲಿ ಚುನಾವಣೆ: ರಾಜ್ಯದಲ್ಲಿ ಅಸೆಂಬ್ಲಿ ಚುನಾವಣಾ (Telangana assembly Elections 2023) ನೀತಿ ಸಂಹಿತೆ ಎಫೆಕ್ಟ್ ನಿಂದಾಗಿ ತೆಲಂಗಾಣದಲ್ಲಿ ಭಾರಿ ನಗದು, ಚಿನ್ನವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ. ಹೈದರಾಬಾದ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ತೆಲಂಗಾಣದಲ್ಲಿ ಕರೆನ್ಸಿ ನೋಟುಗಳನ್ನು ರಾಶಿ ರಾಶಿ ವಶಪಡಿಸಿಕೊಳ್ಳುತ್ತಿದ್ದಾರೆ. ಕೋಟ್ಯಂತರ ರೂ. ಹಣವನ್ನು ಪೊಲೀಸರು ಜಾಲಾಡುತ್ತಿದ್ದಾರೆ. ಬಂಜಾರಾ ಹಿಲ್ಸ್‌ನಲ್ಲಿ ರೂ. 3.35 ಕೋಟಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತತ್ಸಂಬಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಅಲ್ಲದೆ, ಹೈದರಾಬಾದ್‌ನ ಮತ್ತೊಂದು ಸ್ಥಳದಲ್ಲಿ 12 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಹಲವೆಡೆ ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, ವ್ಯಾಪಕವಾಗಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ನಲ್ಗೊಂಡ ಜಿಲ್ಲೆಯಲ್ಲಿ ಆರ್ ಟಿಸಿ ಬಸ್ ಗಳಲ್ಲಿ 1000 ರೂ. ಮುಖಬೆಲೆಯ 30 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಮಿರ್ಯಾಲಗುಡದಲ್ಲಿ 3.5 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.
ಇದೇ ವೇಳೆ, ರಂಗಾರೆಡ್ಡಿ ಜಿಲ್ಲೆಯಲ್ಲಿ ವಾಹನ ತಪಾಸಣೆ ವೇಳೆ ಇಬ್ರಾಹಿಂ ಪಟ್ಟಣಂ ಪೊಲೀಸರು 6.55 ಲಕ್ಷ ರೂ, ಹಬೀಬ್ ನಗರ ಪೊಲೀಸರು 17 ಲಕ್ಷ ರೂ. ಸ್ವಾಧೀನಪಡಿಸಿಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪಾತಬಸ್ತಿಯಲ್ಲಿ ಪೊಲೀಸರು ಸರ್ಚ್ ನಡೆಸಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೂರು ದಿನಗಳಲ್ಲಿ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ವಶವಾಗಿದೆ. ಇಲ್ಲಿಯವರೆಗೆ 15 ಕೆಜಿ ಚಿನ್ನ ಮತ್ತು 400 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಭಾರೀ ಮದ್ಯವನ್ನೂ ವಶಪಡಿಸಿಕೊಂಡಿದ್ದಾರೆ.