ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ; ರಾಹುಲ್ ವಿರುದ್ಧ ಮೋದಿ ವಾಗ್ದಾಳಿ

ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯಾವುದೇ ಶಕ್ತಿ ಇಲ್ಲ. ಆದರೆ ಅದನ್ನು ಲೆಕ್ಕಿಸದೆ ಕೆಲವರು ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಜನರು ಭಗವಾನ್ ಬಸವೇಶ್ವರರಿಗೆ, ಕರ್ನಾಟಕದ ಜನತೆಗೆ, ಭಾರತದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಇಂತಹವರಿಂದ ಕರ್ನಾಟಕ ದೂರವಿರಬೇಕು ಎಂದಿದ್ದಾರೆ ಮೋದಿ.

ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ; ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 12, 2023 | 6:42 PM

ಗುರು ಬಸವೇಶ್ವರರ (Guru Basaveshwara) ಪ್ರತಿಮೆ ಇರುವ ಅದೇ ನೆಲದಲ್ಲಿ ಲಂಡನ್‌ನಲ್ಲಿ ಕೆಲವರು ಭಾರತದ ಪ್ರಜಾಪ್ರಭುತ್ವವನ್ನು ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೆಸರು ಉಲ್ಲೇಖಿಸದೆಯೇ ವಾಗ್ದಾಳಿ ನಡೆಸಿದ್ದಾರೆ. ಧಾರವಾಡ ಐಐಟಿ ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇಂದು ನಾನು ಭಗವಾನ್ ಬಸವೇಶ್ವರರ ನಾಡಿನಲ್ಲಿದ್ದೇನೆ.ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಅವರ ಗಮನಾರ್ಹ ಕೊಡುಗೆಯೆಂದರೆ ಅನುಭವ ಮಂಟಪದ ಸ್ಥಾಪನೆ. ಇಡೀ ಜಗತ್ತು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಧ್ಯಯನ ಮಾಡುತ್ತದೆ.

ನಾವು ಹೇಳಬಹುದಾದ ಇನ್ನೂ ಅನೇಕ ವಿಷಯಗಳಿವೆ. ಭಾರತವು ಅತಿದೊಡ್ಡ ಪ್ರಜಾಪ್ರಭುತ್ವ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿ, ಭಗವಾನ್ ಬಸವೇಶ್ವರರ ಪ್ರತಿಮೆಯನ್ನು ಅನಾವರಣಗೊಳಿಸಲು ಲಂಡನ್‌ಗೆ ಆಹ್ವಾನದ ಅದೃಷ್ಟ ನನಗೆ ಸಿಕ್ಕಿತು. ಆದರೆ ಲಂಡನ್ ಮಣ್ಣಿನಲ್ಲಿ ಭಾರತದ ಪ್ರಜಾಪ್ರಭುತ್ವದ ಮೇಲೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ. ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯಾವುದೇ ಶಕ್ತಿ ಇಲ್ಲ. ಆದರೆ ಅದನ್ನು ಲೆಕ್ಕಿಸದೆ ಕೆಲವರು ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಈ ಜನರು ಭಗವಾನ್ ಬಸವೇಶ್ವರರಿಗೆ, ಕರ್ನಾಟಕದ ಜನತೆಗೆ, ಭಾರತದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಇಂತಹವರಿಂದ ಕರ್ನಾಟಕ ದೂರವಿರಬೇಕು ಎಂದಿದ್ದಾರೆ ಮೋದಿ.

ರಾಹುಲ್ ಗಾಂಧಿಯವರ ಇತ್ತೀಚಿನ ಯುಕೆ ಪ್ರವಾಸವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ  ಕಾರಣವಾಗಿದೆ. ರಾಹುಲ್ ಗಾಂಧಿ ಅವರು ತಮ್ಮ ಕೇಂಬ್ರಿಡ್ಜ್ ಭಾಷಣದಲ್ಲಿ ಪಿಎಂ ಮೋದಿ, ‘ಪ್ರಜಾಪ್ರಭುತ್ವದ ದಾಳಿ’, ಚೀನಾ ಸಮಸ್ಯೆ ಇತ್ಯಾದಿಗಳ ಬಗ್ಗೆ ಮಾತನಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ಅಗತ್ಯವನ್ನು ವಿವರಿಸಿದ ರಾಹುಲ್, ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಮತ್ತು ವಿರೋಧ ಪಕ್ಷದ ನಾಯಕರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ:IIT Dharwad Inauguration: ಪ್ರತಿಯೊಬ್ಬ ವಿದ್ಯಾರ್ಥಿಯೂ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು: ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರು ಭಾರತದ ವಾಸ್ತುಶಿಲ್ಪವನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತವು ಅರಗಿಸಿಕೊಳ್ಳಲು ಸಾಧ್ಯವಾಗದಂತಹದನ್ನು ಹೇರುತ್ತಿದ್ದಾರೆ ಎಂದಿದ್ದರು ರಾಹುಲ್,ಈ ಹೇಳಿಕೆಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದರೂ, ರಾಹುಲ್ ಗಾಂಧಿ ಅವರು ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sun, 12 March 23

ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ