Assembly Elections 2023: ಈ ರಾಜ್ಯದಲ್ಲಿ ಚುನಾವಣೆ ವೇಳೆ ಹಿರಿಯ ನಾಗರಿಕರಿಗೆ ಮನೆಯಿಂದ ಮತ ಚಲಾಯಿಸಲು ಅವಕಾಶ

Tripura Assembly Polls: ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Assembly Elections 2023: ಈ ರಾಜ್ಯದಲ್ಲಿ ಚುನಾವಣೆ ವೇಳೆ ಹಿರಿಯ ನಾಗರಿಕರಿಗೆ ಮನೆಯಿಂದ ಮತ ಚಲಾಯಿಸಲು ಅವಕಾಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 19, 2023 | 8:40 AM

ಅಗರ್ತಲಾ: ತ್ರಿಪುರಾದಲ್ಲಿ (Tripura Assembly Election) ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ತಿಳಿಸಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಬಳಸಿಕೊಳ್ಳಬಹುದು.

ತ್ರಿಪುರಾದಲ್ಲಿ ಮುಂಬರುವ ಚುನಾವಣೆಗೆ ಕೇಂದ್ರ ಸಶಸ್ತ್ರ ಅರೆಸೇನಾ ಪಡೆಗಳು (ಸಿಎಪಿಎಫ್) ಸಾಕಷ್ಟು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿದ್ದು, ಧ್ವಜ ಮೆರವಣಿಗೆ ಮತ್ತು ರಾತ್ರಿ ಗಸ್ತು ಕೂಡ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ನಾವು ನ್ಯಾಯಯುತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಳನ್ನು ಬಯಸುತ್ತೇವೆ. ಹಿರಿಯ ನಾಗರಿಕರು 80 ವರ್ಷ ಮತ್ತು ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Assembly Elections 2023: ಚುನಾವಣೆ ಸಮೀಪಿಸುತ್ತಿದ್ದಂತೆ ಸ್ವಕ್ಷೇತ್ರ ಶಿಗ್ಗಾಂವಿಯತ್ತ ಸಿಎಂ ಚಿತ್ತ

ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಕಾರ, ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಈ ವಿಧಾನಸಭಾ ಚುನಾವಣೆಗಳ ಫಲಿತಾಂಶವನ್ನು ಮಾರ್ಚ್ 2 ರಂದು ಪ್ರಕಟಿಸಲಾಗುವುದು. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ವಿಧಾನಸಭೆಗಳ 5 ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಕೊನೆಗೊಳ್ಳಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಮುಂಬರುವ ಫೆಬ್ರವರಿ 16ರ ವಿಧಾನಸಭಾ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Assembly election 2023 Dates: ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅವರಲ್ಲಿ 31.47 ಲಕ್ಷ ಮಹಿಳಾ ಮತದಾರರು, 97,000 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಮತ್ತು 31,700 ಅಂಗವಿಕಲ ಮತದಾರರು ಇದ್ದಾರೆ. 1.76 ಲಕ್ಷಕ್ಕೂ ಹೆಚ್ಚು ಮೊದಲ ಬಾರಿಗೆ ಮತದಾರರು ಭಾಗವಹಿಸಲಿದ್ದಾರೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ