AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manik Saha Takes Oath: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ, ಮೋದಿ, ಶಾ ಭಾಗಿ

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಉಪಸ್ಥಿತರಿದ್ದರು.

ಅಕ್ಷಯ್​ ಪಲ್ಲಮಜಲು​​
|

Updated on:Mar 08, 2023 | 3:23 PM

Share

ಅಗರ್ತಲ: ಸತತ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ (Manik Saha) ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಉಪಸ್ಥಿತರಿದ್ದರು. ಫೆಬ್ರವರಿ 16 ರಂದು ತ್ರಿಪುರಾದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ನಂತರ ಶಾಸಕರ ಸಭೆ ನಡೆದು, ಈ  ಮೂಲಕ ಮಾಣಿಕ್ ಸಹಾ ಶಾಸಕಾಂಗ ಸಭೆಯ ನಾಯಕರನ್ನಾಗಿ ಮಾಡಲಾಗಿತ್ತು. ಇದೀಗ ಮಾಣಿಕ್ ಸಹಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ ಇನ್ನು ಎಂಟು ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು.

ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಕೂಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಬಿಜೆಪಿಯ ಬಿಪ್ಲಬ್ ದೇಬ್ ಕೂಡ ಇದ್ದರು. ಈ ಹಿಂದಿನ ಸರ್ಕಾರದಲ್ಲಿ ಇದ್ದ ನಾಲ್ವರು ಸಚಿವರು ಮತ್ತೆ ಈ ನೂತನ ಸರ್ಕಾರದಲ್ಲಿ ಮುಂದುವರಿಯಲಿದ್ದಾರೆ (ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಶಾಂತಾ ಚಕ್ಮಾ ಮತ್ತು ಸುಶಾಂತ ಚೌಧರಿ)  ಜೊತೆಗೆ ಮೂರು ಹೊಸ ಮಂತ್ರಿಗಳನ್ನು ಸೇರ್ಪಡೆ ಮಾಡಲಾಗಿದೆ. ಬಿಪ್ಲಬ್ ದೇಬ್ ಅವರ ನಿಕಟವರ್ತಿ ಟಿಂಕು ರಾಯ್, ಬಿಜೆಪಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ಮುಖ್ಯಸ್ಥ ಬಿಕಾಶ್ ದೆಬ್ಬರ್ಮಾ ಮತ್ತು ಸುಧಾಂಶು ದಾಸ್ ಹೊಸದಾಗಿ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Manik Saha: ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ನೇಮಕ; ಶುಭ ಕೋರಿದ ಬಿಪ್ಲಬ್ ದೇಬ್

ಬಿಜೆಪಿಯ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಈ ಚುನಾವಣೆಯಲ್ಲಿ ಸೋತಿದ್ದು, ಸುಕ್ಲಾ ಚರಣ್ ನೋಟಿಯಾ ಒಬ್ಬರು ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ಪ್ರತಿಪಕ್ಷ ಸಿಪಿಎಂ ಮತ್ತು ಕಾಂಗ್ರೆಸ್ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

Published On - 11:26 am, Wed, 8 March 23