ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ: ಬಿಜೆಪಿ

Tripura Election Results: ದೆಬ್ಬರ್ಮಾ ನೇತೃತ್ವದ ಪಕ್ಷದ ಬೆಂಬಲವನ್ನು ಪಡೆಯುವ ಸಾಧ್ಯತೆಯ ಕುರಿತು ಮಾತನಾಡಿದ ಸುಬ್ರತಾ ಚಕ್ರವರ್ತಿ,"ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ, ಅವರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ" ಎಂದಿದ್ದಾರೆ.

ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ: ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Mar 02, 2023 | 5:49 PM

ಅಗರ್ತಲಾ: ಮಾಜಿ ರಾಜಮನೆತನದ ಪ್ರದ್ಯೋತ್ ದೆಬ್ಬರ್ಮಾ (Pradyot Debbarma) ನೇತೃತ್ವದ ಹೊಸ ಪಕ್ಷವು ತನ್ನ ಬೆಂಬಲವನ್ನು ನೀಡಿದರೆ ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ (Tipra Motha)ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ ಎಂದು ಬಿಜೆಪಿ (BJP) ಗುರುವಾರ ಹೇಳಿದೆ. ಪಿಟಿಐ ಜೊತೆ ಮಾತನಾಡಿದ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಸುಬ್ರತಾ ಚಕ್ರವರ್ತಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ತಮ್ಮ ಪಕ್ಷ ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ.

“ನಾವು ಮೊದಲಿನಿಂದಲೂ ಹೇಳುತ್ತಾ ಬಂದಂತೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತಿದ್ದೇವೆ. ಇಬ್ಬರು ಕೇಂದ್ರ ನಾಯಕರು – ಫಣೀಂದ್ರನಾಥ್ ಶರ್ಮಾ ಮತ್ತು ಸಂಬಿತ್ ಪಾತ್ರ – ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಇಲ್ಲಿದ್ದಾರೆ. ಇಂದು ಹೆಚ್ಚಿನ ಕೇಂದ್ರ ನಾಯಕರು ಆಗಮಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದೆಬ್ಬರ್ಮಾ ನೇತೃತ್ವದ ಪಕ್ಷದ ಬೆಂಬಲವನ್ನು ಪಡೆಯುವ ಸಾಧ್ಯತೆಯ ಕುರಿತು ಮಾತನಾಡಿದ ಅವರು “ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ, ಅವರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಾಗಿದೆ” ಎಂದಿದ್ದಾರೆ. 60 ಸದಸ್ಯ ಬಲದ ಸದನದಲ್ಲಿ ಬಿಜೆಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದು, ಅದರ ಪಾಲುದಾರ ಐಪಿಎಫ್‌ಟಿ ಒಂದು ಸ್ಥಾನದಲ್ಲಿ ಮುಂದಿದೆ.

ಐಪಿಎಫ್‌ಟಿಯ ಬುಡಕಟ್ಟು ಬೆಂಬಲವನ್ನು ಪಡೆದುಕೊಂಡಂತೆ ತೋರುತ್ತಿದ್ದ ಟಿಪ್ರಾ ಮೋಥಾ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷಗಳಾದ ಎಡ-ಕಾಂಗ್ರೆಸ್ ಮೈತ್ರಿಕೂಟ 15 ಸ್ಥಾನಗಳಲ್ಲಿ ಮುಂದಿದೆ. ಇತರರ ಪೈಕಿ, ತ್ರಿಪುರಾದ ಸ್ಥಳೀಯ ಜನಸಂಖ್ಯೆಗಾಗಿ ಟಿಪ್ರಾ ಮೋಥಾ ಪ್ರತ್ಯೇಕ ‘ಗ್ರೇಟರ್ ಟಿಪ್ರಾಲ್ಯಾಂಡ್’ ರಾಜ್ಯ ಬೇಕೆಂದು ಒತ್ತಾಯಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 2 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್