AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ನಂತರ ಉದ್ಧವ್ ಠಾಕ್ರೆ ನರೇಂದ್ರ ಮೋದಿ ಜತೆ ಕೈ ಜೋಡಿಸಲಿದ್ದಾರೆ: ರವಿ ರಾಣಾ

ಪ್ರಧಾನಿಯವರು ದೇಶಕ್ಕಾಗಿ ದುಡಿದ ರೀತಿಗೆ ಜನ ಸಾಮಾನ್ಯರಿಂದ ಅಪಾರ ಬೆಂಬಲ ಸಿಕ್ಕಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ದೇಶಕ್ಕೆ ಪ್ರಧಾನಿ ಮೋದಿಯವ ಅಗತ್ಯವಿದೆ. ಬಾಳಾಸಾಹೇಬ್ ಠಾಕ್ರೆಯವರ ಉದ್ದೇಶ ಮತ್ತು ಆಲೋಚನೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವವರು ಪ್ರಧಾನಿ ಮೋದಿ ಮಾತ್ರ ಎಂದು ರವಿ ರಾಣಾ ಹೇಳಿದ್ದಾರೆ.

ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ನಂತರ ಉದ್ಧವ್ ಠಾಕ್ರೆ ನರೇಂದ್ರ ಮೋದಿ ಜತೆ ಕೈ ಜೋಡಿಸಲಿದ್ದಾರೆ: ರವಿ ರಾಣಾ
ರವಿ ರಾಣಾ
ರಶ್ಮಿ ಕಲ್ಲಕಟ್ಟ
|

Updated on: Jun 03, 2024 | 6:14 PM

Share

ಅಮರಾವತಿ ಜೂನ್ 03: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ (Uddhav Thackeray) ಅವರು ಪ್ರಧಾನಿ ಮೋದಿ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ಪಕ್ಷೇತಕ ಶಾಸಕ ಮತ್ತು ಸಂಸದೆ ನವನೀತ್ ರಾಣಾ ಅವರ ಪತಿ ರವಿ ರಾಣಾ (Ravi Rana) ಹೇಳಿದ್ದಾರೆ. “ನರೇಂದ್ರ ಮೋದಿ ಅವರು ಬಾಳಾಸಾಹೇಬ್ ಠಾಕ್ರೆಯವರ ವಿಚಾರಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ಶಾಸಕ ರವಿ ರಾಣಾ ಹೇಳಿದ್ದಾರೆ.

ಪ್ರಧಾನಿಯವರು ದೇಶಕ್ಕಾಗಿ ದುಡಿದ ರೀತಿಗೆ ಜನ ಸಾಮಾನ್ಯರಿಂದ ಅಪಾರ ಬೆಂಬಲ ಸಿಕ್ಕಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ದೇಶಕ್ಕೆ ಪ್ರಧಾನಿ ಮೋದಿಯವ ಅಗತ್ಯವಿದೆ. ಬಾಳಾಸಾಹೇಬ್ ಠಾಕ್ರೆಯವರ ಉದ್ದೇಶ ಮತ್ತು ಆಲೋಚನೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವವರು ಪ್ರಧಾನಿ ಮೋದಿ ಮಾತ್ರ.

ರಾಣಾ ಹೇಳಿದ್ದೇನು?

ಉದ್ಧವ್ ಠಾಕ್ರೆಗಾಗಿ ತಮ್ಮ ಒಂದು ಕಿಟಕಿ ಯಾವಾಗಲೂ ತೆರೆದಿರುತ್ತದೆ ಎಂದು ಪ್ರಧಾನಿ ಮೋದಿ ಒಮ್ಮೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ 20 ದಿನಗಳ ನಂತರ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆ ಒಂದು ಕಿಟಕಿಯ ಮೂಲಕ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ರವಿ ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

ಮಿತ್ರಪಕ್ಷಗಳ ನಡುವಿನ 2019 ರ ಅಧಿಕಾರ ಹಂಚಿಕೆ ಜಗಳದ ನಂತರ ಶಿವಸೇನಾ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿತ್ತು. ನಂತರ, ಶಿವಸೇನಾ ಎರಡು ಬಣಗಳಾಗಿ ಒಡೆಯಿತು. ಒಂದು ಪ್ರಸ್ತುತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರದ್ದು ಮತ್ತು ಇನ್ನೊಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ. ಬಿಜೆಪಿಯೊಂದಿಗೆ ಮೈತ್ರಿ ಮುರಿದ ನಂತರ, ಉದ್ಧವ್ ಠಾಕ್ರೆ, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ನಿಂದ ಮಹಾ ವಿಕಾಸ್ ಅಘಾಡಿ ಎಂಬ ಮಹಾಮೈತ್ರಿಕೂಟವನ್ನು ರಚಿಸಲಾಯಿತು. MVA ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚಿಸಿತು. ನಂತರ ಅದು ಪತನವಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ