ಮಾರ್ಚ್​​ 24, 26 ಅಮಿತ್​ ಶಾ ರಾಜ್ಯ ಪ್ರವಾಸ: ಮೂರು ಪ್ರತಿಮೆಗಳ ಲೋಕಾರ್ಪಣೆ

|

Updated on: Mar 21, 2023 | 3:26 PM

ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಾರ್ಚ್​​ 24 ಮತ್ತು 26ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್​​ 25ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾರ್ಚ್​​ 24, 26 ಅಮಿತ್​ ಶಾ ರಾಜ್ಯ ಪ್ರವಾಸ: ಮೂರು ಪ್ರತಿಮೆಗಳ ಲೋಕಾರ್ಪಣೆ
ಕೇಂದ್ರ ಗೃಹ ಸಚಿವ ಅಮಿತ್​ ಶಾ
Follow us on

ಬೆಂಗಳೂರು: ರಾಜ್ಯದಲ್ಲಿ ಶ್ರೀಘ್ರದಲ್ಲೇ ವಿಧಾನಸಭೆ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ಪ್ರಚಾರಕಾರ್ಯ ಮತ್ತು ಕ್ಷೇತ್ರ ಹುಡುಕಾಟ ಜೋರಾಗಿಯೇ ನಡೆದಿದೆ. ರಾಜ್ಯ ಬಿಜೆಪಿ (BJP) ಘಟಕ ವಿಜಯಸಂಕಲ್ಪ ಯಾತ್ರೆ (Vijaya Sankalp Yatra) ಮೂಲಕ ರಾಜ್ಯ ಸುತ್ತಿದ್ದು, ಬಿರು ಬಿಸಿಲಿನಲ್ಲಿ ಮತ ಕ್ರೋಢಿಕರಣ ಜೋರಾಗಿಯೇ ನಡೆಸುತ್ತಿದೆ. ಬಿಜೆಪಿ ಕೇಂದ್ರ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ರಾಜ್ಯ ಪ್ರವಾಸ ಮಾಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಮಾರ್ಚ್​​ 24 ಮತ್ತು 26ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾರ್ಚ್​​ 25ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಮಾರ್ಚ್​ 26 ರಂದು ರಾಜ್ಯಕ್ಕೆ ಬರುವ ಅಮಿತ್​ ಶಾ ಮೂರು ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಂದು ಬೀದರ್​ ಜಿಲ್ಲೆ ಗೊರ್ಟಾ ಗ್ರಾಮಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಸರ್ದಾರ್ ವಲ್ಲಭಭಾಯಿ​​ ಪಟೇಲ್​ ಅವರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಗೊರ್ಟಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುತ್ತಾರೆ.

ಅಂದೇ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಾಣ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡರ, ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್​ ಅಶೋಕ ಹೇಳಿದ್ದಾರೆ.

ಇನ್ನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ವಿವಿಧ ಸಮುದಾಯಗಳ ಮತಗಳ ಕ್ರೋಢೀಕರಣಕ್ಕೆ ಟೊಂಕ ಕಟ್ಟಿ ನಿಂತಿದ್ದು, ಸಮುದಾಯದ ನಾಯಕರ ಮೂರ್ತಿಗಳ ನಿರ್ಮಾಣ ಮಾಡುತ್ತಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯಲ್ಲಿ ಅಕ್ಕಮಹಾದೇವಿಯವರ ಬಹೃತ್​ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುಂಚೆ ತೀರ್ವ ಚರ್ಚೆಗೆ ಗ್ರಾಸವಾಗಿದ್ದ ಬೆಳಗಾವಿ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹರಾಜ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ವಿಶೇಷ ಅಂದರೆ ಈ ಪ್ರತಿಮೆ ಎರಡು ಬಾರಿ ಉದ್ಘಾಟನೆಯಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ