ವಾರಣಾಸಿ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆ ಇವಿಎಂ ಸಾಗಿಸುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

ವಾರಣಾಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದು ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂ ಹೊಂದಿರುವ ಎರಡು ಟ್ರಕ್‌ಗಳು ಹೇಗೆ ಪರಾರಿಯಾಗುತ್ತವೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಎಲ್ಲಿಂದಲಾದರೂ ಸರಿಸಲು ಸಾಧ್ಯವಿಲ್ಲ ಎಂದ ಅಖಿಲೇಶ್.

ವಾರಣಾಸಿ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆ ಇವಿಎಂ ಸಾಗಿಸುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ
ಅಖಿಲೇಶ್ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 08, 2022 | 9:13 PM

ಲಖನೌ: ಉತ್ತರ ಪ್ರದೇಶದಲ್ಲಿ (Uttarpradesh) ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಸವಾಲಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav), ವಾರಣಾಸಿಯ (Varanasi) ಮತ ಎಣಿಕೆಗೆ ಕೇವಲ ಎರಡು ದಿನಗಳ ಮೊದಲು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಎಣಿಕೆ ಕೇಂದ್ರದಿಂದ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದ ಅವರು, 2017ರಲ್ಲಿ ಸುಮಾರು 50 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಅಂತರ 5,000ಕ್ಕಿಂತ ಕಡಿಮೆ ಮತಗಳನ್ನು ಗಳಿಸಿತ್ತು ಎಂದು ಹೇಳಿದ್ದಾರೆ. ಟ್ರಕ್‌ನಲ್ಲಿರುವ ಕೆಲವು ಇವಿಎಂಗಳ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ, ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಇವಿಎಂಗಳನ್ನು ಮತದಾನಕ್ಕೆ ಬಳಸಿದ್ದಲ್ಲ,ಇವು “ಹ್ಯಾಂಡ್-ಆನ್ ತರಬೇತಿ”ಗಾಗಿ ಬಳಸಿದವುಗಳು ಎಂದಿದ್ದಾರೆ.  “ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು “ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ ಮತ್ತು ಸಿಸಿಟಿವಿ ಕಣ್ಗಾವಲು ಇದೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದರು.  ಇವಿಎಂಗಳು ಮಂಡಿ ಎಣಿಕೆ ಕೇಂದ್ರದಲ್ಲಿನ ಸಂಗ್ರಹಣೆ ಪ್ರದೇಶದಿಂದ ಸ್ಥಳೀಯ ಕಾಲೇಜಿಗೆ ಹೋಗುತ್ತಿವೆ ಎಂದು ಅವರು ಹೇಳಿದರು.

ಮಾಧ್ಯಮಗಳ ಮುಂದೆ ಬಂದ ಅಖಿಲೇಶ್ ಯಾದವ್, ಈ ಹೇಳಿಕೆಗೆ ಕಟುವಾಗಿ ಪ್ರತಿವಾದ ಮಾಡಿದರು. ವಾರಣಾಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದು ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂ ಹೊಂದಿರುವ ಎರಡು ಟ್ರಕ್‌ಗಳು ಹೇಗೆ ಪರಾರಿಯಾಗುತ್ತವೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಎಲ್ಲಿಂದಲಾದರೂ ಸರಿಸಲು ಸಾಧ್ಯವಿಲ್ಲ,” ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ ಎಂದ ಅವರು, ‘ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಸುಮಾರು ಸಬೂಬು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ 5,000ಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ 47 ಸ್ಥಾನಗಳನ್ನು ಗೆದ್ದಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರು ಹೇಳಿದ್ದಾರೆ. ಈಗ ಎಕ್ಸಿಟ್ ಪೋಲ್‌ಗಳು “ಬಿಜೆಪಿ ಗೆಲ್ಲುತ್ತದೆ ಎಂಬ ಗ್ರಹಿಕೆಯನ್ನು ಹೆಚ್ಚಿಸುತ್ತಿದೆ, ಆಗಬಹುದಾದ ಯಾವುದೇ ಕಳ್ಳತನವನ್ನು ಬದಿಗೊತ್ತಲಾಗಿದೆ” ಎಂದು ಅವರು ಹೇಳಿದರು.

ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಗೆ ಎಚ್ಚರಿಕೆ ನೀಡುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮ ಎಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು ಮತ ಎಣಿಕೆಯಲ್ಲಿ ಯುವಕರು ಸೈನಿಕರಾಗಬೇಕು ಎಂದು ಅಖಿಲೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ  ಓದಿ: ಸುಮಿಯಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ: ಕೇಂದ್ರ ಸರ್ಕಾರ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ