AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Election: ಉತ್ತರ ಪ್ರದೇಶ ಚುನಾವಣೆ ಮುಂದೂಡಲು ಪ್ರಧಾನಿ ಮೋದಿ, ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ಸಲಹೆ: ಒಮಿಕ್ರಾನ್ ಆತಂಕ ಹಿನ್ನೆಲೆ

‘ಚುನಾವಣಾ ಸಮಾವೇಶಗಳಿಗೆ ತಡೆಹಾಕದಿದ್ದರೆ ಇಲ್ಲಿನ ಪರಿಸ್ಥಿತಿ 2ನೇ ಅಲೆಗಿಂತಲೂ ಭೀಕರವಾಗಲಿದೆ’ ಎಂದು ನ್ಯಾಯಮೂರ್ತಿ ಶೇಖರ್ ಯಾದವ್ ಎಚ್ಚರಿಸಿದ್ದಾರೆ.

Uttar Pradesh Election: ಉತ್ತರ ಪ್ರದೇಶ ಚುನಾವಣೆ ಮುಂದೂಡಲು ಪ್ರಧಾನಿ ಮೋದಿ, ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ಸಲಹೆ: ಒಮಿಕ್ರಾನ್ ಆತಂಕ ಹಿನ್ನೆಲೆ
ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 23, 2021 | 11:25 PM

Share

ಅಲಹಾಬಾದ್: ಒಮಿಕ್ರಾನ್ ಪ್ರಭೇದದ ಕೊರೊನಾ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಉತ್ತರಪ್ರದೇಶದ ವಿಧಾನಸಭಾ ಚುನಾವಣೆ ಮುಂದೂಡಲು ಅಲಹಾಬಾದ್ ಹೈಕೋರ್ಟ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಸಲಹೆ ಮಾಡಿದೆ. ಜೀವ ಇದ್ದರೇ, ಜೀವನ‌ ಎಂಬ ಮಾತನ್ನು ಹೈಕೋರ್ಟ್ ನೆನಪಿಸಿದೆ. ಭಾರತದಲ್ಲಿ ಉಚಿತ ಲಸಿಕೆ ಅಭಿಯಾನ ನಡೆಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿರುವ ಹೈಕೋರ್ಟ್​, ಕೊರೊನಾ ಮಹಾಮಾರಿಯ ಸ್ಥಿತಿ‌ ನೋಡಿ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಸಮಾವೇಶ, ಬಹಿರಂಗ ಸಭೆಗಳು ಹಾಗೂ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಬಗ್ಗೆ ಚಿಂತನೆ ನಡೆಸಬೇಕು ಎಂದು ತನ್ನ ಲಿಖಿತ ನಿರ್ದೇಶನದಲ್ಲಿ ಹೈಕೋರ್ಟ್ ಸಲಹೆ ಮಾಡಿದೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 40 ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಹತ್ತು ಬಹಿರಂಗ ಸಮಾವೇಶಗಳನ್ನು ನಡೆಸಿದ್ದಾರೆ.

‘ಚುನಾವಣಾ ಸಮಾವೇಶಗಳಿಗೆ ತಡೆಹಾಕದಿದ್ದರೆ ಇಲ್ಲಿನ ಪರಿಸ್ಥಿತಿ 2ನೇ ಅಲೆಗಿಂತಲೂ ಭೀಕರವಾಗಲಿದೆ’ ಎಂದು ನ್ಯಾಯಮೂರ್ತಿ ಶೇಖರ್ ಯಾದವ್ ಎಚ್ಚರಿಸಿದ್ದಾರೆ.

ಅಖಿಲೇಶ್​ ಯಾದವ್​ ಪತ್ನಿ, ಪುತ್ರಿಗೆ ಕೊವಿಡ್ 19 ಸೋಂಕು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್ (Akhilesh Yadav)​ ಪತ್ನಿ, ಸಂಸದೆ ಡಿಂಪಲ್​ ಯಾದವ್​ ಮತ್ತು ಪುತ್ರಿ ಕೊವಿಡ್​ 19 ಸೋಂಕಿಗೆ ಒಳಗಾಗಿದ್ದಾರೆ. ಇವರಿಬ್ಬರಲ್ಲೂ ಕೊವಿಡ್​ 19 (Covid 19) ದೃಢಪಟ್ಟ ಬೆನ್ನಲ್ಲೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Uttar Pradesh CM Yogi Adityanath)​, ಅಖಿಲೇಶ್ ಯಾದವ್​ಗೆ ಕರೆ ಮಾಡಿ, ಅವರ ಪತ್ನಿ, ಪುತ್ರಿಯ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಇಬ್ಬರೂ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆಂದು ಮುಖ್ಯಮಂತ್ರಿ ಕಾರ್ಯಾಲಯ ನಿನ್ನೆ ತಿಳಿಸಿದೆ. ಅಖಿಲೇಶ್ ಯಾದವ್​ ಕೂಡ ಕೊವಿಡ್​ 19 ತಪಾಸಣೆಗೆ ಒಳಗಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ.

ಇನ್ನು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಿಂಪಲ್​ ಯಾದವ್​, ನನಗೆ ಕೊವಿಡ್​ 19 ಸೋಂಕು ದೃಢಪಟ್ಟ ಬೆನ್ನಲ್ಲೇ, ಸ್ವತಃ ಐಸೋಲೇಟ್​ಗೆ ಒಳಗಾಗಿದ್ದೇನೆ. ನಾನು ಈಗಾಗಲೇ ಎರಡೂ ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಸದ್ಯ ಯಾವುದೇ ಲಕ್ಷಣಗಳೂ ಇಲ್ಲ. ಹಾಗಿದ್ದಾಗ್ಯೂ ಕೂಡ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಅಖಿಲೇಶ್ ಯಾದವ್​ ಕೊವಿಡ್​ 19 ಲಸಿಕೆ ಪಡೆದಿದ್ದಾರೋ ಇಲ್ಲವೋ ಎಂಬುದು ಗೊತ್ತಾಗಿಲ್ಲ. ಸದ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಅವರು, ನಾನು ಕೊವಿಡ್​ 19 ಲಸಿಕೆ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿಯವರ ಫೋಟೊ ತೆಗೆದರೆ ಮಾತ್ರ ನಾನು ಲಸಿಕೆ ಹಾಕಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ನನಗೆ ಒಂದು ಬಾರಿ ಕೊರೊನಾ ಬಂದು ಹೋಗಿದೆ. ಒಬ್ಬರಿಗೆ ಎರಡು ಸಲ ಕೊರೊನಾ ವೈರಸ್​ ತಗುಲುವುದಿಲ್ಲ ಎಂದು ಈಗಾಗಲೇ ಅಧ್ಯಯನಕಾರರು ಹೇಳಿದ್ದಾರೆ. ಹಾಗಾಗಿ ನಾನ್ಯಾಕೆ ಲಸಿಕೆ ಪಡೆಯಲಿ ಎಂದೂ ಪ್ರಶ್ನಿಸಿದ್ದರು. ಸರ್ಕಾರ ಸರ್ಟಿಫಿಕೇಟ್​ ಮೇಲೆ ಪ್ರಧಾನಿ ಮೋದಿಯವರ ಫೋಟೋ ತೆಗೆದು, ಆ ಜಾಗದಲ್ಲಿ ರಾಷ್ಟ್ರಧ್ವಜದ ಚಿತ್ರ ಹಾಕಿದರೆ ನಾನು ಲಸಿಕೆ ತೆಗೆದುಕೊಳ್ಳುತ್ತೇನೆ ಎಂದಿದ್ದರು. ನಂತರ ಅವರ ತಂದೆ ಮುಲಾಯಂ ಸಿಂಗ್​ ಯಾದವ್​ ಲಸಿಕೆ ಪಡೆಯುವುದಾಗಿ ಹೇಳಿದ ಬೆನ್ನಲ್ಲೇ ತಾವೂ ಕೊರೊನಾ ಲಸಿಕೆ ಪಡೆಯುತ್ತೇನೆ ಎಂದಿದ್ದರು. 2021ರ ಮಾರ್ಚ್​ನಲ್ಲಿಯೇ ಅಖಿಲೇಶ್ ಯಾದವ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಮಗೆ ಕೊರೊನಾ ವೈರಸ್ ತಗುಲಿದ್ದನ್ನು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದರು. ಅವರೂ ಕೂಡ ಮನೆಯಲ್ಲೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: Uttar Pradesh Assembly Polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಜನ ವಿಶ್ವಾಸ ಯಾತ್ರೆಗೆ; ಕೇಂದ್ರ ಸಚಿವರುಗಳಿಂದ ಚಾಲನೆ ಇದನ್ನೂ ಓದಿ: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ