ಬಿಜೆಪಿಗೆ ಸೇರಿದ ನಂತರ ಮುಲಾಯಂ ಸಿಂಗ್ ಯಾದವ್ ಅವರ ಆಶೀರ್ವಾದ ಪಡೆದ ಸೊಸೆ ಅಪರ್ಣಾ ಯಾದವ್

Aparna Yadav ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಬಿಷ್ತ್ ಯಾದವ್ ಅವರು ಲಖನೌ ತಲುಪಿದ ಕೂಡಲೇ ಆಶೀರ್ವಾದ ಪಡೆಯಲು ತಮ್ಮ ಮಾವನನ್ನು ಭೇಟಿ ಮಾಡಿದರು.

ಬಿಜೆಪಿಗೆ ಸೇರಿದ ನಂತರ ಮುಲಾಯಂ ಸಿಂಗ್ ಯಾದವ್ ಅವರ ಆಶೀರ್ವಾದ ಪಡೆದ ಸೊಸೆ ಅಪರ್ಣಾ ಯಾದವ್
ಮುಲಾಯಂ ಸಿಂಗ್ ಆಶೀರ್ವಾದ ಪಡೆಯುತ್ತಿರುವ ಅಪರ್ಣಾ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 21, 2022 | 12:07 PM

ಲಖನೌ: ಮುಲಾಯಂ ಸಿಂಗ್ ಯಾದವ್  (Mulayam Singh Yadav)ಅವರ ಕುಟುಂಬದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳ ನಡುವೆ, ಅಪರ್ಣಾ ಬಿಷ್ತ್ ಯಾದವ್ (Aparna Yadav) ಗುರುವಾರ ಉತ್ತರ ಪ್ರದೇಶದ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ ಸಮಾಜವಾದಿ ಪಕ್ಷದ ವರಿಷ್ಠ, ಮಾವ ಮುಲಾಯಂ ಸಿಂಗ್ ಅವರ ಆಶೀರ್ವಾದ ಪಡೆದರು. ಮುಲಾಯಂ ಅವರ ಕಿರಿಸೊಸೆ ಅಪರ್ಣಾ ಜನವರಿ 20 ರಂದು ಬಿಜೆಪಿ ಸೇರಿದ್ದರು. ಶುಕ್ರವಾರ ಬೆಳಿಗ್ಗೆ ಅಪರ್ಣಾ ಯಾದವ್ ಅವರು ಟ್ವೀಟ್ ಮಾಡಿದ ಫೋಟೋವು ಬಿಜೆಪಿಯೊಂದಿಗೆ ತನ್ನ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಅವರ ಆಶೀರ್ವಾದ ಪಡೆಯಲು ‘ಮಾವ, ನೇತಾ ಜಿ’ ಅವರ ಪಾದಗಳನ್ನು ಸ್ಪರ್ಶಿಸುತ್ತಿರುವುದನ್ನು ತೋರಿಸಿದೆ. ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಬಿಷ್ತ್ ಯಾದವ್ ಅವರು ಲಖನೌ ತಲುಪಿದ ಕೂಡಲೇ ಆಶೀರ್ವಾದ ಪಡೆಯಲು ತಮ್ಮ ಮಾವನನ್ನು ಭೇಟಿ ಮಾಡಿದರು. ಲಖನೌ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯ ಬಿಜೆಪಿ ಬೆಂಬಲಿಗರೊಂದಿಗೆ ಅಪರ್ಣಾ ಅವರನ್ನು ಸ್ವಾಗತಿಸಲಾಯಿತು.

ಬಿಜೆಪಿಗೆ ಸೇರ್ಪಡೆಯಾದ ನಾಯಕಿ ಅಪರ್ಣಾ, ಭಾರತವು ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೆಜ್ಜೆಗಳನ್ನು ಅನುಸರಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಅಪರ್ಣಾ ಯಾದವ್ ಅವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖನೌ ಕ್ಯಾಂಟ್‌ನಿಂದ ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತಮ್ಮ ಸೊಸೆ ಅಪರ್ಣಾ ಯಾದವ್ ಅವರನ್ನು ಬಿಜೆಪಿಗೆ ಸೇರದಂತೆ ತಡೆಯಲು ತಮ್ಮ ತಂದೆ ಮುಲಾಯಂ ತೀವ್ರವಾಗಿ ಪ್ರಯತ್ನಿಸಿದರು ಎಂದು ಹೇಳಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.

2022 ಉತ್ತರ ಪ್ರದೇಶ ಚುನಾವಣೆಗೆ ಮುಂಚಿತವಾಗಿ ಅಪರ್ಣಾ ಬಿಜೆಪಿ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಅಖಿಲೇಶ್, ಎಸ್‌ಪಿಯ ಸಮಾಜವಾದಿ ಸಿದ್ಧಾಂತವು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವುದರಿಂದ “ಸಂತೋಷ” ಎಂದು ಹೇಳಿದರು.

“ಮೊದಲನೆಯದಾಗಿ, ನಾನು ಅಭಿನಂದಿಸುತ್ತೇನೆ ಮತ್ತು ಶುಭ ಹಾರೈಸುತ್ತೇನೆ. ನಮ್ಮ ಸಮಾಜವಾದಿ ಸಿದ್ಧಾಂತವು ವಿಸ್ತರಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನಮ್ಮ ಸಿದ್ಧಾಂತವು ಅಲ್ಲಿಗೆ ತಲುಪುತ್ತದೆ ಮತ್ತು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಕೆಲಸ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮಾಧ್ಯಮದವರನ್ನು ಉದ್ದೇಶಿಸಿಮಾತನಾಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಹೇಳಿದರು. 2022 ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ದೊಡ್ಡ ಆಘಾತ ನೀಡಿ, ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಅವರ ಭಾವ ಪ್ರಮೋದ್ ಗುಪ್ತಾ ಮತ್ತು ಕಿರಿಯ ಸೊಸೆ ಅಪರ್ಣಾ ಯಾದವ್ ಈ ವಾರ ಬಿಜೆಪಿ ಸೇರಿದರು.

ಬಿಜೆಪಿ ಸೇರಿದ ನಂತರ ಪ್ರಮೋದ್ ಗುಪ್ತಾ ಅವರು ಅಖಿಲೇಶ್ ಅವರು ಮುಲಾಯಂ ಸಿಂಗ್ ಯಾದವ್ ಅವರನ್ನು ಬಂಧಿಯಾಗಿರಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಉತ್ತರಪ್ರದೇಶದ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ?

Published On - 11:58 am, Fri, 21 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ