AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Polling Booth ಮೊದಲ ಬಾರಿ ಮತದಾನ ಮಾಡುವವರು ಮತಗಟ್ಟೆ ವಿವರಗಳನ್ನು ಪಡೆಯುವುದು ಹೇಗೆ?

ಮತಗಟ್ಟೆಗೆ ಹೋಗುವ ಮುನ್ನ ಮತ ಚಲಾಯಿಸುವ ಎಲ್ಲಾ ಮತದಾರರು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹೇಗೆ ಪರಿಶೀಲಿಸಬಹುದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ.

Assembly Election Polling Booth ಮೊದಲ ಬಾರಿ ಮತದಾನ ಮಾಡುವವರು ಮತಗಟ್ಟೆ ವಿವರಗಳನ್ನು ಪಡೆಯುವುದು ಹೇಗೆ?
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 10, 2022 | 6:00 AM

Share

ಲಖನೌ: ಉತ್ತರ ಪ್ರದೇಶದ ಚುನಾವಣೆ (UP Assembly Election) ಗುರುವಾರ ಆರಂಭವಾಗಿದ್ದು, ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳಲ್ಲಿ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting) ನಡೆಯಲಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಈ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಲಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಘಾಜಿಯಾಬಾದ್, ಬುಲಂದ್‌ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ಮತಗಟ್ಟೆಗೆ ಹೋಗುವ ಮುನ್ನ ಮತ ಚಲಾಯಿಸುವ ಎಲ್ಲಾ ಮತದಾರರು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹೇಗೆ ಪರಿಶೀಲಿಸಬಹುದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:  ಭಾರತದ ಚುನಾವಣಾ ಆಯೋಗದ ವೆಬ್‌ಸೈಟ್ electoralsearch.in ಗೆ ಲಾಗಿನ್ ಮಾಡಿ. ನೀವು ಮತದಾರರ ಫೋಟೋ ಗುರುತಿನ ಚೀಟಿ (EPIC) ಸಂಖ್ಯೆಯನ್ನು ಹೊಂದಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ಅವಲಂಬಿಸಿ ನಿಮ್ಮ ವಿವರಗಳನ್ನು ಹುಡುಕಲು ಎರಡು ಮಾರ್ಗಗಳಿವೆ.

EPIC ಸಂಖ್ಯೆ ಹೊಂದಿದ್ದರೆ

ವೆಬ್‌ಸೈಟ್‌ನಲ್ಲಿ, ‘EPIC ಸಂಖ್ಯೆಯಿಂದ ಹುಡುಕಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ನಿಮ್ಮ EPIC ಸಂಖ್ಯೆ, ರಾಜ್ಯ, ಕ್ಯಾಪ್ಚಾ ಪಠ್ಯವನ್ನು ನಮೂದಿಸಿ ಹುಡುಕಿ

EPIC ಸಂಖ್ಯೆ ಮತ್ತು ಬೂತ್ ವಿಳಾಸ ಸೇರಿದಂತೆ ವಿವರಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ

ವಿವರಗಳನ್ನು ಡೌನ್‌ಲೋಡ್ ಮಾಡಲು Print Voter Information  ಕ್ಲಿಕ್ ಮಾಡಿ

EPIC ಸಂಖ್ಯೆ ಇಲ್ಲದೇ ಇದ್ದರೆ ಹೀಗೆ ಮಾಡಿ

ವೆಬ್‌ಸೈಟ್‌ಗೆ ಲಾಗ್ ಇನ್ ಮಾಡಿ ಮತ್ತು Search by Details ಕ್ಲಿಕ್ ಮಾಡಿ

ಹೆಸರು, ತಂದೆಯ ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ಲಿಂಗ, ರಾಜ್ಯ, ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರದಂತಹ ವಿವರಗಳನ್ನು ನಮೂದಿಸಿ

ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ‘ Search ‘ ಕ್ಲಿಕ್ ಮಾಡಿ

EPIC ಸಂಖ್ಯೆ ಮತ್ತು ಮತಗಟ್ಟೆ ವಿಳಾಸ ಸೇರಿದಂತೆ ವಿವರಗಳು ಡಿಸ್ ಪ್ಲೇ ಆಗುತ್ತವೆ

ಸೂಚನೆಗಳನ್ನು ಡೌನ್‌ಲೋಡ್ ಮಾಡಲು ‘Print Voter Information’ ಕ್ಲಿಕ್ ಮಾಡಿ

EPIC ಸಂಖ್ಯೆ ಎಂದರೇನು?

EPIC ಎಂದರೆ Electors Photo Identification Card ಮತ್ತು ಅದರ ಸಂಖ್ಯೆ ಮತದಾರರ ಗುರುತಿನ ಚೀಟಿ ಸಂಖ್ಯೆ. ಇದು ನಿಮ್ಮ ಮತದಾರರ ಗುರುತಿನ ಚೀಟಿಯಲ್ಲಿನ ಫೋಟೋದ ಮೇಲೆ ನೇರವಾಗಿ ಪ್ರದರ್ಶಿಸಲ್ಪಡುತ್ತದೆ.

e-EPIC ಅಥವಾ ಡಿಜಿಟಲ್ ಮತದಾರರ ಗುರುತಿನ ಚೀಟಿ

ಕಳೆದ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನದಂದು ಭಾರತದ ಚುನಾವಣಾ ಆಯೋಗವು ಇ-ಇಪಿಐಸಿ (Electronic Electoral Photo Identity Card) ಕಾರ್ಯಕ್ರಮವನ್ನು ಪ್ರಾರಂಭಿಸಿತು. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಮುಂಬರುವ ಐದು ರಾಜ್ಯಗಳ ಚುನಾವಣೆಗಳಿಗೆ ಮತದಾರರು ಈ ಡಿಜಿಟಲ್ ಆಯ್ಕೆಯನ್ನು ಪಡೆಯಬಹುದು.

ಇದನ್ನೂ ಓದಿ: Video: ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಕ್ತಾಯವಾದ ಬೆನ್ನಲ್ಲೇ ಯಮುನಾ ಪೂಜೆ ನೆರವೇರಿಸಿದ ಪ್ರಿಯಾಂಕಾ ಗಾಂಧಿ; ವೇದ ಮಂತ್ರ ಪಠಣ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ