AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Voters list ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಹುಡುಕುವುದು ಹೇಗೆ?

ಫೆಬ್ರವರಿ 10 ರಂದು 2022 ರ ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದಲ್ಲಿ ಮತ ಚಲಾಯಿಸಲು ಹೋಗುವವರಲ್ಲಿ ನೀವೂ ಒಬ್ಬರಾಗಿದ್ದರೆ, ನೀವು ಭಾರತದ ಚುನಾವಣಾ ಆಯೋಗವು ನೀಡಿದ ಮಾನ್ಯವಾದ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು.

Assembly Election Voters list ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಹುಡುಕುವುದು ಹೇಗೆ?
ಪ್ರಾತಿನಿಧಿಕ ಚಿತ್ರImage Credit source: ಪಿಟಿಐ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 10, 2022 | 6:10 AM

Share

ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆ (UP Assembly Election 2022) ಗುರುವಾರ ಆರಂಭವಾಗಿದ್ದು, ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ರಾಜಕೀಯವಾಗಿ ಏಳು ಹಂತದ ಚುನಾವಣೆಯ ಮೊದಲ ಸುತ್ತಿನ ಮತದಾನಕ್ಕೆ ಕ್ಷೇತ್ರಗಳಲ್ಲಿ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿತು. ಕೊವಿಡ್-ಸುರಕ್ಷಿತ ಮತದಾನವನ್ನು ಖಚಿತಪಡಿಸಿಕೊಳ್ಳಲು ಭಾರತದ ಚುನಾವಣಾ ಆಯೋಗದ ( Election Commission of India) ಮಾರ್ಗಸೂಚಿಗಳ ಪ್ರಕಾರ ಈ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಲಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಪ್ರಮುಖರ ಭವಿಷ್ಯ ಮೊದಲ ಹಂತದಲ್ಲಿ ನಿರ್ಣಯವಾಗಲಿದೆ. ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಘಾಜಿಯಾಬಾದ್, ಬುಲಂದ್‌ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಹಂತದಲ್ಲಿ ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಫೆಬ್ರವರಿ 10 ರಂದು 2022 ರ ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದಲ್ಲಿ ಮತ ಚಲಾಯಿಸಲು ಹೋಗುವವರಲ್ಲಿ ನೀವೂ ಒಬ್ಬರಾಗಿದ್ದರೆ, ನೀವು ಭಾರತದ ಚುನಾವಣಾ ಆಯೋಗವು ನೀಡಿದ ಮಾನ್ಯವಾದ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. ಆದಾಗ್ಯೂ, ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸಲು ವೋಟರ್ ಐಡಿಯನ್ನು ಹೊಂದಿರುವುದು ಸಾಕಾಗುವುದಿಲ್ಲ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸುವುದು ಮುಖ್ಯ.

ಮತದಾರರು ಆಗ್ರಾ, ನೋಯ್ಡಾ, ಗೌತಮ್ ಬುದ್ಧ ನಗರ, ಮುಜಾಫರ್ ನಗರ, ಮೀರತ್ ಅಥವಾ ರಾಜ್ಯದ ಯಾವುದೇ ಜಿಲ್ಲೆಯಲ್ಲಿದ್ದರೂ, ಚುನಾವಣೆಗೆ ಮುಂಚಿತವಾಗಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸುವುದು ಕಡ್ಡಾಯವಾಗಿದೆ. ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಮಾಡುವ ಮೂಲಕ ವಿವರವಾದ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ವೀಕ್ಷಿಸಬಹುದು. ಪಟ್ಟಿಯು ಪ್ರತಿ ಮತದಾರರಿಗೆ ನಿಯೋಜಿಸಲಾದ ಮತಗಟ್ಟೆಯನ್ನು ಸಹ ಪ್ರದರ್ಶಿಸುತ್ತದೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡುವುದು ಹೇಗೆ?

ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (NVSP) https://www.nvsp.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಸರ್ಚ್ ಇನ್ ಎಲೆಕ್ಟೋರಲ್ ರೋಲ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಹೊಸ ವೆಬ್‌ಪುಟವು ತೆರೆಯುತ್ತದೆ, ಅಲ್ಲಿ ನೀವು ನಿಮ್ಮ ವಿವರಗಳನ್ನು ನಮೂದಿಸಬೇಕು. ಈಗ, ಹೊಸ ವೆಬ್‌ಪುಟವು ಮತದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಲು ಎರಡು ಮಾರ್ಗಗಳನ್ನು ತೋರಿಸುತ್ತದೆ.

ಹುಡುಕುವ ಮೊದಲ ಆಯ್ಕೆ – ಇದರಲ್ಲಿ ನೀವು ನಿಮ್ಮ ಹೆಸರು, ತಂದೆಯ / ಗಂಡನ ಹೆಸರು, ವಯಸ್ಸು, ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ನಮೂದಿಸಬೇಕು. ಈ ಮಾಹಿತಿಯನ್ನು ನಮೂದಿಸಿದ ನಂತರ, ನೀವು ನಿಮ್ಮ ರಾಜ್ಯ, ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವನ್ನು ನಮೂದಿಸಬೇಕು.

ಹುಡುಕಲು ಇನ್ನೊಂದು ಆಯ್ಕೆ- EPIC ಸಂಖ್ಯೆಯ ಮೂಲಕ ಹುಡುಕುವುದು. ಈ ಪ್ರಕ್ರಿಯೆಯಲ್ಲಿ, ನೀವು ನಿಮ್ಮ EPIC ಸಂಖ್ಯೆ ಮತ್ತು ರಾಜ್ಯವನ್ನು ನಮೂದಿಸಬೇಕು. ಈ ಎರಡೂ ಆಯ್ಕೆಗಳಿಗಾಗಿ, ನೀವು ಕೊನೆಯಲ್ಲಿ ಕ್ಯಾಪ್ಚಾ ಕೋಡ್ ಅನ್ನು ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಅಧಿಕೃತಗೊಳಿಸಬೇಕು. ಈ ಮಾಹಿತಿಯು ಪೂರ್ಣಗೊಂಡ ನಂತರ, ವೆಬ್‌ಪುಟವು ನಿಮಗೆ ಮತದಾರರ ನೋಂದಣಿ ವಿವರಗಳನ್ನು ತೋರಿಸುತ್ತದೆ.

ಎಸ್​ಎಂಎಸ್  ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ

ಮೊಬೈಲ್ ಸಂದೇಶ ವಿಭಾಗದಲ್ಲಿ EPIC ಎಂದು ಟೈಪ್ ಮಾಡಿ. ನಿಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ನಮೂದಿಸಿ. ಈ SMS ಅನ್ನು 9211728082 ಅಥವಾ 1950 ಗೆ ಕಳುಹಿಸಿ. ನಿಮ್ಮ ಮತಗಟ್ಟೆ ಸಂಖ್ಯೆ ಮತ್ತು ಹೆಸರು ನಿಮ್ಮ ಫೋನ್ ಪರದೆಯ ಮೇಲೆ ಡಿಸ್ ಪ್ಲೇ ಆಗುತ್ತದೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ, ‘no record found’ ಎಂದು ಕಾಣಿಸುತ್ತದೆ.

ಇದನ್ನೂ ಓದಿ: ಪಾಂಡವರ ರಾಜಧಾನಿ ಹಸ್ತಿನಾಪುರದಲ್ಲಿ ಜಯ ಸಾಧಿಸುವವರೇ ಉತ್ತರ ಪ್ರದೇಶದಲ್ಲಿ ಸದಾ ಅಧಿಕಾರಕ್ಕೆ ಬರುವುದು, ಇದು ನಿಜ!!

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..