ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ ವಿರುದ್ಧ ಕಣಕ್ಕಿಳಿಯಲಿದ್ದಾರೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್

Bhim Army chief Chandrashekhar Azad ಕಟ್ಟಾ ಬಿಜೆಪಿ ವಿಮರ್ಶಕರಾಗಿರುವ ಆಜಾದ್ ಅವರು ತಮ್ಮ ರಾಜಕೀಯ ಸಂಘಟನೆ - ಆಜಾದ್ ಸಮಾಜ ಪಕ್ಷ ಇತರರೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಎಂದು ಜನವರಿ 18 ರಂದು ಹೇಳಿದ್ದಾರೆ.

ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ ವಿರುದ್ಧ ಕಣಕ್ಕಿಳಿಯಲಿದ್ದಾರೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್
ಭೀ ಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 20, 2022 | 2:07 PM

ಲಖನೌ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ಅವರು ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದಿಂದ (Gorakhpur) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅವರು ಪ್ರಸ್ತುತ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ ಅವರೊಂದಿಗೆ ನೇರ ಹೋರಾಟ ನಡೆಸಲಿದ್ದಾರೆ. ಜನವರಿ 18 ರಂದು, ಕಟ್ಟಾ ಬಿಜೆಪಿ ವಿಮರ್ಶಕರಾಗಿರುವ ಆಜಾದ್ ಅವರು ತಮ್ಮ ರಾಜಕೀಯ ಸಂಘಟನೆ – ಆಜಾದ್ ಸಮಾಜ ಪಕ್ಷ ಇತರರೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಮತ್ತು ನಮ್ಮ ಹೋರಾಟ ಯಾವಾಗಲೂ ಆಡಳಿತ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೊಂದಿಗೆ ಇರುತ್ತದೆ ಎಂದು ಹೇಳಿದ್ದಾರೆ. “ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಜಿ ಮತ್ತು ಮತ್ಯಾವರ್ ಕಾನ್ಷಿ ರಾಮ್ ಸಾಹೇಬ್ ಅವರ “ಬಹುಜನ ಹಿತಾಯ-ಬಹುಜನ ಸುಖಾಯ” ಸಿದ್ಧಾಂತವನ್ನು ಮುಂದಕ್ಕೆ ತೆಗೆದುಕೊಂಡು, ಆಜಾದ್ ಸಮಾಜ ಪಕ್ಷ (ಕಾನ್ಶಿರಾಮ್) ಗೋರಖ್‌ಪುರ (ಅರ್ಬನ್) ಸಮಾಜ ಪಕ್ಷದಿಂದ ಚಂದ್ರಶೇಖರ್ ಆಜಾದ್ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದೆ ಎಂದು ಭೀಮ್ ಆರ್ಮಿ  ಪಕ್ಷ ಹೇಳಿಕೆ ನೀಡಿದೆ.

ಇದು ಚಂದ್ರಶೇಖರ್ ಆಜಾದ್ ಅವರ ಮೊದಲ ಚುನಾವಣೆಯೂ ಹೌದು. 34 ವರ್ಷದ ಆಜಾದ್ 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹಿಂದೆ ಸರಿದಿದ್ದರು. ಆ ಸಮಯದಲ್ಲಿ ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಪಕ್ಷ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ ಎಂದು ಹೇಳಿದ್ದರು. ಈಗ ಅವರ ಬಳಿ ಪಕ್ಷ ಇರುವುದರಿಂದ ಯೋಗಿ ಆದಿತ್ಯನಾಥ ವಿರುದ್ಧ ಕಣಕ್ಕಿಳಿದಿರುವುದಾಗಿ ಅಜಾದ್ ಹೇಳಿದ್ದಾರೆ.

“ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸ್ಥಾನ ಗೆಲ್ಲುವುದು ನನಗೆ ಮುಖ್ಯವಲ್ಲ. ಯೋಗಿ ಆದಿತ್ಯನಾಥ ಅವರು ವಿಧಾನಸಭೆಗೆ ಬರಬಾರದು ಎಂಬುದು ನನಗೆ ಮುಖ್ಯವಾಗಿದೆ. ಹಾಗಾಗಿ ಅವರು ಎಲ್ಲಿ ಸ್ಪರ್ಧಿಸಿದರೂ ನಾನು ಸ್ಪರ್ಧಿಸುತ್ತೇನೆ” ಎಂದು ಅವರು ಕಳೆದ ವರ್ಷ ಹೇಳಿದ್ದರು.

ಭೀಮ್ ಆರ್ಮಿ ಮುಖ್ಯಸ್ಥ ಮತ್ತು ಅವರ ಪಕ್ಷವು ಗೋರಖ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಯಾವುದೇ ನೆಲೆಯನ್ನು ಹೊಂದಿಲ್ಲ. ಗೋರಖ್‌ಪುರ್ ಸದರ್ ಅಸೆಂಬ್ಲಿ ಸ್ಥಾನದಲ್ಲಿ ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಗೆದ್ದಿದ್ದು ಬಿಟ್ಟರೆ 1989 ರಿಂದ ಇದು ಬಿಜೆಪಿ ತೆಕ್ಕೆಯಲ್ಲಿದೆ. 2017ರಲ್ಲಿ ಬಿಜೆಪಿಯ ರಾಧಾ ಮೋಹನ್ ದಾಸ್ ಅಗರ್ವಾಲ್ 60,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮತ್ತೆ ಸ್ಥಾನವನ್ನು ಗೆದ್ದಿದ್ದರು.

ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಚಂದ್ರಶೇಖರ್ ಆಜಾದ್ ಅವರು ಇತ್ತೀಚೆಗೆ ಘೋಷಿಸಿದ್ದರು. ಸಮಾಜವಾದಿ ಪಕ್ಷದಿಂದ ತಾನು ಮೋಸ ಹೋಗಿದ್ದೇನೆ ಮತ್ತು ತನ್ನ ಪಕ್ಷಕ್ಕೆ ಸ್ಪರ್ಧಿಸಲು 25 ಸ್ಥಾನಗಳನ್ನು ನೀಡುವ ಭರವಸೆಯನ್ನು ಅದು ತಿರಸ್ಕರಿಸಿದೆ ಎಂದು ಅವರು ಹೇಳಿದ್ದರು. ಆಜಾದ್ ಅವರ ಪಕ್ಷಕ್ಕೆ ಎರಡು ಸ್ಥಾನಗಳನ್ನು ಮೀಸಲಿಡುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುವುದಾಗಿ ಅಖಿಲೇಶ್ ಯಾದವ್ ಹೇಳಿದರು. ಆದರೆ ಭೀಮ್ ಆರ್ಮಿ ಮುಖ್ಯಸ್ಥರು ಇನ್ನು ಮುಂದೆ ಆಸಕ್ತಿ ಹೊಂದಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ಚಂದ್ರಶೇಖರ್ ಆಜಾದ್ ನೇತೃತ್ವದ ಭೀಮ್ ಆರ್ಮಿ ಮೇ 2017 ರಲ್ಲಿ ದಲಿತರು ಮತ್ತು ಮೇಲ್ವರ್ಗದ ಠಾಕೂರರ ನಡುವೆ ಸಹರಾನ್‌ಪುರದಲ್ಲಿ ಘರ್ಷಣೆಯ ಸಮಯದಲ್ಲಿ ಗಮನ ಸೆಳೆದಿತ್ತು.  ಘರ್ಷಣೆಯ ನಂತರ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಲಾಯಿತು. ಅಲಹಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ನೀಡಿದ್ದರೂ, ಉತ್ತರ ಪ್ರದೇಶ ಪೊಲೀಸರು ಅವರನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಿದ್ದಾರೆ. 16 ತಿಂಗಳ ಜೈಲಿನಲ್ಲಿದ್ದ ನಂತರ 2018ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಗೊಂಡರು.

ಗೋರಖ್‌ಪುರ ಆದಿತ್ಯನಾಥ ಅವರ ತವರು ಕ್ಷೇತ್ರವಾಗಿದ್ದು ಇದು ಬಿಜೆಪಿಯ ಅತ್ಯಂತ ಹಳೆಯ ಭದ್ರಕೋಟೆಯಾಗಿದೆ. ಆದಿತ್ಯನಾಥ ಅವರು ಮುಂಬರುವ ಚುನಾವಣೆಯಲ್ಲಿ ಗೋರಖ್‌ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಜನವರಿ 16 ರಂದು ಘೋಷಿಸಿತ್ತು.  ಯುಪಿ ಚುನಾವಣೆಗೆ ಏಳು ಹಂತಗಳ ಮತದಾನವು ಫೆಬ್ರವರಿ 10 ರಿಂದ ಪ್ರಾರಂಭವಾಗಲಿದೆ ಮತ್ತು ಮಾರ್ಚ್ 7 ರವರೆಗೆ ಮುಂದುವರಿಯುತ್ತದೆ. ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಮಾರ್ಚ್ 3 ರಂದು ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.ಗೋರಖ್‌ಪುರ ಪೂರ್ವ ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಸ್ಥಾನಗಳಲ್ಲಿ 160 ಸ್ಥಾನಗಳನ್ನು ಹೊಂದಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಅಖಿಲೇಶ್ ಯಾದವ್ ನಿರ್ಧಾರ, ಗೋಪಾಲ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ

Published On - 1:39 pm, Thu, 20 January 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ