ಲತಾ ಮಂಗೇಶ್ಕರ್ ನಿಧನದಿಂದಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ರದ್ದು ಮಾಡಿದ ಬಿಜೆಪಿ

| Updated By: ರಶ್ಮಿ ಕಲ್ಲಕಟ್ಟ

Updated on: Feb 06, 2022 | 1:21 PM

ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪಕ್ಷದ ನಾಯಕರಾದ ಸ್ವತಂತ್ರ ದೇವ್ ಮತ್ತು ಕೇಶವ್ ಮೌರ್ಯ ಅವರು ಲಕ್ನೋದಲ್ಲಿ ಇದ್ದ ಉತ್ತರ ಪ್ರದೇಶ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು ಅಗಲಿದ ಲತಾ  ದೀದಿಗೆ...

ಲತಾ ಮಂಗೇಶ್ಕರ್ ನಿಧನದಿಂದಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ರದ್ದು ಮಾಡಿದ ಬಿಜೆಪಿ
ಅಮಿತ್ ಶಾ
Follow us on

ಲಖನೌ: ಉತ್ತರ ಪ್ರದೇಶದಲ್ಲಿ (Uttar Pradesh) ಬಿಜೆಪಿ ಚುನಾವಣಾ ಪ್ರಣಾಳಿಕೆ (BJP Manifesto) ಬಿಡುಗಡೆ ಕಾರ್ಯಕ್ರಮ ರದ್ದು ಮಾಡಿದೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನಲೆಯಲ್ಲಿ ಬಿಜೆಪಿ ಭಾನುವಾರ ಈ ಕಾರ್ಯಕ್ರಮ ರದ್ದು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇಂದು 92 ನೇ ವಯಸ್ಸಿನಲ್ಲಿ ನಿಧನರಾದ ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಗೌರವ ಸಲ್ಲಿಸಲು ಬಿಜೆಪಿಯು ಉತ್ತರ ಪ್ರದೇಶದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ   ರದ್ದುಗೊಳಿಸಿದೆ. ಅಪ್ರತಿಮ ಗಾಯಕಿಯ ಅಂತ್ಯಕ್ರಿಯೆಗಾಗಿ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ.  ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪಕ್ಷದ ನಾಯಕರಾದ ಸ್ವತಂತ್ರ ದೇವ್ ಮತ್ತು ಕೇಶವ್ ಮೌರ್ಯ ಅವರು ಲಕ್ನೋದಲ್ಲಿ ಇದ್ದ ಉತ್ತರ ಪ್ರದೇಶ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು ಅಗಲಿದ ಲತಾ  ದೀದಿಗೆ ನಾಯಕರು ಎರಡು ನಿಮಿಷಗಳ ಮೌನಾಚರಣೆ ಮಾಡಿದರು.  ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಲತಾ ದೀದಿಗೆ ಸಂತಾಪ ಸೂಚಿಸಿದ್ದಾರೆ. 

ನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ, ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರು ನಮ್ಮ ದೇಶದಲ್ಲಿ ತುಂಬಲಾರದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ. ಮುಂಬರುವ ಪೀಳಿಗೆಗಳು ಅವರನ್ನು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತವೆ, ಅವರ ಮಧುರ ಧ್ವನಿಯು ಜನರನ್ನು ಮಂತ್ರಮುಗ್ಧಗೊಳಿಸುವ ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

“ಲತಾ ಮಂಗೇಶ್ಕರ್ ಅವರ ನಿಧನದಿಂದಾಗಿ ನಾವು ಲೋಕ ಕಲ್ಯಾಣ ಸಂಕಲ್ಪ ಪತ್ರ (ಪಕ್ಷದ ಪ್ರಣಾಳಿಕೆ) ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ. ಅದರ ಬಿಡುಗಡೆಯ ಮುಂದಿನ ದಿನಾಂಕವನ್ನು ನಾವು ನಂತರ ನಿರ್ಧರಿಸುತ್ತೇವೆ” ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನದ ನಂತರ ಗೋವಾ ಬಿಜೆಪಿ ಪ್ರಧಾನಿ ರ್ಯಾಲಿ ಮತ್ತು ಇತರ ಪ್ರಮುಖ ಪಕ್ಷದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಎಎನ್‌ಐಗೆ ತಿಳಿಸಿದ್ದಾರೆ.

ಗೋವಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿ ಸೇರಿದಂತೆ ಬಿಜೆಪಿಯು ತನ್ನ ಇತರ ಕೆಲವು ರಾಜಕೀಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ‘ಬೆಳ್ಳನೆ ಬೆಳಗಾಯಿತು..’ ಎಂದು ಕನ್ನಡಿಗರ ಮನ ಗೆದ್ದಿದ್ದ ಲತಾ ಮಂಗೇಶ್ಕರ್​; ಇಲ್ಲಿದೆ ಅವರ ಕನ್ನಡ ಗೀತೆ ಬಗ್ಗೆ ವಿವರ

Published On - 12:32 pm, Sun, 6 February 22