ಉತ್ತರ ಪ್ರದೇಶ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

Yogi Adityanath ರಾಜಕೀಯವಾಗಿ ಪ್ರತಿಷ್ಠಿತ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 12, 2022 | 7:32 PM

ದೆಹಲಿ: ಉತ್ತರ ಪ್ರದೇಶದಲ್ಲಿ(Uttar Pradesh)  ಕಳೆದ ಎರಡು ದಿನಗಳಿಂದ ಆರು ನಾಯಕರ ನಿರ್ಗಮನದೊಂದಿಗೆ ಬಂಡಾಯ ಎದುರಿಸುತ್ತಿರುವ ಬಿಜೆಪಿ (BJP), ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ (Ayodhya) ಯೋಗಿ ಆದಿತ್ಯನಾಥ (Yogi Adityanath) ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಂತಿಮ ನಿರ್ಧಾರ ಪ್ರಧಾನಿ ನರೇಂದ್ರ ಮೋದಿಯವರದ್ದಾಗಲಿದೆ (Narendra Modi) ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿಮಾಡಿದೆ. ರಾಜಕೀಯವಾಗಿ ಪ್ರತಿಷ್ಠಿತ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.  ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿಯದ 10 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷೇತ್ರವಾರು ಪರಿಶೀಲನೆ ನಡೆಸಿದರು ಮತ್ತು ರಾಜ್ಯದ ನೆಲದ ವಾಸ್ತವತೆಯ ಬಗ್ಗೆ ಪ್ರಾದೇಶಿಕ ಉಸ್ತುವಾರಿಗಳಿಂದ ಪ್ರತಿಕ್ರಿಯೆ ಪಡೆದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಅಯೋಧ್ಯೆಯಿಂದ ಸ್ಪರ್ಧಿಸುವ ಸಾಧ್ಯತೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಮುಖ್ಯಮಂತ್ರಿ ಆದಿತ್ಯನಾಥ ಪ್ರಸ್ತುತ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಪಕ್ಷದ ವರಿಷ್ಠರು ಎಲ್ಲಿ ಹೇಳುತ್ತಾರೋ ಅಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಅವರು ಇತ್ತೀಚೆಗೆ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 10 ಮತ್ತು 14 ರಂದು ಮೊದಲ ಎರಡು ಹಂತಗಳಲ್ಲಿ ಚುನಾವಣೆಗೆ ಹೋಗುವವರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆಯಿದೆ.

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣವು ಬಿಜೆಪಿಗೆ ತನ್ನ ರಾಜಕೀಯ ಪ್ರೊಫೈಲ್ ಅನ್ನು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ದೇವಾಲಯದ ಪಟ್ಟಣವು ಅವಧ್ ಪ್ರದೇಶದಲ್ಲಿ ಬರುತ್ತದೆ, ಅಲ್ಲಿ ಸಮಾಜವಾದಿ ಪಕ್ಷವು ಸಾಂಪ್ರದಾಯಿಕವಾಗಿ ಪ್ರಬಲವಾಗಿದೆ.  ಅಯೋಧ್ಯೆ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅವರು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?