Uttar Pradesh: ಇದು ಜನರ ಗೆಲುವು, ರೌಡಿಗಳ ಸೋಲು: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ

ಉತ್ತರ ಪ್ರದೇಶದಲ್ಲಿ ಬಿಜೆಪಿಯ ನಿಚ್ಚಳ ಬಹುಮತ ನಿಶ್ಚಿತ. ಪಕ್ಷವು ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಉತ್ತರ ಪ್ರದೇಶದ ಜನರು ಸಮಾಜವಾದಿ ಪಕ್ಷವನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.

Uttar Pradesh: ಇದು ಜನರ ಗೆಲುವು, ರೌಡಿಗಳ ಸೋಲು: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ
ಉತ್ತರ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 10, 2022 | 11:16 AM

ಲಖನೌ: ಉತ್ತರ ಪ್ರದೇಶದಲ್ಲಿ ಆರಂಭದಿಂದಲೂ ಬಿಜೆಪಿ ಸತತ ಮುನ್ನಡೆ ಕಾಯ್ದುಕೊಂಡಿದೆ. ಆಶಾದಾಯಕ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ‘ರಾಜ್ಯದಲ್ಲಿ ಜನರ ಗೆಲ್ಲುತ್ತಿದ್ದಾರೆ, ಗೂಂಡಾಗಳು ಸೋಲುತ್ತಿದ್ದಾರೆ’ ಎಂದು ಹೇಳಿದ್ದಾರೆ. ಬಿಜೆಪಿಯ ಮತ್ತೋರ್ವ ನಾಯಕ ಬ್ರಿಟೇಶ್ ಪಾಠಕ್ ಪ್ರತಿಕ್ರಿಯಿಸಿ, ಬಿಜೆಪಿಯ ನಿಚ್ಚಳ ಬಹುಮತ ನಿಶ್ಚಿತ. ಪಕ್ಷವು ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಉತ್ತರ ಪ್ರದೇಶದ ಜನರು ಸಮಾಜವಾದಿ ಪಕ್ಷವನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.

ಚುನಾವಣಾ ಪ್ರಚಾರ ಸಭೆಗಳಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಸತತ ಟೀಕಾಪ್ರಹಾರ ನಡೆಸಿದ್ದರು. ಸಮಾಜವಾದಿ ಪಕ್ಷವು ಎಲ್ಲ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. 2012ರಿಂದ 2017ರವರೆಗೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷವು ನಂತರ ರಾಷ್ಟ್ರೀಯ ಲೋಕದಳದೊಂದಿಗೆ (ಆರ್​ಎಲ್​ಡಿ) ಕೈಜೋಡಿಸಿತ್ತು. ಇದೀಗ ಮತ್ತೆ ಗೂಂಡಾಗಿರಿ, ಮಾಫಿಯಾ ಮತ್ತು ಅರಾಜಕತೆಯೊಂದಿಗೆ ಕೆಲಸ ಆರಂಭಿಸಿದೆ ಎಂದು ಆರೋಪಿಸಿದ್ದರು.

ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ ಪಕ್ಷಗಳ ಮೈತ್ರಿಕೂಟವು ಹಲವು ಅಪರಾಧಿಗಳು ಸ್ಪರ್ಧಿಸಲು ಅವಕಾಶ ನೀಡಿವೆ. ಈ ಮೂಲಕ ಎಸ್​ಪಿ ತನ್ನ ಹಳೆಯ ಚಾಳಿ ಮುಂದುವರಿಸಿದೆ ಎಂದು ಅವರು ದೂರಿದ್ದರು. ಅಪರಾಧ ಹಿನ್ನೆಲೆಯವರಿಗೆ ಟಿಕೆಟ್ ನೀಡುವ ಮೂಲಕ ಅಖಿಲೇಶ್ ಯಾದವ್ ಈ ಬಾರಿಯೂ ಪಶ್ಚಿಮ ಉತ್ತರ ಪ್ರದೇಶವನ್ನು ಕೋಮುದಳ್ಳುರಿಗೆ ತಳ್ಳಲು ಉದ್ದೇಶಿಸಿದ್ದರು ಎಂದು ಆರೋಪ ಮಾಡಲಾಗಿತ್ತು.

ಇಂದು ಮುಂಜಾನೆ 8 ಗಂಟೆಗೆ ಐದೂ ರಾಜ್ಯಗಳಲ್ಲಿ ಮತ ಎಣಿಕೆ ಆರಂಭವಾಯಿತು. ಕೇಂದ್ರದಲ್ಲಿ ಅಧಿಕಾರ ಹಿಡಿಯುವ ದೃಷ್ಟಿಯಿಂದ ಮತ್ತು ಸಂಸತ್ ಸದಸ್ಯರ ಸಂಖ್ಯಾಬಲದ ದೃಷ್ಟಿಯಿಂದ ಮಹತ್ವ ಪಡೆದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ, ಎಸ್​ಪಿ ಮತ್ತು ಬಿಎಸ್​ಪಿ ನಡುವೆ ಜಿದ್ದಾಜಿದ್ದಿ ಪೈಪೋಟಿ ಇರಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಿಎಸ್​ಪಿಗೆ ಹೆಚ್ಚಿನ ಜನಬೆಂಬಲ ಸಿಕ್ಕಿಲ್ಲ. ಬೆಳಿಗ್ಗೆ 11 ಗಂಟೆ ವೇಳೆಗೆ ಬಿಜೆಪಿ 253, ಎಸ್​ಪಿ 123 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿತ್ತು.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು 202 ಸದಸ್ಯರು ಬೇಕು. ಎಲ್ಲ ಎಕ್ಸಿಟ್ ಪೋಲ್​ಗಳೂ ಬಿಜೆಪಿಯ ಗೆಲುವಿನ ಮುನ್ಸೂಚನೆ ನೀಡಿದ್ದವು. ಇದೀಗ ಈ ಭವಿಷ್ಯಗಳು ನಿಜವಾಗುವ ಸಾಧ್ಯತೆ ನಿಚ್ಚಳವಾಗಿದೆ.

ಇದನ್ನೂ ಓದಿ: Uttar Pradesh: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಇವಿಎಂ ವಿವಾದ: ಯೋಗಿ, ಅಖಿಲೇಶ್ ನಡುವೆ ವಾಗ್ವಾದ

ಇದನ್ನೂ ಓದಿ: Exit Polls 2022: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ದರ್ಬಾರ್, ಪಂಜಾಬ್​ನಲ್ಲಿ ಆಮ್ ಆದ್ಮಿ; ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೀಗಿದೆ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್