ಉತ್ತರ ಪ್ರದೇಶ ಚುನಾವಣೆ: ಮೋದಿ, ನಡ್ಡಾ ಬಿಜೆಪಿಯ ಸ್ಟಾರ್ ಪ್ರಚಾರಕರು; ವರುಣ್, ಮೇನಕಾಗೆ ಇಲ್ಲ ಅವಕಾಶ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದರೆ, ಪಕ್ಷದ ಸಂಸದರಾದ ಮೇನಕಾ ಗಾಂಧಿ ಮತ್ತು ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಉತ್ತರ ಪ್ರದೇಶ ಚುನಾವಣೆ: ಮೋದಿ, ನಡ್ಡಾ ಬಿಜೆಪಿಯ ಸ್ಟಾರ್ ಪ್ರಚಾರಕರು; ವರುಣ್, ಮೇನಕಾಗೆ ಇಲ್ಲ ಅವಕಾಶ
ಉತ್ತರ ಪ್ರದೇಶದಲ್ಲಿನ ಸ್ಟಾರ್ ಪ್ರಚಾರಕರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 19, 2022 | 5:27 PM

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ (Uttar Pradesh Assembly elections) ಬಿಜೆಪಿ(BJP) ಬುಧವಾರ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದರೆ, ಪಕ್ಷದ ಸಂಸದರಾದ ಮೇನಕಾ ಗಾಂಧಿ ಮತ್ತು ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇವರಿಬ್ಬರು ಸುಲ್ತಾನ್‌ಪುರ ಮತ್ತು ಪಿಲಿಭಿತ್‌ನಿಂದ ಹಲವು ಬಾರಿ ವಿಜಯಶಾಲಿಯಾಗಿದ್ದರು. ಇತ್ತೀಚೆಗಷ್ಟೇ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಲ್ಲಿಯೂ ಇಬ್ಬರನ್ನು ಆ ಪಟ್ಟಿಯಿಂದ ಕೈಬಿಡಲಾಗಿತ್ತು. ಮುಂಬರುವ ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ 30 ನಾಯಕರ ಪಟ್ಟಿಯನ್ನು ಬಿಜೆಪಿ ಇವತ್ತು ಬಿಡುಗಡೆ ಮಾಡಿದೆ.  ಆ ಪಟ್ಟಿಯಲ್ಲಿ ಮೊದಲ ಹೆಸರು ಪ್ರಧಾನಿ ನರೇಂದ್ರ ಮೋದಿ, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೆಸರಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಗೋರಖ್‌ಪುರದ ಬಿಜೆಪಿ ಅಭ್ಯರ್ಥಿ ಯೋಗಿ ಆದಿತ್ಯನಾಥ ಕೂಡ ಆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.  ಆ ಪಟ್ಟಿಯಲ್ಲಿರುವ ಇತರರೆಂದರೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್.  ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ದಿನೇಶ್ ಶರ್ಮಾ ಕೇಶವ್ ಪ್ರಸಾದ್ ಮೌರ್ಯ, ಸಂಜೀವ್ ಬಲ್ಯಾನ್ ಮತ್ತು ರಾಧಾ ಮೋಹನ್ ಸಿಂಗ್ ಈ  ಪಟ್ಟಿಯಲ್ಲಿದ್ದಾರೆ.

ರೈತರ ಸಮಸ್ಯೆ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಮಗ ರೈತರ ಮೇಲೆ ವಾಹನ ಚಲಾಯಿಸಿದ್ದನ್ನು ವರುಣ್ ಗಾಂಧಿ ಅನೇಕ ಸಂದರ್ಭಗಳಲ್ಲಿ ಪ್ರಶ್ನಿಸಿದ್ದಾರೆ. ಅದೇ ವೇಳೆ ಆಶಿಶ್ ಮಿಶ್ರಾ ಟೆನಿ ಅವರನ್ನು ಬಂಧಿಸಲು ಸಾಕಷ್ಟು ತ್ವರಿತ ಕ್ರಮ ಕೈಗೊಳ್ಳದ ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರವನ್ನು ವರುಣ್ ದೂಷಿಸಿದ್ದಾರೆ.

ಕೊವಿಡ್ ಹರಡುವಿಕೆಯಿಂದಾಗಿ ಪ್ರಚಾರದ ನಿರ್ಬಂಧಗಳನ್ನು ಗಮನಿಸಿದರೆ, ಬಿಜೆಪಿಯು ಉತ್ತರಪ್ರದೇಶದಲ್ಲಿ ಹಂತಹಂತವಾಗಿ ಮನೆ-ಮನೆ ಪ್ರಚಾರವನ್ನು ಮಾಡುವುದರೊಂದಿಗೆ 300 ಮಂದಿಗೆ ಅವಕಾಶ ಮಾಡಿಕೊಡುವ ಮುಚ್ಚಿದ ಬಾಗಿಲುಗಳ  ಸಭೆಗಳನ್ನು ಮಾಡುವ ಸಾಧ್ಯತೆಯಿದೆ.  ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಉನ್ನತ ನಾಯಕರು ಜನವರಿ ಮೂರನೇ ವಾರದಿಂದ ಉತ್ತರ ಪ್ರದೇಶ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ಎಎನ್‌ಐಗೆ ತಿಳಿಸಿವೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದಲ್ಲ, ಅದು ತಾಂತ್ರಿಕ ದೋಷ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್