Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರಿಗೆ ಉಚಿತ ವಿದ್ಯುತ್, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ಭರವಸೆ

Lok Kalyan Sankalp Patra ಪ್ರಣಾಳಿಕೆಯು ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್ ಭರವಸೆ ನೀಡುತ್ತದೆ. ಬಿಜೆಪಿಯು ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ ಮತ್ತು ಭತ್ತದ ಖರೀದಿಯನ್ನು ಬಲಪಡಿಸುತ್ತದೆ ಎಂದು ಹೇಳುತ್ತದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರಿಗೆ ಉಚಿತ ವಿದ್ಯುತ್, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ಭರವಸೆ
ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 08, 2022 | 1:19 PM

ಲಖನೌ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಉತ್ತರ ಪ್ರದೇಶ (Uttar Pradesh)  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಮಂಗಳವಾರ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾಯಿತರಾದರೆ,  ಲವ್ ಜಿಹಾದ್ ಪ್ರಕರಣಗಳಲ್ಲಿ ₹1 ಲಕ್ಷ ರೂಪಾಯಿ ದಂಡದೊಂದಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯನ್ನು ಖಚಿತಪಡಿಸುತ್ತದೆ ಎಂದು ‘ಲೋಕ ಕಲ್ಯಾಣ ಸಂಕಲ್ಪ ಪತ್ರ’ ಹೇಳುತ್ತದೆ. ಪ್ರಣಾಳಿಕೆಯು ನೀರಾವರಿಗಾಗಿ ರೈತರಿಗೆ ಉಚಿತ ವಿದ್ಯುತ್ ಭರವಸೆ ನೀಡುತ್ತದೆ. ಬಿಜೆಪಿಯು ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ ಮತ್ತು ಭತ್ತದ ಖರೀದಿಯನ್ನು ಬಲಪಡಿಸುತ್ತದೆ ಎಂದು ಹೇಳುತ್ತದೆ. ಇದು ರಾಣಿ ಲಕ್ಷ್ಮೀ ಬಾಯಿ ಯೋಜನೆಯಡಿಯಲ್ಲಿ ಕಾಲೇಜು  ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿಗಳನ್ನು ನೀಡುತ್ತದೆ. 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆಯನ್ನು ಬಿಜೆಪಿ ಖಚಿತಪಡಿಸುತ್ತದೆ. ಪ್ರಧಾನಮಂತ್ರಿಯವರ ಉಜ್ವಲ ಯೋಜನೆಯಡಿ, ದೀಪಾವಳಿ ಮತ್ತು ಹೋಳಿ ಸಂದರ್ಭದಲ್ಲಿ ಪಕ್ಷವು ಎರಡು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಒದಗಿಸುತ್ತದೆ.  ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಿಗೆ ಸ್ವಯಂ ಉದ್ಯೋಗಾವಕಾಶಗಳ ಭರವಸೆ ಸೇರಿದಂತೆ ಮತದಾರರಿಗೆ ‘ಉಚಿತ’ಗಳ ಸೌಲಭ್ಯಗಳನ್ನು ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ವರ್ಚುವಲ್ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉತ್ತರಾಖಂಡದಲ್ಲಿ ಅವರು ಉದ್ಧಂಸಿಂಗ್ ನಗರ ಮತ್ತು ನೈನಿತಾಲ್‌ನ ಒಟ್ಟು 14 ವಿಧಾನಸಭಾ ಕ್ಷೇತ್ರಗಳನ್ನು ಉದ್ದೇಶಿಸಿ ಮಾತನಾಡಲಿದ್ದು, ಯುಪಿಯಲ್ಲಿ ಅವರು ರಾಂಪುರ, ಬದೌನ್ ಮತ್ತು ಸಂಭಾಲ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಂಜಾಬ್‌ನ ಲುಧಿಯಾನ ಮತ್ತು ಫತೇಘರ್ ಸಾಹಿಬ್‌ನಲ್ಲಿ ಅವರ ವರ್ಚುವಲ್ ರ್ಯಾಲಿ ರಾಜ್ಯದಲ್ಲಿ ಅವರ ಮೊದಲನೆಯದಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಹಿರಿಯ ನಾಯಕ ಅನುರಾಗ್ ಠಾಕೂರ್ ಅವರೊಂದಿಗೆ 2022 ರ ಉತ್ತರ ಪ್ರದೇಶ ಚುನಾವಣೆಯ ಬಿಜೆಪಿ ಪ್ರಣಾಳಿಕೆಯನ್ನು ಮಂಗಳವಾರ ಲಖನೌದಲ್ಲಿ ಬಿಡುಗಡೆ ಮಾಡಿದರು.

ನವೆಂಬರ್‌ನಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಜಾರಿಗೆ ತಂದ ಸುಗ್ರೀವಾಜ್ಞೆಯ ಹಿನ್ನೆಲೆಯಲ್ಲಿ ‘ಲವ್ ಜಿಹಾದ್’ ಪ್ರಕರಣದಲ್ಲಿ ತಪ್ಪಿತಸ್ಥರಿಗೆ 10 ವರ್ಷಗಳ ಜೈಲು ಶಿಕ್ಷೆ, ₹ 1 ಲಕ್ಷ ದಂಡ  ವಿಧಿಸಲಾಗುವುದು ಎಂದು ಅಮಿತ್  ಶಾ ಹೇಳಿದ್ದಾರೆ. ಇನ್ನುಳಿದಂತೆ ರಾಜ್ಯದ ತಲಾ ಆದಾಯವನ್ನು ದ್ವಿಗುಣಗೊಳಿಸುವ ಮತ್ತು ₹ 10 ಲಕ್ಷ ಕೋಟಿಗಳಷ್ಟು ಹೂಡಿಕೆಯನ್ನು ಆಕರ್ಷಿಸುವ ಬದ್ಧತೆಯನ್ನು ಪ್ರಣಾಳಿಕೆ ಒಳಗೊಂಡಿದೆ.  ವಿಧವೆಯರ ಪಿಂಚಣಿಯನ್ನು ತಿಂಗಳಿಗೆ ₹ 1,500 ಕ್ಕೆ ಹೆಚ್ಚಿಸುವುದಾಗಿ ಪಕ್ಷವು ಭರವಸೆ ನೀಡಿತು.

“ಕೆಲವು ದಿನಗಳ ಹಿಂದೆ ಅಖಿಲೇಶ್ ಯಾದವ್ ಅವರು ನಮ್ಮ 2017 ರ ಸಂಕಲ್ಪ ಪತ್ರವನ್ನು (ಬಿಜೆಪಿಯ 2017 ರ ಚುನಾವಣಾ ಪ್ರಣಾಳಿಕೆ) ಟೀಕಿಸಿ  ನಾವು ಏನು ಮಾಡಿದ್ದೇವೆ ಎಂದು ಕೇಳಿದರು. ನಮ್ಮ 212 ಪ್ರತಿಜ್ಞೆಗಳಲ್ಲಿ 92 ಪ್ರತಿಶತವನ್ನು ಈಡೇರಿಸಲಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ ಎಂದು ಶಾ ಹೇಳಿದ್ದಾರೆ.

ಅಖಿಲೇಶ್ ಯಾದವ್ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಹಲವಾರು ವಾಗ್ದಾಳಿ ನಡೆಸಿದ ಅಮಿತ್ ಶಾ ಐದು ವರ್ಷಗಳ ಹಿಂದೆ ಯುಪಿಯನ್ನು ಗಲಭೆ ಪೀಡಿತ ರಾಜ್ಯವೆಂದು ಪರಿಗಣಿಸಲಾಗಿತ್ತು. ವಿಶೇಷವಾಗಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ಮತ್ತು ಅವಧ್ ಪ್ರದೇಶ ತಾಯಂದಿರು ಮತ್ತು ಸಹೋದರಿಯರು ಸುರಕ್ಷಿತವಾಗಿರಲಿಲ್ಲ ಎಂದು ಹೇಳಿದ್ದಾರೆ.

ಕೊವಿಡ್ ಲಸಿಕೆ ಕುರಿತು  ಯಾದವ್ ಅವರ ಹೇಳಿಕೆಗಳ ಪ್ರತಿಕ್ರಿಯಿಸಿದ ಶಾ  ಕಳೆದ ವರ್ಷ, ಲಸಿಕೆ ಅಭಿಯಾನದ ಪ್ರಾರಂಭದ ಮೊದಲು, ಸಮಾಜವಾದಿ ನಾಯಕ ಅವರು “ಬಿಜೆಪಿಯ ಲಸಿಕೆಯನ್ನು ನಂಬಲು ಸಾಧ್ಯವಿಲ್ಲ” ಎಂದು ಹೇಳಿದರು.  “ನನಗೆ ಅಖಿಲೇಶ್ ಯಾದವ್ ಅವರ ಲಸಿಕೆ ವಿರೋಧಿ ಹೇಳಿಕೆ ನೆನಪಿದೆ. ಅವರು ಕೊನೆಗೆ ಲಸಿಕೆ ಪಡೆದರು .ಆದರೆ ಜನರು ಅವರ ಮಾತು ಪಾಲಿಸಿದ್ದರೆ  ಯುಪಿ ಮೂರನೇ ಅಲೆಯ ಸಮಯದಲ್ಲಿ ಹೆಚ್ಚಿನ ಸಾವಿನ ಪ್ರಮಾಣವನ್ನು ಎದುರಿಸುತ್ತಿತ್ತು ಎಂದು ಅವರು ಹೇಳಿದರು.

ಫೆಬ್ರವರಿ 10 ರಿಂದ ಪ್ರಾರಂಭವಾಗುವ ಏಳು ಹಂತದ ಮತದಾನದಲ್ಲಿ ಪಶ್ಚಿಮ ಯುಪಿಯಲ್ಲಿ ಮೊದಲು ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿಕಾಶ್ಮೀರ ಬಗ್ಗೆ ಪೋಸ್ಟ್: ಹುಂಡೈ ಬೆನ್ನಲ್ಲೇ ಕೆಎಫ್‌ಸಿ, ಪಿಜ್ಜಾ ಹಟ್ ವಿರುದ್ಧ ಸಿಡಿದೆದ್ದ ನೆಟ್ಟಿಗರು

Published On - 12:44 pm, Tue, 8 February 22

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ