BSP Candidate List UP: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ; ಬಿಎಸ್​ಪಿಯಿಂದ 53 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

| Updated By: ಸುಷ್ಮಾ ಚಕ್ರೆ

Updated on: Jan 15, 2022 | 1:32 PM

Uttar Pradesh Elections 2022: ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾಯಾವತಿ ನೇತೃತ್ವದ ಬಿಎಸ್‌ಪಿ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

BSP Candidate List UP: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ; ಬಿಎಸ್​ಪಿಯಿಂದ 53 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಮಾಯಾವತಿ
Follow us on

ಲಕ್ನೋ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ (Uttar Pradesh Assembly Polls 2022) ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಮಾಯಾವತಿ (Mayawati) ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಂಬರುವ ವಿಧಾನಸಭಾ ಚುನಾವಣೆಗೆ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. “ನಾವು ಮೊದಲ ಪಟ್ಟಿಯಲ್ಲಿ 53 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಉಳಿದ 5 ಸ್ಥಾನಗಳನ್ನು ನಾವು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ” ಎಂದು ಬಿಎಸ್​ಪಿ (BSP) ಮುಖ್ಯಸ್ಥೆ ಮಾಯಾವತಿ ಇಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 11 ಜಿಲ್ಲೆಗಳಲ್ಲಿನ ಒಟ್ಟು 58 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸುತ್ತೇವೆ ಎಂದು ಬಿಎಸ್​ಪಿ ನಾಯಕಿ ಮಾಯಾವತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ನಮ್ಮ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತಾರೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ನಮ್ಮ ಪಕ್ಷವು ಜನಪರವಾಗಿ ಸರ್ಕಾರವನ್ನು ನಡೆಸುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 403 ಸ್ಥಾನಗಳಲ್ಲಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಎಸ್‌ಪಿ ಕೇವಲ 47 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು. ಮತ್ತು ಕಾಂಗ್ರೆಸ್ ಏಳು ಸ್ಥಾನಗಳನ್ನು ಗೆದ್ದಿತ್ತು. ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) 19 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಜ. 20ರವರೆಗೆ ಪ್ರತಿ ದಿನ ಓರ್ವ ಸಚಿವ, ಶಾಸಕ ಬಿಜೆಪಿಗೆ ರಾಜೀನಾಮೆ ನೀಡ್ತಾರೆ; ಧರಂ ಸಿಂಗ್ ಸೈನಿ ಹೊಸ ಬಾಂಬ್

ಉತ್ತರ ಪ್ರದೇಶ ಸರ್ಕಾರದ ಮತ್ತೊಂದು ವಿಕೆಟ್ ಪತನ; ಬಿಜೆಪಿಗೆ ಸಚಿವ ಧರಂ ಸಿಂಗ್ ಸೈನಿ ರಾಜೀನಾಮೆ