AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಿಂದ ಪ್ರಣಾಳಿಕೆ ಬಿಡುಗಡೆ; ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ಪದವಿವರೆಗೆ ಉಚಿತ ಶಿಕ್ಷಣ, ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ

ಪೊಲೀಸ್​, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಸೇರಿ ಖಾಲಿ ಇರುವ ಒಟ್ಟು 12 ಲಕ್ಷ ಹುದ್ದೆಗಳ ನೇಮಕಾತಿಗೆ ಅಡೆತಡೆ ನಿವಾರಿಸುವ ಜತೆ, ಇನ್ನೂ 8 ಲಕ್ಷಗಳಷ್ಟು ಉದ್ಯೋಗ ಸೃಷ್ಟಿಸಲು ಕಾಂಗ್ರೆಸ್ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

ಕಾಂಗ್ರೆಸ್​ನಿಂದ ಪ್ರಣಾಳಿಕೆ ಬಿಡುಗಡೆ; ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ಪದವಿವರೆಗೆ ಉಚಿತ ಶಿಕ್ಷಣ, ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ
ಚುನಾವಣಾ ಪ್ರಣಾಳಿಕೆ ಬಿಡುಗಡೆ
TV9 Web
| Edited By: |

Updated on:Feb 09, 2022 | 2:49 PM

Share

ನಾಳೆ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ (Uttar Pradesh Assembly Election 2022) ನಡೆಯಲಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ರಾಜ್ಯದಲ್ಲಿ ಚುನಾವಣಾ ಪ್ರಣಾಳಿಕೆ (Congress Manifesto) ಬಿಡುಗಡೆ ಮಾಡಿದ್ದಾರೆ.  ರೈತರು, ಕೊವಿಡ್ 19 ವಾರಿಯರ್ಸ್​, ಶಿಕ್ಷಕರು ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತ ಹಲವು ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಅಷ್ಟೇ ಅಲ್ಲ, ರಾಜ್ಯದ ಹಲವು ಪತ್ರಕರ್ತರ ವಿರುದ್ಧ ಹಾಕಲಾದ ಸುಳ್ಳು ಕೇಸ್​ಗಳನ್ನು ಹಿಂಪಡೆಯುವುದಾಗಿಯೂ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ತಿಳಿಸಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು ಈಗಾಗಲೇ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ, ಹಲವು ಆಕರ್ಷಕ ಭರವಸೆಗಳನ್ನು ಜನರಿಗೆ ನೀಡಿವೆ.

ಸಾರ್ವಜನಿಕರು ಏನು ಬಯಸುತ್ತಾರೋ ಅದೇ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿದೆ. ನಮ್ಮ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಛತ್ತೀಸ್​ಗಢ್​​ನಂತೆಯೇ ಇಲ್ಲಿಯೂ ಕೂಡ ರೈತರ ಎಲ್ಲ ರೀತಿಯ ಕೃಷಿ ಸಾಲ ಮನ್ನಾ ಮಾಡಲಾಗುವುದು. ಭತ್ತ ಮತ್ತು ಗೋಧಿಯನ್ನು ಪ್ರತಿ ಕ್ವಿಂಟಲ್​ಗೆ 2500 ರೂ.ಗೆ ಖರೀದಿ ಮಾಡಲಾಗುವುದು ಮತ್ತು ಕಬ್ಬನ್ನು ಪ್ರತಿ ಕ್ವಿಂಟಲ್​​ಗೆ 400 ರೂಪಾಯಿಗೆ ಖರೀದಿಸಲಾಗುವುದು. ವಿದ್ಯುತ್​ ಬಿಲ್​​ನಲ್ಲಿ ಅರ್ಧದಷ್ಟು ಕಡಿಮೆ ಮಾಡಲಾಗುತ್ತದೆ ಮತ್ತು ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಬಾಕಿ ಇರುವ ಗ್ರಾಹಕರ್​ ಬಿಲ್​​ನ ಹಣವನ್ನು ಮನ್ನಾ ಮಾಡಲಾಗುತ್ತದೆ ಎಂದೂ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾದಿಂದ ತೀವ್ರವಾಗಿ ಬಾಧಿತವಾಗಿರುವ ಕುಟುಂಗಳಿಗೆ 25 ಸಾವಿರ ರೂಪಾಯಿ ನೀಡಲಾಗುವುದು. ಪೊಲೀಸ್​, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಸೇರಿ ಖಾಲಿ ಇರುವ ಒಟ್ಟು 12 ಲಕ್ಷ ಹುದ್ದೆಗಳ ನೇಮಕಾತಿಗೆ ಅಡೆತಡೆ ನಿವಾರಿಸುವ ಜತೆ, ಇನ್ನೂ 8 ಲಕ್ಷಗಳಷ್ಟು ಉದ್ಯೋಗ ಸೃಷ್ಟಿಸಲು ಕಾಂಗ್ರೆಸ್ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ. ಅಂದಹಾಗೆ, ಉನ್ನತಿ ವಿಧಾನ ಜನ ಘೋಷಣ ಪತ್ರ ಎಂಬ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರ ನಾಯಕರು ಬಿಡುಗಡೆ ಮಾಡಿದ್ದು, ಪ್ರಮುಖ ಘೋಷಣೆಗಳು ಇಂತಿವೆ..

1. ಬೀಡಾಡಿ ಹಸುಗಳಿಂದ ಬೆಳೆ ಹಾನಿ ಸಂಕಷ್ಟ ಅನುಭವಿಸಿದ ರೈತರಿಗೆ 3 ಸಾವಿರ ರೂಪಾಯಿ ಪರಿಹಾರ, 2. ಛತ್ತೀಸ್​ಗಢ್​ನಂತೆ ಉತ್ತರಪ್ರದೇಶದಲ್ಲೂ ಕೂಡ ಹಸುವಿನ ಸಗಣಿಗೆ ಕೆಜಿಗೆ 2 ರೂಪಾಯಿಯನ್ನು ಕೊಟ್ಟ ಖರೀದಿಸಲಾಗುವುದು, 3. ಕೊರೊನಾ ಸಾಂಕ್ರಾಮಿಕ ವಿರುದ್ಧ ಹೋರಾಡಿ ಅದರಲ್ಲೇ ಪ್ರಾಣ ಕಳೆದುಕೊಂಡ ಕೊವಿಡ್​ 19 ವಾರಿಯರ್ಸ್​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ, 4. ಹೊರಗುತ್ತಿಗೆ ನೌಕರಿ ವ್ಯವಸ್ಥೆ ನಿಲ್ಲಿಸಿ, ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಮಾಡುವ ಭರವಸೆ, 5. ತಾತ್ಕಾಲಿಕ ಶಿಕ್ಷಕರು ಮತ್ತು ಶಿಕ್ಷಾ ಮಿತ್ರರ ಖಾಯಂ ಮತ್ತು ಸಂಸ್ಕೃತ-ಉರ್ದು ಶಿಕ್ಷಕ ಹುದ್ದೆಗಳ ಭರ್ತಿ, 6. ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ಬಡಜನರು-ಮಧ್ಯಮವರ್ಗದವರಿಗೆ ವಸತಿ ವ್ಯವಸ್ಥೆ. 7. ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ಪದವಿವರೆಗೂ ಉಚಿತ ಶಿಕ್ಷಣ, ಈ ವರ್ಗದ ಸರ್ಕಾರಿ ಉದ್ಯೋಗಿಗಳಿಗೆ ಬಡ್ತಿಯಲ್ಲೂ ಮೀಸಲಾತಿ. 8.  ಶಾಲಾ ಅಡುಗೆಯವರ ವೇತನ ತಿಂಗಳಿಗೆ 5000 ರೂ.ಗೆ ಹೆಚ್ಚಳ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರಿಗೆ ಉಚಿತ ವಿದ್ಯುತ್, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟಿ ಭರವಸೆ

ಸಮಾಜವಾದಿ ಪಕ್ಷದ ಪ್ರಣಾಳಿಕೆ ಬಿಡುಗಡೆ: 2025ರ ವೇಳೆಗೆ ಎಲ್ಲಾ ರೈತರನ್ನು ಋಣಮುಕ್ತರಾಗಿಸುವ ಭರವಸೆ ನೀಡಿದ ಅಖಿಲೇಶ್

Published On - 2:46 pm, Wed, 9 February 22

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ