AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಅಮೂಲ್ಯ ಮತವನ್ನು ಬಿಜೆಪಿಗೆ ಹಾಕಿ ಹಾಳು ಮಾಡಬೇಡಿ; ಉತ್ತರ ಪ್ರದೇಶ ಜನರಿಗೆ ಸಿಎಂ ಮಮತಾ ಬ್ಯಾನರ್ಜಿ ಸಲಹೆ

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆಯೂ ಪ್ರಸ್ತಾಪ ಮಾಡಿದ ಮಮತಾ ಬ್ಯಾನರ್ಜಿ, ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ಕೇಂದ್ರ ಸಚಿವರ ಪುತ್ರ ಅವರ ಮೇಲೆ ವಾಹನ ಹತ್ತಿಸಿ, ಕೊಲ್ಲುತ್ತಾನೆ. ಬಿಜೆಪಿಗರಿಗೆ ನಾಚಿಕೆಯೆಂಬುದೇ ಇಲ್ಲ ಎಂದು ಹೇಳಿದರು.

ನಿಮ್ಮ ಅಮೂಲ್ಯ ಮತವನ್ನು ಬಿಜೆಪಿಗೆ ಹಾಕಿ ಹಾಳು ಮಾಡಬೇಡಿ; ಉತ್ತರ ಪ್ರದೇಶ ಜನರಿಗೆ ಸಿಎಂ ಮಮತಾ ಬ್ಯಾನರ್ಜಿ ಸಲಹೆ
ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್​ (ಪಿಟಿಐ ಚಿತ್ರ)
TV9 Web
| Edited By: |

Updated on:Feb 08, 2022 | 3:29 PM

Share

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಅಮೂಲ್ಯ ಮತವನ್ನು ಭಾರತೀಯ ಜನತಾ ಪಾರ್ಟಿ (BJP)ಗೆ ಹಾಕುವ ಮೂಲಕ ವ್ಯರ್ಥ ಮಾಡಬೇಡಿ  ಎಂದು ಮಮತಾ ಬ್ಯಾನರ್ಜಿ ಇಂದು ಉತ್ತರ ಪ್ರದೇಶದ ಜನತೆಗೆ ಕರೆ ನೀಡಿದರು. ಸಮಾಜವಾದಿ ಪಕ್ಷದ (Samajwadi Party) ಪರ ಪ್ರಚಾರ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿರುವ ಮಮತಾ ಬ್ಯಾನರ್ಜಿ(Mamata Banerjee), ಅಖಿಲೇಶ್​ ಯಾದವ್ (Akhilesh Yadav) ಜತೆ ಲಖನೌದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಕಳೆದ ವರ್ಷ ಕೊವಿಡ್​ 19 ಎರಡನೇ ಅಲೆ ಉತ್ತುಂಗದಲ್ಲಿ ಇದ್ದಾಗ, ಯುಪಿ ಸಿಎಂ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸುವುದರಲ್ಲಿ ನಿರತರಾಗಿದ್ದರು ಎಂದು ಹೇಳಿದ್ದಾರೆ. 

ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ವೇಳೆ ಅಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಯೋಗಿ ಆದಿತ್ಯನಾಥ್​ ಹೋಗಿದ್ದನ್ನು ನೆನಪಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ನೀವು ನಮ್ಮನ್ನು ಸೋಲಿಸಲು ಪಶ್ಚಿಮ ಬಂಗಾಳಕ್ಕೆ ಬಂದಿರಿ. ಕೊವಿಡ್​ 19 ಮಿತಿಮೀರಿ, ಜನರು ಸಾಯುತ್ತಿದ್ದ ವೇಳೆ ಅಷ್ಟೊಂದು ಜನರನ್ನು ಸೇರಿಸಿ ಚುನಾವಣಾ ಪ್ರಚಾರ ನಡೆಸಿದಿರಿ ಎಂದು ಕಿಡಿಕಾರಿದರು. ಅಷ್ಟೇ ಅಲ್ಲ, ಗಂಗಾ ನದಿಯಲ್ಲಿ ಕೊವಿಡ್ 19 ರೋಗಿಗಳ ಶವಗಳು ಸಿಕ್ಕ ಬಗ್ಗೆ ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ, ನಾವು ಗಂಗಾಮಾತೆಯನ್ನು ಪೂಜನೀಯ ಭಾವದಿಂದ ನೋಡುತ್ತೇವೆ. ಆದರೆ ಉತ್ತರಪ್ರದೇಶದಲ್ಲಿ ಶವಗಳನ್ನು ಬಿಸಾಕುತ್ತಾರೆ. ಇವರ ಶವ ಸಂಸ್ಕಾರ ಮಾಡಲು ಉತ್ತರಪ್ರದೇಶ ಸರ್ಕಾರದ ಬಳಿ ಕಟ್ಟಿಗೆ ಇರಲಿಲ್ಲವಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದೀದಿ, ನಾನು ಉತ್ತರಪ್ರದೇಶಕ್ಕೆ ಬಂದಿರುವ ಸುದ್ದಿ ಕೇಳಿಯೇ ಬಿಜೆಪಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಬಿಡುಗಡೆ ಮಾಡಿದ್ದು manifesto ನೋ ಅಥವಾ Moneyfesto ನೋ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲು ಮೊನ್ನೆಯೇ ದಿನಾಂಕ ನಿಗದಿ ಪಡಿಸಿತ್ತು. ಆದರೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ನಿಧನದ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿತ್ತು.

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆಯೂ ಪ್ರಸ್ತಾಪ ಮಾಡಿದ ಮಮತಾ ಬ್ಯಾನರ್ಜಿ, ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ಕೇಂದ್ರ ಸಚಿವರ ಪುತ್ರ ಅವರ ಮೇಲೆ ವಾಹನ ಹತ್ತಿಸಿ, ಕೊಲ್ಲುತ್ತಾನೆ. ಬಿಜೆಪಿಗರಿಗೆ ನಾಚಿಕೆಯೆಂಬುದೇ ಇಲ್ಲ. ರೈತರ ಬಳಿಕ ಕ್ಷಮೆ ಕೇಳುವಷ್ಟು ಸಂವೇದನೆ ಕೂಡ ಇಲ್ಲ ಎಂದು ಹೇಳಿದ್ದಾರೆ. ಹವಾಮಾನ ಪರಿಸ್ಥಿತಿ ಸರಿಯಿಲ್ಲ ಎಂಬ ಕಾರಣಕ್ಕೆ ಬಿಜ್ನೋರ್​​ನಲ್ಲಿ ಭೌತಿಕ ರ್ಯಾಲಿಯನ್ನು ಪ್ರಧಾನಿ ಮೋದಿ ರದ್ದುಗೊಳಿಸಿದರ ಬಗ್ಗೆ ವ್ಯಂಗ್ಯವಾಡಿದ ದೀದಿ, ಅಲ್ಲಿ ವಾತಾವರಣ ಬಿಜೆಪಿ ಪಾಲಿಗೆ ಕೆಟ್ಟದಾಗಿದೆ. ಹಾಗಾಗಿಯೇ ರ್ಯಾಲಿ ರದ್ದುಗೊಂಡಿದೆ ಎಂದು ಹೇಳಿದ್ದಾರೆ.

ಅಖಿಲೇಶ್ ಯಾದವ್​ ಮತ್ತು ಮಮತಾ ಬ್ಯಾನರ್ಜಿ ಇಬ್ಬರೂ ರಾಜಕೀಯ ಮತ್ತು ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದಾರೆ. 2017ರ ವಿಧಾನಸಭೆ ಚುನಾವಣೆ ಹೊತ್ತಲ್ಲೂ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶಕ್ಕೆ ಬಂದು ಎಸ್​​ಪಿ ಪರ ಪ್ರಚಾರ ನಡೆಸಿದ್ದರು.  ಹಾಗೇ, ಅಖಿಲೇಶ್​ ಯಾದವ್​ ಕೂಡ 2011 ಮತ್ತು 2016ರ ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿಗೆ ಹೋಗಿ ದೀದಿ ಪರ ಪ್ರಚಾರ ನಡೆಸಿದ್ದರು. 2021ರಲ್ಲಿ ತಾವು ಹೋಗದೆ ಇದ್ದರೂ ಸಮಾಜವಾದಿ ಪಕ್ಷದ ರಾಷ್ಟ್ರೀಯ ಉಪ-ಅಧ್ಯಕ್ಷ ಕಿರಣ್ಮಯ್​ ನಂದಾ ಮತ್ತು ರಾಜ್ಯ ಸಭಾ ಸದಸ್ಯೆ ಜಯ ಬಚ್ಚನ್​​ರನ್ನು ಕಳಿಸಿದ್ದರು.

ಇದನ್ನೂ ಓದಿ: ಕಣ್ಣಿನ ಕೆಳಗಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಹೀಗೆ ಮಾಡಿ

Published On - 3:29 pm, Tue, 8 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ