AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ ಸಚಿವ ಸಂಪುಟದ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Dara Singh Chauhan ಅಖಿಲೇಶ್ ಯಾದವ್ ಅವರನ್ನು ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಚೌಹಾಣ್, 2017 ರಲ್ಲಿ ಬಿಜೆಪಿ ಹಿಂದುಳಿದ ಸಮುದಾಯಗಳ ಜನರಿಂದ ಮತಗಳನ್ನು ತೆಗೆದುಕೊಂಡಿತು. ಆದರೆ ಪ್ರತಿಯಾಗಿ ಏನನ್ನೂ ನೀಡಲಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ ಸಚಿವ ಸಂಪುಟದ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಸಮಾಜವಾದಿ ಪಕ್ಷ ಸೇರಿದ ದಾರಾ ಸಿಂಗ್ ಚೌಹಾಣ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 16, 2022 | 1:58 PM

Share

ಲಖನೌ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ (Yogi Adityanath) ಸಂಪುಟದ ಮಾಜಿ ಸಚಿವ ಮತ್ತು ಮಧುಬನ್ ಕ್ಷೇತ್ರದ ಬಿಜೆಪಿ ಶಾಸಕ ದಾರಾ ಸಿಂಗ್ ಚೌಹಾಣ್ ಅವರು ಭಾನುವಾರ ಲಖನೌನದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರ ಸಮ್ಮುಖದಲ್ಲಿ ಔಪಚಾರಿಕವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ನಂತರ ಯಾದವ್ ನೇತೃತ್ವದ ಪಕ್ಷಕ್ಕೆ ಬಿಜೆಪಿ ತೊರೆದ ಮೂರನೇ ಸಚಿವರಾಗಿದ್ದಾರೆ. ಬಿಜೆಪಿ ಮಿತ್ರಪಕ್ಷ ಅಪ್ನಾ ದಳ-ಎಸ್‌ನ ಮತ್ತೊಬ್ಬ ಹಾಲಿ ಶಾಸಕ ಆರ್‌ಕೆ ವರ್ಮಾ ಕೂಡ ಸಮಾಜವಾದಿ ಪಕ್ಷಕ್ಕೆ ಸೇರಿದರು.  ಮೌರ್ಯ, ಸೈನಿ ಮತ್ತು ಆಡಳಿತದ ಇತರ ಐವರು ಶಾಸಕರು ಶುಕ್ರವಾರ ಔಪಚಾರಿಕವಾಗಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಕಳೆದ ಕೆಲವು ದಿನಗಳಿಂದ ಎಲ್ಲಾ ನಾಯಕರು ಒಬ್ಬರ ಹಿಂದೆ ಒಬ್ಬರು ಎಂಬಂತೆ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳಿನಿಂದ ಏಳು ಹಂತಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಅಖಿಲೇಶ್ ಯಾದವ್ ಅವರನ್ನು ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಚೌಹಾಣ್, 2017 ರಲ್ಲಿ ಬಿಜೆಪಿ ಹಿಂದುಳಿದ ಸಮುದಾಯಗಳ ಜನರಿಂದ ಮತಗಳನ್ನು ತೆಗೆದುಕೊಂಡಿತು. ಆದರೆ ಪ್ರತಿಯಾಗಿ ಏನನ್ನೂ ನೀಡಲಿಲ್ಲ. ಹೀಗಾಗಿ ಹಿಂದುಳಿದ ಸಮುದಾಯದವರೆಲ್ಲ ಎಸ್‌ಪಿಯ ಮೊರೆ ಹೋಗುತ್ತಿದ್ದಾರೆ ಎಂದರು.

ಬಿಜೆಪಿಯನ್ನು ಸೋಲಿಸಲು ಮತ್ತು ಅಧಿಕಾರದಿಂದ ಕೆಳಗಿಳಿಸುವ ಹೋರಾಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಾನು ಇಬ್ಬರನ್ನೂ ಅಭಿನಂದಿಸುತ್ತೇನೆ, ಬಿಜೆಪಿ ಅಭ್ಯರ್ಥಿಗಳ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ರೀತಿಯಲ್ಲಿ ಹೋರಾಡೋಣ ಎಂದು ಅಖಿಲೇಶ್  ಯಾದವ್ ಹೇಳಿದರು. “ಡಬಲ್ ಇಂಜಿನ್ ಸರ್ಕಾರದ ಜನರು (ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ) ಪರಸ್ಪರರ ಚಕ್ರಗಳನ್ನು ಕಿತ್ತುಹಾಕುತ್ತಿದ್ದಾರೆ” ಎಂದು ಅವರು ದೆಹಲಿ ಮತ್ತು ಉತ್ತರಪ್ರದೇಶದ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ದಾರಾ ಸಿಂಗ್ ಚೌಹಾಣ್ ಮತ್ತು ಅವರ ಬೆಂಬಲಿಗರನ್ನು ನಾನು ಸ್ವಾಗತಿಸುತ್ತೇನೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ ಪ್ರಭಾವಿ ಒಬಿಸಿ ನಾಯಕ ಚೌಹಾಣ್ ಅವರು ಬುಧವಾರ ರಾಜೀನಾಮೆ ನೀಡುವವರೆಗೂ ಮುಖ್ಯಮಂತ್ರಿ ಆದಿತ್ಯನಾಥ ಅವರ ಸಂಪುಟದಲ್ಲಿ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದರು.

2017 ರಲ್ಲಿ ಯಾದವ್ ಅವರನ್ನು ಸೋಲಿಸಲು ಪಕ್ಷವು ಯಾದವೇತರ ಒಬಿಸಿ ಮತಗಳನ್ನು ಅವಲಂಬಿಸಿದ್ದರೆ, ಅವರ ರಾಜೀನಾಮೆ (ಮತ್ತು ಇತರ ಶಾಸಕರ) ಬಿಜೆಪಿ ಮತ್ತೊಮ್ಮೆ ಗದ್ದುಗೆಗೇರುವ ಪ್ರಯತ್ನದಲ್ಲಿ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ

ಬಿಜೆಪಿ ತೊರೆದ ಬಹುತೇಕ ಎಲ್ಲರಂತೆ ಚೌಹಾಣ್ ಕೂಡಾ ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಅಗತ್ಯಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಬಿಜೆಪಿಯನ್ನು ದೂಷಿಸಿದರು. ಹಿಂದುಳಿದ ವರ್ಗಗಳ ಮೇಲೆ ಈ ಸರ್ಕಾರದ ದಬ್ಬಾಳಿಕೆಯ ಧೋರಣೆಯಿಂದ ನನಗೆ ನೋವಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: Uttar Pradesh Elections ಸ್ವಾಮಿ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ ಜತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Published On - 1:55 pm, Sun, 16 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ