PM Modi: ಉಕ್ರೇನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಚರ್ಚೆ; ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗಲಿರುವ ಪ್ರಧಾನಿ 

Ukraine Crisis | UP Rallies: ರಷ್ಯಾ ಹಾಗೂ ಉಕ್ರೇನ್ ನಡುವಿನ ಸ್ಥಿತಿಗತಿಯ ಕುರಿತು ಪ್ರಧಾನಿ ಮೋದಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಅವರು ಇಂದು ಉತ್ತರ ಪ್ರದೇಶ ಚುನಾವಣೆಯ ಪ್ರಚಾರದಲ್ಲೂ ಭಾಗಿಯಾಗಲಿದ್ದಾರೆ.

PM Modi: ಉಕ್ರೇನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಚರ್ಚೆ; ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗಲಿರುವ ಪ್ರಧಾನಿ 
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: shivaprasad.hs

Updated on: Mar 04, 2022 | 11:40 AM

ಉಕ್ರೇನ್ ಬಿಕ್ಕಟ್ಟಿನ (Ukraine Crisis) ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಣಾಸಿಯಲ್ಲಿ ಎರಡು ದಿನಗಳ ಕಾಲ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮತದಾನ ನಡೆಯುವ ಒಂಬತ್ತು ಜಿಲ್ಲೆಗಳ ಪೈಕಿ ವಾರಣಾಸಿಯಲ್ಲಿ ಅವರು ರೋಡ್‌ಶೋ ನಡೆಸಲಿದ್ದಾರೆ. ಪ್ರಸ್ತುತ ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಬಹುಮುಖ್ಯವಾಗಿ ಬೆಳವಣಿಗೆ ಹೊಂದುತ್ತಿರುವ ಉಕ್ರೇನ್ ಹಾಗೂ ರಷ್ಯಾ ನಡುವಿನ ಘಟನೆಗಳನ್ನು ಮೇಲ್ವಿಚಾರಣೆ ಮಾಡುತ್ತಾ ಖಾರ್ಕಿವ್ ಮತ್ತು ಸುಮಿ ಯುದ್ಧ ವಲಯಗಳಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಅವರು ಮಿರ್ಜಾಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಇಂದು (ಶುಕ್ರವಾರ) ಸಂಜೆಯ ನಂತರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ರೋಡ್‌ಶೋ ನಡೆಸಲಿದ್ದಾರೆ. ಅವರು ಇಂದು ವಾರಣಾಸಿಯಲ್ಲಿ ತಂಗುವ ನಿರೀಕ್ಷೆಯಿದ್ದು, ನಾಳೆ (ಶನಿವಾರ) ವಾರಣಾಸಿ (ಗ್ರಾಮೀಣ) ವಿಧಾನಸಭಾ ಕ್ಷೇತ್ರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಪ್ರಸ್ತುತ ಪ್ರಧಾನಿ ಅಧಿಕಾರಿಗಳೊಂದಿಗೆ ರಷ್ಯಾ- ಉಕ್ರೇನ್ ಸ್ಥಿತಿಗತಿ ಕುರಿತು ಸಭೆ ನಡೆಸುತ್ತಿದ್ದಾರೆ; ಈ ಸಂದರ್ಭದ ವಿಡಿಯೋ ಇಲ್ಲಿದೆ

ವಾರಣಾಸಿ-ಜೌನ್‌ಪುರ್-ಸೋನ್‌ಭದ್ರ ಪ್ರದೇಶಗಳಲ್ಲಿ ಚುನಾವಣಾ ಸಭೆಗಳಲ್ಲಿ ಪ್ರಧಾನಿ ತೊಡಗುತ್ತಿದ್ದರೂ ಕೂಡ ಅವರು, ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರದ ಉಸ್ತುವಾರಿಯನ್ನೂ ಗಮನಿಸುತ್ತಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉಕ್ರೇನ್​ನಲ್ಲಿ ಸಿಲುಕಿದ್ದ ಭಾರತೀಯರನ್ನು ಪೂರ್ವ ಗಡಿಗಳ ಮೂಲಕ ಸ್ಥಳಾಂತರಿಸುವ ಪ್ರಕ್ರಿಯೆಯನ್ನೂ ಪ್ರಧಾನಿ ಗಮನಿಸುತ್ತಿದ್ದಾರೆ.

ಯುದ್ಧ ಪೀಡಿತ ಉಕ್ರೇನ್‌ನಿಂದ ರಷ್ಯಾ ಮಾರ್ಗವಾಗಿ ಹಾಗೂ ಪಾಶ್ಚಾತ್ಯ ರಾಷ್ಟ್ರಗಳ ಮಾರ್ಗವಾಗಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತರಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಾಜತಾಂತ್ರಿಕ ಮಾತುಕತೆಯಲ್ಲಿ ನಿರತರಾಗಿದ್ದಾರೆ. ರಷ್ಯಾದ ಪಡೆಗಳಿಂದ ಭಾರೀ ಬಾಂಬ್ ದಾಳಿಯನ್ನು ಎದುರಿಸುತ್ತಿರುವ ನಗರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತ ಮಾರ್ಗದಿಂದ ಸ್ಥಳಾಂತರಿಸಲು ದೋವಲ್ ರಷ್ಯಾದ ಕೌಂಟರ್ಪಾರ್ಟಿ ನಿಕೊಲಾಯ್ ಪಟ್ರುಶೆವ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತವು ಉಕ್ರೇನ್ ಹಾಗೂ ರಷ್ಯಾವು ರಾಜತಾಂತ್ರಿಕ ವಿಧಾನದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಮೊದಲಿನಿಂದಲೂ ಒತ್ತಾಯಿಸುತ್ತಿದ್ದು, ಭದ್ರತಾ ಮಂಡಳಿಯಲ್ಲಿ ರಷ್ಯಾದ ವಿರುದ್ಧದ ನಿರ್ಣಯಗಳ ಮತದಾನದಿಂದ ದೂರ ಉಳಿದಿದೆ.

ಇದನ್ನೂ ಓದಿ:

Stock Market: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ತತ್ತರಿಸಿದ ಷೇರುಪೇಟೆ; ಸೆನ್ಸೆಕ್ಸ್ 1000ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿತ

Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್