UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ

ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

UP Assembly Elections: ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಕಾಂಗ್ರೆಸ್​ ಪಕ್ಷದ ಸಿಎಂ ಅಭ್ಯರ್ಥಿ? ಸಂಚಲನ ಸೃಷ್ಟಿಸಿದ ಹೇಳಿಕೆ
ಪ್ರಿಯಾಂಕಾ ಗಾಂಧಿ
Follow us
TV9 Web
| Updated By: ganapathi bhat

Updated on:Jan 21, 2022 | 2:18 PM

ದೆಹಲಿ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಉತ್ತರ ಪ್ರದೇಶ ಚುನಾವಣೆಗೆ (Uttar Pradesh Assembly Elections 2022) ಸಂಬಂಧಿಸಿದಂತೆ ಹೊಸ ಸಂಚಲನದ ಹೇಳಿಕೆಯೊಂದು ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಯಾರು (Congress CM Candidate) ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಉತ್ತರ ಪ್ರದೇಶದ ಯುವ ಸಮುದಾಯದ ಮಂದಿಗೆ ಉದ್ಯೋಗ ನೀಡುವ ಕುರಿತಾದ ಪ್ರಣಾಳಿಕೆ ಬಿಡುಗಡೆ ಮಾಡಿದ ಅವರು ಮಾತನಾಡಿದ್ದಾರೆ. ಈ ವೇಳೆ, ಬಿಜೆಪಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮುಂದಿಟ್ಟಿದೆ. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ನೀವು ಬೇರೆ ಯಾವುದಾದರೂ ಮುಖವನ್ನು ಕಾಣುತ್ತೀರಾ?’ ಎಂದು ಪ್ರಶ್ನೆ ಮಾಡಿದ್ದಾರೆ. ಆ ಬಗ್ಗೆ ಮತ್ತಷ್ಟು ಪ್ರಶ್ನಿಸಿದಾಗ ‘ನೀವು ನನ್ನ ಮುಖವನ್ನು ನೋಡಬಹುದು? ಕಾಣುವುದಿಲ್ಲವೇ?’ ಎಂದು ಕೇಳಿದ್ದಾರೆ. ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಪ್ರಿಯಾಂಕಾ ಗಾಂಧಿ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಲಬ್ಯವಾಗಿಲ್ಲ. ಆದರೆ, ಪ್ರಿಯಾಂಕ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಹುಟ್ಟಿಸಿದೆ. ಮುಖ್ಯಮಂತ್ರಿ ಆಗಲು ಪ್ರಿಯಾಂಕ ಗಾಂಧಿ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎಂದೇನಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಉತ್ತರ ಪ್ರದೇಶದಲ್ಲಿ ಈ ಮೊದಲು ಕೂಡ ಯೋಗಿ ಆದಿತ್ಯನಾಥ್ ಅಥವಾ ಅಖಿಲೇಶ್ ಯಾದವ್ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಯೋಗಿ ಆದಿತ್ಯನಾಥ್ ಗೋರಖ್​ಪುರ್​ದಿಂದ ಹಾಗೂ ಅಖಿಲೇಶ್ ಯಾದವ್ ಕರ್ಹಾಲ್ ಎಂಬಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಇದನ್ನೂ ಓದಿ: ಹೋಮ್​​ವರ್ಕ್ ಮಾಡಿಸಲು ಮುಂಜಾನೆ 3-4 ಗಂಟೆವರೆಗೆ ಮಕ್ಕಳೊಂದಿಗೆ ಕುಳಿತುಕೊಳ್ಳಬೇಕಾಗಿ ಬರುತ್ತದೆ: ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: Fact check ಯೋಗಿ ಸರ್ಕಾರ ಆಯ್ಕೆಯಾದರೆ ಉತ್ತರ ಪ್ರದೇಶ ಸಮೃದ್ಧಿ ಕಾಣಲಿದೆ ಎಂದು ಹೇಳಿದ್ದಾರೆಯೇ ಅಖಿಲೇಶ್ ಯಾದವ್?

Published On - 2:09 pm, Fri, 21 January 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್