ಉತ್ತರ ಪ್ರದೇಶದಲ್ಲಿ ಮುಷ್ಕರ ಆರಂಭಿಸಿದ ರಾಜಸ್ಥಾನದ ನಿರುದ್ಯೋಗಿ ಯುವಕರು: ಪರಸ್ಪರ ಹರಿಹಾಯ್ದ ಕಾಂಗ್ರೆಸ್​-ಬಿಜೆಪಿ ನಾಯಕರು

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಪತ್ರಿಕೆಗಳನ್ನು ಸೋರಿಕೆ ಮಾಡುವುದನ್ನು ಜಾಮೀನು ನೀಡಲು ಸಾಧ್ಯವಿಲ್ಲದ ಅಪರಾಧ ಎಂದು ಘೋಷಿಸಬೇಕು ಎಂದು ರಾಜಸ್ಥಾನದ ನಿರುದ್ಯೋಗಿ ಯುವಕರು ಒತ್ತಾಯಿಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಷ್ಕರ ಆರಂಭಿಸಿದ ರಾಜಸ್ಥಾನದ ನಿರುದ್ಯೋಗಿ ಯುವಕರು: ಪರಸ್ಪರ ಹರಿಹಾಯ್ದ ಕಾಂಗ್ರೆಸ್​-ಬಿಜೆಪಿ ನಾಯಕರು
ಲಖನೌ ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜಸ್ಥಾನದ ನಿರುದ್ಯೋಗಿಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 29, 2021 | 10:50 PM

ಲಖನೌ: ರಾಜಸ್ಥಾನಸ್ಥಾನದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಸಚಿವರಿಗೆ ಗುಲಾಬಿ ಕೊಟ್ಟು, ಉಪವಾಸ ಸತ್ಯಾಗ್ರಹ ನಡೆಸಿದ್ದ ನಿರುದ್ಯೋಗಿ ಯುವಕರು ಇದೀಗ ಉತ್ತರ ಪ್ರದೇಶದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಭೇಟಿಯಾಗಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣೆಯ ಹೊಸಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಈ ಬೆಳವಣಿಗೆಯು ಹಲವು ವಿಶ್ಲೇಷಣೆಗಳನ್ನು ಹುಟ್ಟುಹಾಕಿದೆ. ರಾಜಸ್ಥಾನ ನಿರುದ್ಯೋಗಿಗಳ ಏಕಿಕರಣ ಮಹಾಸಂಘದ ವೇದಿಕೆಯಡಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ. ರಾಜಸ್ಥಾನದ ನಿರುದ್ಯೋಗಿ ಯುವಕರ ಬಹುಕಾಲದ ಬೇಡಿಕೆ ಈಡೇರಿಸಬೇಕು ಎಂದು ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಕಾಂಗ್ರೆಸ್ ಸರ್ಕಾರವನ್ನು ಯುವಕರು ಒತ್ತಾಯಿಸುತ್ತಿದ್ದಾರೆ.

ಈಗಾಗಲೇ ಪ್ರವೇಶ ಪರೀಕ್ಷೆಗಳು ನಡೆದಿರುವ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು. ಸರ್ಕಾರಿ ಉದ್ಯೋಗಗಳ ಸಂಖ್ಯೆ ಹೆಚ್ಚಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಪತ್ರಿಕೆಗಳನ್ನು ಸೋರಿಕೆ ಮಾಡುವುದನ್ನು ಜಾಮೀನು ನೀಡಲು ಸಾಧ್ಯವಿಲ್ಲದ ಅಪರಾಧ ಎಂದು ಘೋಷಿಸಬೇಕು ಎಂದು ರಾಜಸ್ಥಾನದ ನಿರುದ್ಯೋಗಿ ಯುವಕರು ಒತ್ತಾಯಿಸುತ್ತಿದ್ದಾರೆ.

ನಾವು ಲಖನೌ ಪ್ರದೇಶ ಕಾಂಗ್ರೆಸ್​ ಸಮಿತಿ ಕಚೇರಿ ಎದುರು ಇದೀಗ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇವೆ. ಕಳೆದ 47 ದಿನಗಳಿಂದ ಜೈಪುರದಲ್ಲಿ ನಾವು ಪ್ರತಿಭಟಿಸುತ್ತಿದ್ದೆವು. ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಭೇಟಿಯಾಗಬೇಕು ಎಂಬುದು ನಮ್ಮ ಉದ್ದೇಶ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ 20 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. 2018ರ ವಿಧಾನಸಭಾ ಚುನಾವಣೆಗಳಲ್ಲಿ ನಾವು ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದೆವು. ಆದರೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು ನಿರುದ್ಯೋಗಿಗಳ ಸಂಘದ ಅಧ್ಯಕ್ಷ ಉಪೇನ್ ಯಾದವ್ ಹೇಳಿದರು.

ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರ ವಿರುದ್ಧ ಕೆಲಸ ಮಾಡುವುದಾಗಿ ನಿರುದ್ಯೋಗಿಗಳ ಸಂಘಟನೆ ಈ ಮೊದಲು ಘೋಷಿಸಿತ್ತು. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚಿಸಿದೆ. ಅಲ್ಲಿ ನಿರುದ್ಯೋಗಿ ಯುವಕರಿಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಈಗ ಉತ್ತರ ಪ್ರದೇಶದಲ್ಲಿ ಜನರಿಗೆ ದೊಡ್ಡದೊಡ್ಡ ಭರವಸೆಗಳನ್ನು ಕೊಡುತ್ತಿದ್ದಾರೆ. ಪಕ್ಷವು ಮೊದಲು ರಾಜಸ್ಥಾನದ ಯುವಕರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಹೊಸದಾಗಿ ನೇಮಕವಾಗಿರುವ ಸಲಹೆಗಾರ ಡ್ಯಾನಿಶ್ ಅಬ್ರಾರ್ ನವೆಂಬರ್ 23ರಂದು ಪ್ರತಿಭಟನಾ ನಿರತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆದರೂ ಯಾವುದೇ ಸಹಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಪ್ರತಿಭಟನಾನಿರತರು ನವೆಂಬರ್ 26ರಂದು ಲಖನೌಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದರು. ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು ತಮ್ಮೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆರೋಪ ಮಾಡಿದರು.

ನಿರುದ್ಯೋಗಿ ಯುವಕರು ರಾಜಸ್ಥಾನ ಸರ್ಕಾರದ ವಿರುದ್ಧ ನಡೆಸುತ್ತಿರುವ ಈ ಹೋರಾಟವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ವಿಚಾರದಲ್ಲಿ ಬಿಜೆಪಿ ಹಿಂದೆ ಬಿದ್ದಿಲ್ಲ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಅವರು ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ, ವಿರೋಧ ಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಸಹ ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ್ದಾರೆ.

ಈ ಕುರಿತು ಭಾನುವಾರ ಪ್ರತಿಕ್ರಿಯಿಸಿದ್ದ ಅಶೋಕ್ ಗೆಹ್ಲೋಟ್ ವಿರೋಧ ಪಕ್ಷಗಳು ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿವೆ. ಲಖನೌದಲ್ಲಿ ಧರಣಿ ನಡೆಸುವ ಔಚಿತ್ಯವಾದರೂ ಏನು? ಇದು ರಾಜಕೀಯವಲ್ಲವೇ? ಉತ್ತರ ಪ್ರದೇಶದಲ್ಲಿರುವ ಬಿಜೆಪಿ ಸರ್ಕಾರ ಎಂದು ಗೆಹ್ಲೋಟ್ ಹೇಳಿದ್ದರು. ಈಚೆಗೆ ನಡೆದ ಹಲವು ರಾಜ್ಯಗಳ ಉಪಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಬಿಜೆಪಿ ಇದೀಗ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದೆ. ದೇಶದಲ್ಲಿಯೇ ಅತಿಹೆಚ್ಚು ಪ್ರಮಾಣದ ಉದ್ಯೋಗವನ್ನು ರಾಜಸ್ಥಾನದಲ್ಲಿ ಒದಗಿಸಲಾಗಿದೆ. 1 ಲಕ್ಷ ಮಂದಿಗೆ ಉದ್ಯೋಗ ದೊರೆತಿದೆ. 77,000 ಮಂದಿಯ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ದೇಶದಲ್ಲಿ ಎಲ್ಲಿಯೂ ಇಷ್ಟು ಪ್ರಗತಿ ಸಾಧಿಸಿಲ್ಲ. ಆದರೆ ಮುಂದಿನ ದಿನಗಳಲ್ಲಿ ಕೆಲವರು ಚುನಾವಣೆಗೆ ನಿಲ್ಲಬೇಕಾಗಿದೆ. ಅವರಿಗೆ ಸರ್ಕಾರ ಉದ್ಯೋಗ ನೀಡಿದರೂ ಅವರು ಕೆಲವ ಮಾಡುವುದಿಲ್ಲ. ಬಿಜೆಪಿ ಅಥವಾ ಕಾಂಗ್ರೆಸ್​ನ ಟಿಕೆಟ್​ಗಾಗಿ ಅವರು ಓಡಾಡುತ್ತಾರೆ ಎಂದು ಗೆಹ್ಲೋಟ್ ಟೀಕಿಸಿದರು. ನಿರುದ್ಯೋಗಿಗಳನ್ನು ಸರ್ಕಾರ ಒಂದು ಕುಟುಂಬವಾಗಿ ಪರಿಗಣಿಸಿ, ಅವರ ಹಿತ ಚಿಂತನೆ ಮಾಡುತ್ತಿರುವಾಗ ಅವರು ಲಖನೌಗೆ ಹೋಗಿ ಏನು ಮಾಡುತ್ತಾರೆ ಎಂದು ಗೆಹ್ಲೋಟ್ ಪ್ರಶ್ನಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ನಾಲ್ಕೂವರೆ ವರ್ಷದ ಬಿಜೆಪಿ ಸರ್ಕಾರ ಉತ್ತಮ ಆಡಳಿತದ ಮೈಲಿಗಲ್ಲು: ಯೋಗಿ ಆದಿತ್ಯನಾಥ ಇದನ್ನೂ ಓದಿ: ಚುನಾವಣೆ ಹೊಸಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಸಾಲುಸಾಲು ಯೋಜನೆಗಳನ್ನು ಲೋಕಾರ್ಪಣೆ ಮಾಡಲು ಬಿರುಸಿನ ಸಿದ್ಧತೆ

Published On - 10:49 pm, Mon, 29 November 21

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್