UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ

“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು

UP polls ರಾಮಾಯಣದಲ್ಲಿ ಲಂಕೇಶ್‌ನಂತೆ ಸಮಾಜವಾದಿ ಪಕ್ಷ ದಂಗೇಶ್: ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 22, 2022 | 6:09 PM

ಲಖನೌ: ಉತ್ತರಪ್ರದೇಶದ (Uttar Pradesh) ಬಹ್ರೈಚ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಅಖಿಲೇಶ್ ಯಾದವ್ (Akhilesh Yadav) ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath)ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸಮಾಜವಾದಿ ಪಕ್ಷವನ್ನು ‘ದಂಗೇಶ್’ (ಗಲಭೆ ನಡೆಸುವವರು) ಎಂದು ಆದಿತ್ಯನಾಥ ಕರೆದಿದ್ದಾರೆ.“ಸಮಾಜವಾದಿ ಪಕ್ಷವು ಮಾಫಿಯಾಗಳು ಮತ್ತು ಭಯೋತ್ಪಾದಕರನ್ನು ರಕ್ಷಿಸಿತು. ಈಗ ಉತ್ತರ ಪ್ರದೇಶದಲ್ಲಿ ಗಲಭೆಗಳು ಮತ್ತು ಕರ್ಫ್ಯೂಗಳಿಲ್ಲ. ಅವರು (ಹಿಂದಿನ ಸರ್ಕಾರಗಳು) ಕರ್ಫ್ಯೂಗಳನ್ನು ವಿಧಿಸಿದರು. ಆದರೆ ನಾವು ಕನ್ವರ್ ಯಾತ್ರೆಯನ್ನು ಮಾಡಿದೆವು. ರಾಮಾಯಣದಲ್ಲಿ ‘ಲಂಕೇಶ್’ ಅಂತ ನೀವು ಕೇಳಿರಬೇಕು. ಅದೇ ರೀತಿ ಸಮಾಜವಾದಿ ಪಕ್ಷವನ್ನು ದಂಗೇಶ್ ಎಂದು ಕರೆಯಬೇಕು” ಎಂದು ಆದಿತ್ಯನಾಥ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ತಪ್ಪಿತಸ್ಥರಿಗೆ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಯುಪಿ ಸಿಎಂ ಹೇಳಿದ್ದಾರೆ. ಸಮಾಜವಾದಿ ಪಕ್ಷ ಭಯೋತ್ಪಾದಕರು ಮತ್ತು ದರೋಡೆಕೋರರನ್ನು ರಕ್ಷಿಸುತ್ತಿದೆ ಎಂದು ಯೋಗಿ ಆದಿತ್ಯನಾಥ ಆರೋಪಿಸುವುದು ಇದೇ ಮೊದಲಲ್ಲ.

ಅಹಮದಾಬಾದ್ ಸ್ಫೋಟ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ನಂತರ ಯುಪಿ ಮುಖ್ಯಮಂತ್ರಿಯ ದಾಳಿಗಳು ತೀಕ್ಷ್ಣವಾಗಿವೆ. ಕೆಲವು ದಿನಗಳ ಹಿಂದೆ ಪಿಲಿಭಿತ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ, ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರನ್ನು 2008 ರ ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಒಬ್ಬರ ಜತೆ ನಂಟು ಇದೆ ಎಂದು ಆರೋಪಿಸಿದ್ದರು.

ಅಹಮದಾಬಾದ್ ನ್ಯಾಯಾಲಯವು (2008) ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು. ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಯನ್ನು ನೀಡಲಾಯಿತು. ಅವರಲ್ಲಿ ಉತ್ತರ ಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಸಮಾಜವಾದಿ ಪಕ್ಷದ  ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ತನ್ನ 403 ಸದಸ್ಯರ ವಿಧಾನಸಭೆಯನ್ನು ಆಯ್ಕೆ ಮಾಡಲು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ಮೂರು ಹಂತಗಳು ಫೆಬ್ರವರಿ 10, 14 ಮತ್ತು 20 ರಂದು ನಡೆದವು. ನಾಲ್ಕನೇ ಹಂತವು ಬುಧವಾರ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Samantha: ಕೀಳು ಭಾಷೆಯಲ್ಲಿ ಸಮಂತಾಗೆ ಪ್ರಶ್ನಿಸಿದ ಅಭಿಮಾನಿ; ನಟಿಯ ಉತ್ತರ ಏನಿತ್ತು?

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ