ಬಿಜೆಪಿಯಿಂದ ಸಮಾಜವಾದಿ ಪಕ್ಷಕ್ಕೆ ಸೇರಿದ್ದ ಸ್ವಾಮಿ ಪ್ರಸಾದ್​ ಮೌರ್ಯರಿಗೆ ಸ್ವಕ್ಷೇತ್ರದಿಂದ ಸಿಗದ ಟಿಕೆಟ್​; ಅಚ್ಚರಿ ತಂದ ಬದಲಾವಣೆ

ಉತ್ತರ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಕಾರ್ಮಿಕ ಇಲಾಖೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಜನವರಿಯಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು.

ಬಿಜೆಪಿಯಿಂದ ಸಮಾಜವಾದಿ ಪಕ್ಷಕ್ಕೆ ಸೇರಿದ್ದ ಸ್ವಾಮಿ ಪ್ರಸಾದ್​ ಮೌರ್ಯರಿಗೆ ಸ್ವಕ್ಷೇತ್ರದಿಂದ ಸಿಗದ ಟಿಕೆಟ್​; ಅಚ್ಚರಿ ತಂದ ಬದಲಾವಣೆ
ಎಸ್​ಪಿ ಸೇರಿದ ಬಿಜೆಪಿ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ
Follow us
TV9 Web
| Updated By: Lakshmi Hegde

Updated on:Feb 02, 2022 | 2:47 PM

ಉತ್ತರ ಪ್ರದೇಶದಲ್ಲಿ ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳು (BJP and Samajwadi Party) ಅಭ್ಯರ್ಥಿಗಳ ಆಯ್ಕೆಯಲ್ಲಿ ಕೆಲವು ಅಚ್ಚರಿಯ ನಡೆ ತೋರಿಸುತ್ತಿವೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯರಿಗೆ ಸಮಾಜವಾದಿ ಪಕ್ಷ, ಕುಶಿನಗರ ಜಿಲ್ಲೆಯ ಫಜಿಲ್​ನಗರ ಕ್ಷೇತ್ರದಿಂದ ಟಿಕೆಟ್​ ನೀಡಿದೆ. ಹಿಂದುಳಿದ ವರ್ಗದ ಪ್ರಬಲ ನಾಯಕರಾದ ಅವರು ಈ ಹಿಂದೆ ಪದ್ರೌನಾ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾರೆ. ಆದರೆ ಎಸ್​ಪಿ ಅವರನ್ನು ಈ ಸಲ ಪದ್ರೌನದಿಂದ ಫಜಿಲ್​ನಗರಕ್ಕೆ ಶಿಫ್ಟ್ ಮಾಡಿದೆ. ಹಾಗೇ, ಸಿರಥು ಕ್ಷೇತ್ರದಲ್ಲಿ ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯರಿಗೆ ಮುಖಾಮುಖಿಯಾಗಿ ಎಸ್​​ಪಿಯಿಂದ ಪಲ್ಲವಿ ಪಟೇಲ್​ ಎಂಬುವರು  ಕಣಕ್ಕಿಳಿದಿದ್ದಾರೆ. 

ಇನ್ನೊಂದೆಡೆ ಬಿಜೆಪಿಯಿಂದ ಸರೋಜಿನಿ ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜೇಶ್ವರ್​ ಸಿಂಗ್​ ವಿರುದ್ಧ ಎಸ್​ಪಿ ಅಭಿಷೇಕ್​ ಮಿಶ್ರಾರನ್ನು ಕಣಕ್ಕಿಳಿಸಿದೆ. ರಾಜೇಶ್ವರ್​ ಸಿಂಗ್​ ಅವರು ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿದ್ದು, ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಅಭಿಷೇಕ್​ ಮಿಶ್ರಾ ಬ್ರಾಹ್ಮಣ ಸಮುದಾಯದ ಪ್ರಮುಖ ನಾಯಕರು. ಇವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಖನೌ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಇಷ್ಟು ದಿನ ಅಲ್ಲಿಯೇ ಚುನಾವಣಾ ಪ್ರಚಾರವನ್ನೂ ನಡೆಸಿದ್ದರು.  ಆದರೆ ಈಗ ಅವರಿಗೆ ಸರೋಜಿನಿ ನಗರದಿಂದ ಎಸ್​ಪಿ ಟಿಕೆಟ್​ ಸಿಕ್ಕಿದೆ.

ಉತ್ತರ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಕಾರ್ಮಿಕ ಇಲಾಖೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಜನವರಿಯಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಹಿಂದುಳಿದ ವರ್ಗದ ನಾಯಕರಾಗಿದ್ದ ಇವರು ಎಸ್​ಪಿ ಸೇರ್ಪಡೆ ಬೆನ್ನಲ್ಲೇ, ಇನ್ನೂ ಇಬ್ಬರು ಸಚಿವರು, ಶಾಸಕರು ಕೂಡ ಅವರನ್ನು ಹಿಂಬಾಲಿಸಿದ್ದರು. 2017ರಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ಸರ್ಕಾರ ಅಂದಿನಿಂದಲೂ ಹಿಂದುಳಿದ ವರ್ಗದವರ ಏಳ್ಗೆಗೆ ಏನೂ ಮಾಡಿಲ್ಲ. ಅವರನ್ನು ನಿರ್ಲಕ್ಷಿಸುತ್ತಿದೆ ಎಂಬುದು ಅವರ ಆರೋಪವಾಗಿತ್ತು. 2017ರ ಚುನಾವಣೆ ಸಂದರ್ಭದಲ್ಲಿ ಕೇಶವ್​ ಪ್ರಸಾದ್ ಮೌರ್ಯರನ್ನು ಬಿಜೆಪಿ ಅಭ್ಯರ್ಥಿಯಂತೆ ಬಿಂಬಿಸಿದ್ದ ಬಿಜೆಪಿ ಗೆದ್ದ ಬಳಿಕ ಗೋರಖಪುರದಿಂದ ಒಬ್ಬರನ್ನು (ಯೋಗಿ ಆದಿತ್ಯನಾಥ್​) ಕರೆದುಕೊಂಡು ಬಂತು ಎಂದೂ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.  ಸದ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿರುವುದು ಸಮಾಜವಾದಿ ಪಕ್ಷವೇ ಆಗಿದೆ.

ಇದನ್ನೂ ಓದಿ: ಸದನದಲ್ಲಿ ಅಡ್ಡಿಪಡಿಸುವುದು ಸರಿಯಲ್ಲ, ಜನರ ವಿಶ್ವಾಸವನ್ನು ಹೆಚ್ಚಿಸುವ ಕೆಲಸ ಮಾಡಿ: ಸಂಸದರಿಗೆ ವೆಂಕಯ್ಯ ನಾಯ್ಡು ಕಿವಿ ಮಾತು

Published On - 2:46 pm, Wed, 2 February 22

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ