AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಫಿಯಾಗಳನ್ನು ಬೆಂಬಲಿಸುವ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಅಭಿವೃದ್ಧಿಯಾಗಲಾರದು; ಅಖಿಲೇಶ್ ಯಾದವ್​ ವಿರುದ್ಧ ಪಿಎಂ ಮೋದಿ ವಾಗ್ದಾಳಿ

ಇಂದು ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ವಾರಾಣಸಿಯಲ್ಲಿರುವ ಗುರು ರವಿದಾಸದ ಜನ್ಮಸ್ಥಳವನ್ನು ಅಭಿವೃದ್ಧಿಗೊಳಿಸುವಂತೆ ರವಿದಾಸರ ಅನುಯಾಯಿಗಳು ಹಿಂದಿನ ಸರ್ಕಾರವನ್ನೂ ಕೇಳಿದ್ದರು.

ಮಾಫಿಯಾಗಳನ್ನು ಬೆಂಬಲಿಸುವ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಅಭಿವೃದ್ಧಿಯಾಗಲಾರದು; ಅಖಿಲೇಶ್ ಯಾದವ್​ ವಿರುದ್ಧ ಪಿಎಂ ಮೋದಿ ವಾಗ್ದಾಳಿ
ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Feb 16, 2022 | 6:55 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಪಂಜಾಬ್​ನಲ್ಲಿ ಚುನಾವಣಾ ರ್ಯಾಲಿ ನಡೆಸಿದ ಬಳಿಕ ಉತ್ತರ ಪ್ರದೇಶದ ಸೀತಾಪುರದಲ್ಲಿಯೂ ಪ್ರಚಾರ ನಡೆಸಿದರು. ಇಲ್ಲಿ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಉತ್ತರಪ್ರದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದರ ಅರ್ಥ ದಂಗಾ ರಾಜ್​ (ಗಲಭೆಗಳೊಂದಿಗೆ ಆಡಳಿತ ನಡೆಸುವುದು), ಮಾಫಿಯಾ ರಾಜ್​ (ಮಾಫಿಯಾ ಆಡಳಿತ) ಮತ್ತು ಗೂಂಡಾರಾಜ್​ (ಗೂಂಡಾಗಳ ಆಡಳಿತ) ಸಂಪೂರ್ಣವಾಗಿ ಕೊನೆಗೊಳ್ಳುವುದು ಎಂದು. ಹಾಗೇ, ಇಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ಎಂದರೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಡಬಲ್​ ವೇಗದಲ್ಲಿ ಇಲ್ಲಿ ಜಾರಿಗೊಳಿಸುವುದು ಎಂದೂ ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು.

ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಮಾಫಿಯಾ ಆಡಳಿತವಿದ್ದಾಗ ಬಡಜನರನ್ನು ಕೇಳುವವರೇ ಇರಲಿಲ್ಲ. ಅಂಥ ವಾತಾವಾರಣವನ್ನು ಇಲ್ಲಿ ಸರ್ಕಾರ ರಚನೆ ಮಾಡಿದ್ದ ರಾಜಕಾರಣಿಗಳ ಕುಟುಂಬ ಸೃಷ್ಟಿ ಮಾಡಿತ್ತು. ಯಾವ ಪಕ್ಷ ದಂಗೆಗಳು, ಮಾಫಿಯಾಗಳಿಗೆ ಬೆಂಬಲವಾಗಿ ನಿಲ್ಲುತ್ತದೆಯೋ ಆ ಪಕ್ಷ ಸರ್ಕಾರ ರಚನೆ ಮಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಹೇಳಿದರು. ಹಾಗೇ ಯೋಗಿ ಆದಿತ್ಯ ನಾಥ್​ ಸರ್ಕಾರದ ಯೋಜನೆಗಳನ್ನು ಶ್ಲಾಘಿಸಿದರು.

ಇಂದು ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ವಾರಾಣಸಿಯಲ್ಲಿರುವ ಗುರು ರವಿದಾಸದ ಜನ್ಮಸ್ಥಳವನ್ನು ಅಭಿವೃದ್ಧಿಗೊಳಿಸುವಂತೆ ರವಿದಾಸರ ಅನುಯಾಯಿಗಳು ಹಿಂದಿನ ಸರ್ಕಾರವನ್ನೂ ಕೇಳಿದ್ದರು. ಆದರೆ ಅವರು ಅದನ್ನು ಕಿವಿಮೇಲೆ ಹಾಕಿಕೊಳ್ಳಲಿಲ್ಲ. ಆದರೆ ಬಿಜೆಪಿ ಸರ್ಕಾರ ಗುರು ರವಿದಾಸರ ಜನ್ಮ ಸ್ಥಳವನ್ನು ಅಭಿವೃದ್ಧಿಗೊಳಿಸಲು ಎಲ್ಲ ಕ್ರಮಗಳನ್ನೂ ಕೈಗೊಂಡಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಪಂಜಾಬ್​ ಮತ್ತು ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿ ನಡೆಸುವುದಕ್ಕೂ ಪೂರ್ವ ಪ್ರಧಾನಿ ಮೋದಿ ಇಂದು ದೆಹಲಿಯ ಕಾರೋಲ್ ಬಾಘ್​​ನಲ್ಲಿರುವ ಗುರು ರವಿದಾಸರ ವಿಶ್ವಾಸ ಧಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿವೆ. ಈ ಎಲ್ಲ ಕ್ಷೇತ್ರಗಳಿಗೆ ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಎರಡು ಹಂತದ ಮತದಾನ ಈಗಾಗಲೇ ಮುಕ್ತಾಯಗೊಂಡಿದ್ದು, ಒಟ್ಟು 113 ಕ್ಷೇತ್ರಗಳಲ್ಲಿ ಚುನಾವಣಾ ಮುಗಿದಿದ್ದು, ಇನ್ನೂ ಐದು ಹಂತಗಳು ಬಾಕಿ ಇವೆ. ಫೆ.20, 23, 27, ಮಾರ್ಚ್​ 3 ಮತ್ತು 7ರಂದು ಮತದಾನ ನಡೆಯಲಿದ್ದು, ಮಾರ್ಚ್​ 10ಕ್ಕೆ ಮತ ಎಣಿಕೆ ಇದೆ.

ಇದನ್ನೂ ಓದಿ: ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಅಧಿಕಾರ ನಡೆಸಲು ಸಾಧ್ಯವಿಲ್ಲ: ಚರಣ್​ಜಿತ್ ಸಿಂಗ್ ಚನ್ನಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ