ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಭಯೋತ್ಪಾದನೆ ಬಿತ್ತುತ್ತದೆ; ಅಖಿಲೇಶ್ ಯಾದವ್ ವಿರುದ್ಧ ಅಮಿತ್ ಶಾ ವಾಗ್ದಾಳಿ

| Updated By: ಸುಷ್ಮಾ ಚಕ್ರೆ

Updated on: Feb 19, 2022 | 6:41 PM

UP Assembly Elections 2022: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಭಯೋತ್ಪಾದನೆಯನ್ನು ಬಿತ್ತುತ್ತದೆ, ದೇಶದ ಎಲ್ಲ ಭಾಗಗಳಿಗೆ ಭಯೋತ್ಪಾದಕರನ್ನು ಪೂರೈಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಭಯೋತ್ಪಾದನೆ ಬಿತ್ತುತ್ತದೆ; ಅಖಿಲೇಶ್ ಯಾದವ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಅಮಿತ್ ಶಾ
Follow us on

ಲಕ್ನೋ: ಉತ್ತರ ಪ್ರದೇಶದಲ್ಲಿ ನಾಳೆ (ಭಾನುವಾರ) 3ನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಇಂದು ಸಮಾಜವಾದಿ ಪಕ್ಷದ ವಿರುದ್ಧ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ನಡೆಸಿದ್ದು, ಸಮಾಜವಾದಿ ಪಕ್ಷ (Samajwadi Party) ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶವು ದೇಶದಾದ್ಯಂತ ಭಯೋತ್ಪಾದನೆಯನ್ನು ಬಿತ್ತುತ್ತದೆ ಎಂದು ಟೀಕಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಬ್ಬರೂ ಕೂಡ ಉತ್ತರ ಪ್ರದೇಶ ರಾಜ್ಯದಲ್ಲಿ ಮರು ಆಯ್ಕೆಯಾದರೆ ಬಿಜೆಪಿ ಪ್ರತಿ ವರ್ಷ ಎರಡು ಉಚಿತ ಗ್ಯಾಸ್ ಸಿಲಿಂಡರ್​ಗಳನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

“ಉತ್ತರ ಪ್ರದೇಶದಲ್ಲಿ ಆಕಸ್ಮಿಕವಾಗಿ ಸೈಕಲ್ ಸರ್ಕಾರ (ಸಮಾಜವಾದಿ ಪಕ್ಷ) ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶವು ದೇಶಾದ್ಯಂತ ಭಯೋತ್ಪಾದನೆಯನ್ನು ಬಿತ್ತುತ್ತದೆ, ದೇಶದ ಎಲ್ಲ ಭಾಗಗಳಿಗೆ ಭಯೋತ್ಪಾದಕರನ್ನು ಪೂರೈಸುತ್ತದೆ. ಅಖಿಲೇಶ್ ಸರ್ಕಾರದ ಅಡಿಯಲ್ಲಿ 2,000 ರೈತರು ಹಸಿವಿನಿಂದ ಸತ್ತಿದ್ದಾರೆ ಎಂದು ಅಮಿತ್ ಶಾ ಇಂದು ಬಂದಾ ಜಿಲ್ಲೆಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಹಿರಿಯ ಬಿಜೆಪಿ ನಾಯಕ ರಾಯ್​ಬರೇಲಿಯಲ್ಲಿ ಮತ್ತೊಂದು ಭಾಷಣದಲ್ಲಿ “ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ ಬಾಹುಬಲಿಗಳಿಲ್ಲ, ಬಜರಂಗಬಲಿ ಮಾತ್ರ ಇರಲಿದೆ” ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳು (ಎಸ್‌ಪಿ, ಬಿಎಸ್‌ಪಿ ಮತ್ತು ಕಾಂಗ್ರೆಸ್) ಬಡವರ ಹೆಸರಿನಲ್ಲಿ ಮತಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಅವರು ಆರೋಪಿಸಿದ್ದಾರೆ ಮತ್ತು ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಯಾವುದೇ ಪ್ರಧಾನಿ ಬಡವರಿಗೆ ಒಳ್ಳೆಯದನ್ನು ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಡಕಾಯಿತಿಯಲ್ಲಿ 72% ಕಡಿತವಾಗಿದೆ. 62% ದರೋಡೆ, 31% ಕೊಲೆ, 29% ಅಪಹರಣ, 50% ಅತ್ಯಾಚಾರ ಪ್ರಕರಣಗಳೂ ಕಡಿಮೆಯಾಗಿವೆ ಎಂದು ಬಿಜೆಪಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಉಲ್ಲೇಖಿಸಿದೆ. ಉತ್ತರ ಪ್ರದೇಶದ ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಇಬ್ಬರೂ ಬಿಜೆಪಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಎರಡು ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ಭರವಸೆ ನೀಡಿದರು. “ಬಿಜೆಪಿ ಅಧಿಕಾರಕ್ಕೆ ಬಂದರೆ, ಪ್ರತಿ ವರ್ಷ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು, ಹೋಳಿ ಮತ್ತು ದೀಪಾವಳಿಯಂದು ಎಲ್​ಪಿಜಿ ಸಿಲಿಂಡರ್​ಗಳನ್ನು ನೀಡಲಾಗುವುದು, ಹಾಗೇ ಪದವಿ ಓದುವ ಯುವತಿಯರಿಗೆ ಸ್ಕೂಟಿ ನೀಡುತ್ತೇವೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: UP Elections 2022: ಮೂರನೇ ಹಂತದ ಮತದಾನಕ್ಕೆ ಉತ್ತರ ಪ್ರದೇಶ ಸಜ್ಜು; ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ?

Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ