UP Elections 2022: ಮೂರನೇ ಹಂತದ ಮತದಾನಕ್ಕೆ ಉತ್ತರ ಪ್ರದೇಶ ಸಜ್ಜು; ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ?

Uttar Pradesh Assembly Polls: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯ 7 ಹಂತಗಳ ಪೈಕಿ ಭಾನುವಾರ ಮೂರನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 627 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

UP Elections 2022: ಮೂರನೇ ಹಂತದ ಮತದಾನಕ್ಕೆ ಉತ್ತರ ಪ್ರದೇಶ ಸಜ್ಜು; ಈ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ?
ಯೋಗಿ ಆದಿತ್ಯನಾಥ್- ಅಖಿಲೇಶ್ ಯಾದವ್
Follow us
S Chandramohan
| Updated By: ಸುಷ್ಮಾ ಚಕ್ರೆ

Updated on: Feb 19, 2022 | 5:15 PM

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭೆಯ (Uttar Pradesh Assembly Polls) 7 ಹಂತದ ಚುನಾವಣೆಯ ಪೈಕಿ 3ನೇ ಹಂತದ ಮತದಾನ ನಾಳೆ (ಭಾನುವಾರ) ನಡೆಯಲಿದೆ. ನಾಳೆ 59 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 627 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಮೂರನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಜಾತಿ ಲೆಕ್ಕಾಚಾರ ಹೇಗಿದೆ? 2017ರ ಚುನಾವಣೆಯಲ್ಲಿ ಯಾವ ಪಕ್ಷದ ಕೈ ಮೇಲಾಗಿತ್ತು? ಇದರ ಪೂರ್ತಿ ವಿವರ ಇಲ್ಲಿದೆ ನೋಡಿ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ 7 ಹಂತಗಳ ಪೈಕಿ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ಮತದಾನ (Election) ನಡೆಯಲಿದೆ.

ಉತ್ತರ ಪ್ರದೇಶ ವಿಧಾನಭಾ ಚುನಾವಣೆಯ ಮೂರನೇ ಹಂತದ ಪ್ರಚಾರ ಶುಕ್ರವಾರ ಅಂತ್ಯಗೊಂಡಿದ್ದು, ಮತದಾರರನ್ನು ಸೆಳೆಯಲು ಪಕ್ಷಗಳ ಹಿರಿಯ ನಾಯಕರು ಅಂತಿಮ ಪ್ರಯತ್ನ ನಡೆಸುತ್ತಿದ್ದಾರೆ. ಮೂರನೇ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ನಾಳೆ ಮತದಾನ ನಡೆಯುವ ಜಿಲ್ಲೆಗಳೆಂದರೆ ಹತ್ರಾಸ್, ಫಿರೋಜಾಬಾದ್, ಇಟಾವ್, ಕಾಸ್ಗಂಜ್, ಮೈನಾಪುರಿ, ಫಾರೂಕಾಬಾದ್, ಕನೂಜ್, ಇಟಾವಾ, ಅರೋರಿಯಾ, ಕಾನ್ಪುರ ನಗರ, ಗ್ರಾಮೀಣಾ, ಜಲೌನ್, ಜಾನ್ಸಿ, ಲಲಿತ್‌ಪುರ, ಹಮೀರಪುರ, ಮಹೋಬಾ ಜಿಲ್ಲೆಗಳು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧಿಸುತ್ತಿರುವ ಕರ್ಹಾಲ್ ವಿಧಾನಸಭಾ ಕ್ಷೇತ್ರಕ್ಕೆ ಭಾನುವಾರ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಕ್ಷೇತ್ರದಿಂದ ಬಿಜೆಪಿ ಪಕ್ಷವು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಾಘೇಲ್ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಭಾನುವಾರ ನಡೆಯಲಿರುವ ಮತದಾನವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರ ಭವಿಷ್ಯವನ್ನು ನಿರ್ಧರಿಸಲಿದೆ. ಶಿವಪಾಲ್ ಯಾದವ್ ತಮ್ಮ ಸಾಂಪ್ರದಾಯಿಕ ಜಸ್ವಂತ್‌ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಶುಕ್ರವಾರ ಮೂರನೇ ಹಂತದ ಪ್ರಚಾರ ಮುಗಿಯುವ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾನ್ಪುರದಲ್ಲಿ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಜಲೌನ್, ಅರೋರಿಯಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಸಮಾಜವಾದಿ ಪಕ್ಷದ ಕುಲಪತಿ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ ಪುತ್ರ ಅಖಿಲೇಶ್ ಯಾದವ್ ಪರ ಕರ್ಹಾಲ್​ನಲ್ಲಿ ಮತ ಯಾಚಿಸಿದರು. ಕರ್ಹಾಲ್‌ನ ಎಲ್ಲಾ ಬೂತ್‌ಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿ ಬಿಜೆಪಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು.

ಈ ಹಂತದಲ್ಲಿ ಕಣದಲ್ಲಿರುವ ಪ್ರಮುಖ ವ್ಯಕ್ತಿಗಳೆಂದರೆ, ಕಾನ್ಪುರದ ಮಹಾರಾಜಪುರ ಕ್ಷೇತ್ರದಲ್ಲಿ ಬಿಜೆಪಿಯ ಸತೀಶ್ ಮಹಾನಾ ಮತ್ತು ರಾಮವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್) ಮತ್ತು ಫರೂಕಾಬಾದ್ ಸದಾರ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಲೂಯಿಸ್ ಖುರ್ಷಿದ್. ಲೂಯಿಸ್ ಖುರ್ಷಿದ್ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ. ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಬಿಜೆಪಿ ಟಿಕೆಟ್‌ನಲ್ಲಿ ಕನ್ನೌಜ್ ಸದರ್‌ನಿಂದ ಸ್ಪರ್ಧಿಸುತ್ತಿದ್ದು, ಉತ್ತರ ಪ್ರದೇಶದ ಸಚಿವ ರಾಮನರೇಶ್ ಅಗ್ನಿಹೋತ್ರಿ ಕೂಡ ಈ ಹಂತದಲ್ಲಿ ಕಣದಲ್ಲಿದ್ದಾರೆ. 2017ರ ಚುನಾವಣೆಯಲ್ಲಿ 59 ಸ್ಥಾನಗಳ ಪೈಕಿ ಬಿಜೆಪಿ 49 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ 9 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಕಾಂಗ್ರೆಸ್ 1 ಸ್ಥಾನವನ್ನು ಪಡೆದಿದ್ದರೆ, ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಶೂನ್ಯ ಸಂಪಾದನೆ ಮಾಡಿತ್ತು.

ಭಾನುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6ರವರೆಗೆ ಚುನಾವಣೆ ನಡೆಯಲಿದೆ. ಭಾನುವಾರ ಮತದಾನ ನಡೆಯಲಿರುವ 16 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಲ್ಲಿ ಯಾದವ್-ಮುಸ್ಲಿಂ ಸಮುದಾಯ ಪ್ರಬಲವಾಗಿದೆ. 59 ವಿಧಾನಸಭಾ ಕ್ಷೇತ್ರಗಳ ಪೈಕಿ 29 ವಿಧಾನಸಭಾ ಕ್ಷೇತ್ರಗಳಲ್ಲಿ ಯಾದವ್-ಮುಸ್ಲಿಂ ಸಮುದಾಯದ ಜನಸಂಖ್ಯೆಯೇ ಶೇ.40ರಷ್ಟಿದೆ. ಹೀಗಾಗಿ, ಈ ಹಂತದ ಕ್ಷೇತ್ರಗಳಲ್ಲಿ ಎಸ್ಪಿ ಮುನ್ನಡೆ ಪಡೆಯುತ್ತದೆ ಎಂಬ ವಿಶ್ವಾಸದಲ್ಲಿ ಸಮಾಜವಾದಿ ಪಕ್ಷದ ನಾಯಕರಿದ್ದಾರೆ. ಆದರೆ, ಬಿಜೆಪಿ ನಾಯಕರು ಅಖಿಲೇಶ್ ಯಾದವ್ ಕೋಟೆಗೆ ಲಗ್ಗೆ ಹಾಕಲು ಹರಸಾಹಸ ಪಟ್ಟಿದ್ದಾರೆ. ಅಖಿಲೇಶ್ ಯಾದವ್ ಸ್ಪರ್ಧಿಸಿರುವ ಕರ್ಹಾಲ್ ಕ್ಷೇತ್ರದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ಕರ್ಹಾಲ್ ಕ್ಷೇತ್ರವೊಂದರ ಗೆಲುವು 300 ಕ್ಷೇತ್ರದ ಗೆಲುವಿಗೆ ಸಮ ಎಂದು ಹೇಳಿದ್ದಾರೆ. 59 ಕ್ಷೇತ್ರಗಳಲ್ಲಿ ಓಬಿಸಿ ಹಾಗೂ ಮೇಲ್ವರ್ಗದ ಬ್ರಾಹ್ಮಣ ಸಮುದಾಯದ ಮತಗಳು ಕೂಡ ನಿರ್ಣಾಯಕವಾಗಿದೆ. ಲೋಧ, ಕಾಯಸ್ಥ, ದಲಿತ ಜಾಟವ ಮತಗಳು ಕೂಡ ನಿರ್ಣಾಯಕವಾಗಿವೆ. ಈ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈ ಸಮುದಾಯಗಳು ತಮ್ಮ ಪಕ್ಷದ ಪರವಾಗಿ ಮತ ಚಲಾಯಿಸುತ್ತಾರೆ ಎಂಬ ನಂಬಿಕೆಯಲ್ಲಿ ಬಿಜೆಪಿ ನಾಯಕರಿದ್ದಾರೆ.

ಕೆಲವು ಬಡಾವಣೆಗಳಲ್ಲಿ ಬಿಜೆಪಿ ಮತ ಕೇಳಿ ಪ್ರಚಾರ ನಡೆಸಿದರೆ ಬಳಿಕ ಮತದಾರರು, ಎಸ್​ಪಿ ಬೆಂಬಲಿಗರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ. ಈ ಕಾರಣದಿಂದ ತಮ್ಮ ಗಲ್ಲಿ, ಬಡಾವಣೆಯಲ್ಲಿ ಪ್ರಚಾರಕ್ಕೆ ಬರಬೇಡಿ, ನಾವು ನಿಮಗೆ ಮತ ಕೊಡುತ್ತೇವೆ ಎಂದು ಜನರು ಹೇಳಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮೂರನೇ ಹಂತದ ಮತದಾನ ನಡೆಯುವ ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಅಖಿಲೇಶ್ ಯಾದವ್ ಹಾಗೂ ಯೋಗಿ ಆದಿತ್ಯನಾಥ್ ಇಬ್ಬರಿಗೂ ಬಹುಮತ ಪಡೆಯಲು ಅನಿವಾರ್ಯವಾಗಿದೆ.

ಇದನ್ನೂ ಓದಿ: ನಾನು ಪುನರಾಯ್ಕೆಯಾದರೆ ಮುಸ್ಲಿಮರು ತಿಲಕ ಧರಿಸುವಂತೆ ಮಾಡುತ್ತೇನೆ: ಉತ್ತರ ಪ್ರದೇಶದ ಬಿಜೆಪಿ ನಾಯಕ

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ