AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಮತದಲ್ಲಿ ಏನಾಗುತ್ತದೆ? ಮತದಾರರಲ್ಲಿ ಕೇಳಿದ ಉತ್ತರ ಪ್ರದೇಶದ ಅಧಿಕಾರಿಗಳು; ಕ್ರಮ ಕೈಗೊಳ್ಳಲು ಅಖಿಲೇಶ್ ಒತ್ತಾಯ

ಮತದಾನದ ಕರ್ತವ್ಯ ನಿರ್ವಹಿಸುವ ಅಧಿಕಾರಿಯೊಬ್ಬರು "ಏಕ್ ವೋಟ್ ಸೆ ಕುಚ್ ಹೋತಾ ಹೈ ಕ್ಯಾ" ಎಂದು ಸಾರ್ವಜನಿಕವಾಗಿ ಹೇಳುವುದು ತುಂಬಾ ಗಂಭೀರವಾದ ವಿಷಯವಾಗಿದೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ತಕ್ಷಣವೇ ಅಮಾನತುಗೊಳಿಸಬೇಕು ಎಂದ ಅಖಿಲೇಶ್.

ಒಂದು ಮತದಲ್ಲಿ ಏನಾಗುತ್ತದೆ? ಮತದಾರರಲ್ಲಿ ಕೇಳಿದ ಉತ್ತರ ಪ್ರದೇಶದ ಅಧಿಕಾರಿಗಳು; ಕ್ರಮ ಕೈಗೊಳ್ಳಲು ಅಖಿಲೇಶ್ ಒತ್ತಾಯ
ಜನರಲ್ಲಿ ಮಾತನಾಡುತ್ತಿರುವ ಮತಗಟ್ಟೆ ಕರ್ತವ್ಯದ ಅಧಿಕಾರಿ
TV9 Web
| Edited By: |

Updated on: Feb 07, 2022 | 6:36 PM

Share

ಲಖನೌ:  ಮತದಾರರಲ್ಲಿ  ಮತವನ್ನು ಬದಲಾಯಿಸುವಂತೆ ಒತ್ತಾಯಿಸಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಭಾನುವಾರ ಚುನಾವಣಾ ಆಯೋಗವನ್ನು(Election Commission) ಒತ್ತಾಯಿಸಿದ್ದಾರೆ. ಅದೇ ವೇಳೆ ತಮ್ಮ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮತದಾನದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು ಎಂದು ಅಖಿಲೇಶ್ ಹೇಳಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯು ಭಾನುವಾರ ಆಗ್ರಾದಲ್ಲಿ ಅಂಗವಿಕಲರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಪ್ರಾರಂಭವಾಯಿತು. ಅಂಚೆ ಮತಪತ್ರಗಳ ಮೂಲಕ ಮತದಾನ ನಡೆಯಿತು.  ಆಗ್ರಾದ ಫತೇಹಾಬಾದ್‌ನಲ್ಲಿ (Fatehabad) ಮತಗಟ್ಟೆ ಅಧಿಕಾರಿಗಳು ಭಾನುವಾರ ಬಿಜೆಪಿಗೆ ಮತ ಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಅಂಗವಿಕಲ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಆ ವ್ಯಕ್ತಿ ಬೇರೆ ಪಕ್ಷಕ್ಕೆ ಮತ ಹಾಕಲು ಬಯಸಿದ್ದರು.  ಬಲವಂತದ ಮತದಾನದ ಕುರಿತು ಸ್ಥಳೀಯರು ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳನ್ನು ಕರೆಸಲಾಯಿತು. ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿರುವ ವಿಡಿಯೊದಲ್ಲಿ, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಮತದಾರರಿಗೆ ಒಂದು ಮತದಿಂದ ವ್ಯತ್ಯಾಸವೇನೂ ಆಗುವುದಿಲ್ಲ ಎಂದು ಹೇಳುವುದನ್ನು ಕೇಳಬಹುದು. ಇದು ಗಂಭೀರ ವಿಷಯವಾಗಿದೆ ಮತ್ತು ಅಂತಹ ಅಧಿಕಾರಿಗಳನ್ನು ಗುರುತಿಸಿ ಅಮಾನತುಗೊಳಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಮತದಾನದ ಕರ್ತವ್ಯ ನಿರ್ವಹಿಸುವ ಅಧಿಕಾರಿಯೊಬ್ಬರು “ಏಕ್ ವೋಟ್ ಸೆ ಕುಚ್ ಹೋತಾ ಹೈ ಕ್ಯಾ” ಎಂದು ಸಾರ್ವಜನಿಕವಾಗಿ ಹೇಳುವುದು ತುಂಬಾ ಗಂಭೀರವಾದ ವಿಷಯವಾಗಿದೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ತಕ್ಷಣವೇ ಅಮಾನತುಗೊಳಿಸಬೇಕು ಎಂದು ಚುನಾವಣಾ ಆಯೋಗದಿಂದ ನಿರೀಕ್ಷಿಸುತ್ತೇನೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಫೆಬ್ರವರಿ 10 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Viral Video: ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರ ಕಪಾಲಕ್ಕೆ ಹೊಡೆಯಲು ಮುಂದಾದ ನಾಯಕ; ಜೋರಾಗಿ ನಕ್ಕ ಅಖಿಲೇಶ್ ಯಾದವ್

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ