Yogi Adityanath: ಉತ್ತರ ಪ್ರದೇಶದಲ್ಲಿ ಐತಿಹಾಸಿಕ ಗೆಲುವಿಗೆ ಸಜ್ಜಾದ ಬಿಜೆಪಿ; ಸಂಜೆ 5ಕ್ಕೆ ಯೋಗಿ ಆದಿತ್ಯನಾಥ್ ಭಾಷಣ

ಸತತ 2ನೇ ಅವಧಿಗೆ ಮುಖ್ಯಮಂತ್ರಿಯಾಗಲಿರುವ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಯೋಗಿ ಆದಿತ್ಯನಾಥ್ ಇಂದು ಸಂಜೆ 5 ಗಂಟೆಗೆ ಲಕ್ನೋದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Yogi Adityanath: ಉತ್ತರ ಪ್ರದೇಶದಲ್ಲಿ ಐತಿಹಾಸಿಕ ಗೆಲುವಿಗೆ ಸಜ್ಜಾದ ಬಿಜೆಪಿ; ಸಂಜೆ 5ಕ್ಕೆ ಯೋಗಿ ಆದಿತ್ಯನಾಥ್ ಭಾಷಣ
ಯೋಗಿ ಆದಿತ್ಯನಾಥ
Follow us
| Updated By: ಸುಷ್ಮಾ ಚಕ್ರೆ

Updated on:Mar 10, 2022 | 4:21 PM

ನವದೆಹಲಿ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಬಿಜೆಪಿ 273 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಮಾಜವಾದಿ ಪಕ್ಷ 124 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುತೇಕ ಸ್ಥಾನಗಳ ಎಣಿಕೆ ಇನ್ನೂ ಬಾಕಿ ಇದೆ. ಆದರೂ ಈ ಬಾರಿಯೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಲ್ಲಿ 12 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸತತ 2ನೇ ಅವಧಿಗೆ ಮುಖ್ಯಮಂತ್ರಿಯಾಗಲಿರುವ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಂಜೆ ಲಕ್ನೋದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದು, 5 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ 276 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ಭಾರೀ ಮತಗಳ ಅಂತರದಿಂದ ಮುಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಇದುವರೆಗೂ ಯಾವ ಮುಖ್ಯಮಂತ್ರಿಯೂ ಸತತವಾಗಿ 2 ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರಲಿಲ್ಲ ಎಂಬುದು ಗಮನಾರ್ಹ ಸಂಗತಿ. ಸದ್ಯದ ಮಾಹಿತಿ ಪ್ರಕಾರ ಉತ್ತರ ಪ್ರದೇಶದಲ್ಲಿ ಬಿಜೆಪಿ 275, ಸಮಾಜವಾದಿ ಪಕ್ಷ 121, ಬಿಎಸ್​ಪಿ 4, ಕಾಂಗ್ರೆಸ್ 2, ಇತರೆ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಅಭಿವೃದ್ಧಿಯತ್ತ ಸಾರ್ವಜನಿಕ ಚಿತ್ತ ನೆಟ್ಟಿದೆ, ಇದು ‘ಮೋದಿ-ಯೋಗಿ’ ಡಬಲ್ ಎಂಜಿನ್ ಸರ್ಕಾರದ ಗೆಲುವು. ಜನರು ಭದ್ರತೆ ಮತ್ತು ಮೂಲಸೌಕರ್ಯಗಳ ವಿಷಯಗಳನ್ನು ಗಮನಿಸಿ ಬಿಜೆಪಿಗೆ ಮತ ಹಾಕಿದ್ದಾರೆ. 30 ವರ್ಷಗಳ ನಂತರ ಒಂದೇ ಪಕ್ಷ ಎರಡನೇ ಬಾರಿಗೆ ಸರ್ಕಾರ ರಚಿಸುತ್ತಿದೆ ಎಂದು ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಪ್ರಯಾಗರಾಜ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಕ್ಷೇತ್ರವಾದ ಗೋರಖ್‌ಪುರದಲ್ಲಿ 2017ರ ಚುನಾವಣೆಯಲ್ಲಿ ಬಿಎಸ್‌ಪಿ ಗೆದ್ದಿದ್ದ ಚಿಲ್ಲುಪರ್ ಕ್ಷೇತ್ರ ಸೇರಿದಂತೆ ಎಲ್ಲಾ ಒಂಬತ್ತು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕೈಂಪಿಯರ್‌ಗಂಜ್, ಪಿಪ್ರೈಚ್, ಗೋರಖ್‌ಪುರ ಗ್ರಾಮಾಂತರ, ಗೋರಖ್‌ಪುರ ಅರ್ಬನ್, ಸಹಜನ್ವಾ, ಖಜಾನಿ, ಚೌರಿ-ಚೌರಾ ಮತ್ತು ಬನ್ಸ್‌ಗಾಂವ್ ಸೇರಿದಂತೆ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗಮನಾರ್ಹ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದರ ನಡುವೆ ಲಕ್ನೋ ಉತ್ತರ, ಲಕ್ನೋ ಸೆಂಟ್ರಲ್ ಮತ್ತು ಮೋಹನ್‌ಲಾಲ್‌ಗಂಜ್ ಸೇರಿದಂತೆ ಮೂರು ಸ್ಥಾನಗಳಲ್ಲಿ ಬಿಜೆಪಿ ಹಿಂದುಳಿದಿದೆ. ಈ ಮೂರು ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮುನ್ನಡೆ ಸಾಧಿಸಿದೆ.

ಯೋಗಿ ಆದಿತ್ಯನಾಥ್ ಅವರು ಗುರುವಾರ ಗೋರಖ್‌ಪುರ ನಗರ ಕ್ಷೇತ್ರದಿಂದ ಸುಮಾರು 31,000 ಮತಗಳಿಂದ ಪ್ರಚಂಡ ಗೆಲುವಿನತ್ತ ಮುನ್ನಡೆದಿದ್ದಾರೆ. ನವೀಕರಿಸಿದ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಆದಿತ್ಯನಾಥ್ ಅವರು 47,427 ಮತಗಳನ್ನು ಗಳಿಸಿದ್ದಾರೆ ಮತ್ತು ಅವರ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಸುಭಾವತಿ ಶುಕ್ಲಾ ಅವರು 16,427 ಮತಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: Yogi Adityanath: ಯೋಗಿಯಿಂದ ನೊಯ್ಡಾದ ಶಾಪ ವಿಮೋಚನೆ​; ಅಪಶಕುನವಾಗಿದ್ದ ಸ್ಥಳಕ್ಕೆ ಹೋದರೂ ಗೆದ್ದ ಸಿಎಂ ಆದಿತ್ಯನಾಥ್!

Yogi Adityanath Profile: ಅಜಯ್ ಸಿಂಗ್ ಬಿಷ್ತ್​​ನಿಂದ ಯೋಗಿ ಆದಿತ್ಯನಾಥ್ ವರೆಗೆ; ಪ್ರಭಾವಿ ನಾಯಕನ ಜೀವನ ಚಿತ್ರಣ ಇಲ್ಲಿದೆ

Published On - 4:20 pm, Thu, 10 March 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ