Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ

ಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ ಪಡಿತರ ನೀಡುತ್ತೇವೆ, ಅದರೊಂದಿಗೆ ವರ್ಷದಲ್ಲಿ ಸಾಸಿವೆ ಎಣ್ಣೆ ಹಾಗೂ ಎರಡು ಸಿಲಿಂಡರ್‌ಗಳನ್ನು ನೀಡುತ್ತೇವೆ. ಬಡವರ ಆರೋಗ್ಯ ಸುಧಾರಿಸಲು ಒಂದು ಕೆಜಿ ತುಪ್ಪವನ್ನು ಸಹ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ
ಅಖಿಲೇಶ್​ ಯಾದವ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 15, 2022 | 5:15 PM

ರಾಯ್ ಬರೇಲಿ: ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ 5 ವರ್ಷಗಳ ಕಾಲ ಉಚಿತ ರೇಷನ್ ಜೊತೆಗೆ ಒಂದು ಕೆ.ಜಿ ತುಪ್ಪ ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಭರವಸೆ ನೀಡಿದ್ದಾರೆ. ‘ಈಗಾಗಲೇ ರೇಷನ್ ಪಡೆಯುತ್ತಿರುವ ಬಡವರಿಗೆ ಚುನಾವಣೆಯವರೆಗೂ ರೇಷನ್ ಸಿಗುತ್ತದೆ, ಚುನಾವಣೆ ನಂತರ ರೇಷನ್ ಸಿಗುವುದಿಲ್ಲ. ನವೆಂಬರ್​ವರೆಗೆ ರೇಷನ್ ನೀಡಬೇಕಿತ್ತು. ಆದರೆ, ಉತ್ತರ ಪ್ರದೇಶದ ಚುನಾವಣೆ ಘೋಷಣೆಯಾದ ಬಳಿಕ ಮಾರ್ಚ್​ವರೆಗೆ ನೀಡುವುದಾಗಿ ಘೋಷಿಸಲಾಗಿದೆ. ಬಿಜೆಪಿ ಸರ್ಕಾರ ತಾನು ನೀಡುತ್ತಿರುವ ಉಚಿತ ರೇಷನ್ ಯೋಜನೆಯನ್ನು ನಿಲ್ಲಿಸಲು ನಿರ್ಧರಿಸಿದೆ’ ಎಂದು ಅಖಿಲೇಶ್ ಯಾದವ್ ಟೀಕಿಸಿದ್ದಾರೆ.

ಇಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಮಾರ್ಚ್‌ನಲ್ಲಿ ಚುನಾವಣೆ ಮುಗಿಯುತ್ತದೆ ಎಂದು ತಿಳಿದಿರುವ ಕಾರಣ ದೆಹಲಿಯ ಬಜೆಟ್‌ನಲ್ಲಿ ಪಡಿತರಕ್ಕಾಗಿ ಹಣವನ್ನು ಮೀಸಲಿಟ್ಟಿಲ್ಲ. ಎಸ್‌ಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರಿಗೆ ಪಡಿತರ ನೀಡುತ್ತೇವೆ, ಅದರೊಂದಿಗೆ ಸಾಸಿವೆ ಎಣ್ಣೆ ಹಾಗೂ ಎರಡು ಸಿಲಿಂಡರ್‌ಗಳನ್ನು ನೀಡುತ್ತೇವೆ. ಬಡವರ ಆರೋಗ್ಯ ಸುಧಾರಿಸಲು ಒಂದು ಕೆಜಿ ತುಪ್ಪವನ್ನು ಸಹ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರವು ವಿತರಿಸುತ್ತಿರುವ ಪಡಿತರ ಗುಣಮಟ್ಟವು ಕಳಪೆಯಾಗಿದೆ ಮತ್ತು ಉಪ್ಪಿನಲ್ಲಿ ಗಾಜಿನ ಕಣಗಳು ಕಂಡುಬಂದಿರುವ ವರದಿಗಳಿವೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ 11 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಮತ್ತು ಎಸ್‌ಪಿ ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವಕರಿಗೆ ಉದ್ಯೋಗಗಳನ್ನು ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿದ್ದರು, ಅವರ ಹಿರಿಯ ನಾಯಕರು ಕರಪತ್ರ ಹಂಚುತ್ತಿದ್ದರು. ಆದರೆ ಕೆಲವು ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ತೋರಿಸಿದ ಕಾರಣ ಈಗ ಪ್ರಚಾರ ಸ್ಥಗಿತಗೊಳಿಸಲಾಗಿದೆ ಎಂದು ಯಾದವ್ ಟೀಕಿಸಿದ್ದಾರೆ.

ಹಾಗೇ, ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಈ ಡಬಲ್ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರವೂ ದುಪ್ಪಟ್ಟಾಗಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Uttar Pradesh Elections 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ

UP Assembly Polls: ಯೋಗಿ ಆದಿತ್ಯನಾಥ್ ನನ್ನನ್ನು ಕೊಲ್ಲಲು ಪ್ಲಾನ್ ಮಾಡಿದ್ದಾರೆ; ಓಂ ಪ್ರಕಾಶ್ ರಾಜಭಾರ್ ಗಂಭೀರ ಆರೋಪ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್