Uttar Pradesh Elections 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ

ಬಿಜೆಪಿ ನಾಯಕ ಹರೇಂದ್ರ ಕುಮಾರ್ ಭಾನುವಾರ ಸಂಜೆ ಸಂಭಾಲ್‌ನಲ್ಲಿ ತಮ್ಮ ಸಹಚರರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಸಮಾಜವಾದಿ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Uttar Pradesh Elections 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 14, 2022 | 2:09 PM

ನವದೆಹಲಿ: ಉತ್ತರ ಪ್ರದೇಶದ (Uttar Pradesh Assembly Elections) ಸಂಭಾಲ್ ಜಿಲ್ಲೆಯಲ್ಲಿ ಅಸ್ಮೋಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೇಂದ್ರ ಅಲಿಯಾಸ್ ರಿಂಕು ಅವರ ಕಾರಿನ ಮೇಲೆ ದಾಳಿ ನಡೆದಿದೆ. ತಮ್ಮ ಮೇಲೆ ದಾಳಿ ನಡೆದಿದ್ದರಿಂದ ಬಿಜೆಪಿ (BJP) ಅಭ್ಯರ್ಥಿ ಹರೇಂದ್ರ ಹಾಗೂ ಅವರ ಬೆಂಬಲಿಗರು ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದರು. ಘಟನೆ ನಡೆದ ಸ್ಥಳದಿಂದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ದಾಳಿಯಲ್ಲಿ ರಿಂಕು ಅವರ ಕಾರಿಗೆ ತೀವ್ರ ಹಾನಿಯಾಗಿದೆ. ಉತ್ತರ ಪ್ರದೇಶ ರಾಜ್ಯದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಉತ್ತರ ಪ್ರದೇಶದ ಸಹರಾನ್‌ಪುರ, ಬಿಜ್ನೋರ್, ಮೊರಾದಾಬಾದ್, ಸಂಭಾಲ್, ರಾಂಪುರ್, ಅಮ್ರೋಹಾ, ಬುಡೌನ್, ಬರೇಲಿ ಮತ್ತು ಷಹಜಹಾನ್‌ಪುರ ಕ್ಷೇತ್ರಗಳಲ್ಲಿ ಈ ಹಂತದಲ್ಲಿ 586 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 55 ಸ್ಥಾನಗಳ ಪೈಕಿ 2017ರಲ್ಲಿ ಬಿಜೆಪಿ 38ರಲ್ಲಿ ಗೆಲುವು ಸಾಧಿಸಿದ್ದರೆ ಸಮಾಜವಾದಿ ಪಕ್ಷ 15 ಮತ್ತು ಕಾಂಗ್ರೆಸ್ 2 ಸ್ಥಾನ ಗಳಿಸಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದವು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಗಂಟೆಗಳ ಮೊದಲು, ಬಿಜೆಪಿ ನಾಯಕ ಹರೇಂದ್ರ ಕುಮಾರ್ ಭಾನುವಾರ ಸಂಜೆ ಸಂಭಾಲ್‌ನಲ್ಲಿ ತಮ್ಮ ಸಹಚರರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಸಮಾಜವಾದಿ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲ ಬಾರಿಗೆ ಅಭ್ಯರ್ಥಿಯಾಗಿರುವ ಹರೇಂದ್ರ ಕುಮಾರ್ ಅವರು ಭಾರತೀಯ ಜನತಾ ಪಕ್ಷದ ಟಿಕೆಟ್‌ನಲ್ಲಿ ಸಂಭಾಲ್‌ನ ಅಸ್ಮೋಲಿ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಖೇರ್ನಿ ಪೊಲೀಸ್ ಔಟ್‌ಪೋಸ್ಟ್ ಬಳಿ ಅವರ ವಾಹನವನ್ನು ಪರಿಶೀಲಿಸುತ್ತಿದ್ದಾಗ ಸಮಾಜವಾದಿ ಪಕ್ಷದ ಕಾರ್ಯಕರ್ತರು 39 ವರ್ಷದ ಬಿಜೆಪಿ ಅಭ್ಯರ್ಥಿ ಮತ್ತು ಅವರ ಸಹಚರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಲು ಮುಂದಾದಾಗ ದಾಳಿಕೋರರು ಪೊಲೀಸ್ ತಂಡದ ಮೇಲೂ ದಾಳಿ ನಡೆಸಿದ್ದು, ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಇದನ್ನೂ ಓದಿ: Assembly Election 2022 Voting Live: ಗೋವಾ, ಉತ್ತರಾಖಂಡ್, ಉತ್ತರ ಪ್ರದೇಶ ಚುನಾವಣೆ; ಅಧಿಕಾರಿಗಳ ವಿರುದ್ಧ ಅಖಿಲೇಶ್ ಯಾದವ್ ದೂರು

UP Election 2022 Phase 1 Voting LIVE updates: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಮೊದಲ ಹಂತದ ಮತದಾನ ಮುಕ್ತಾಯ, ಮತ ಹಾಕದ ಆರ್​ಎಲ್​ಡಿ ಮುಖ್ಯಸ್ಥ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್